IND vs ENG: ಟಾಸ್ ಗೆದ್ದ ಇಂಗ್ಲೆಂಡ್: ಟೀಮ್ ಇಂಡಿಯಾ ಪರ ದೇವದತ್ ಪಡಿಕ್ಕಲ್ ಪಾದಾರ್ಪಣೆ.

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಣ 5ನೇ ಟೆಸ್ಟ್ ಪಂದ್ಯ ಶುರುವಾಗಿದೆ. ಧರ್ಮಶಾಲಾದ ಹೆಚ್​ಪಿಸಿಎ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಟೀಮ್ ಇಂಡಿಯಾ ಮೊದಲು ಬೌಲಿಂಗ್ ಮಾಡಲಿದೆ. ಇನ್ನು ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಪರ ಕನ್ನಡಿಗ ದೇವದತ್ ಪಡಿಕ್ಕಲ್ ಪಾದಾರ್ಪಣೆ ಮಾಡಿದ್ದಾರೆ. ಅಲ್ಲದೆ ರಜತ್ ಪಾಟಿದಾರ್ ಅವರನ್ನು ಆಡುವ ಬಳಗದಿಂದ ಕೈ ಬಿಡಲಾಗಿದೆ.

ಹಾಗೆಯೇ ರಾಂಚಿ ಟೆಸ್ಟ್ ವೇಳೆ ವಿಶ್ರಾಂತಿ ಪಡೆದಿದ್ದ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಈ ಪಂದ್ಯದಲ್ಲಿ ಕಣಕ್ಕಿಳಿದಿದ್ದು, ಆಕಾಶ್ ದೀಪ್ ಪ್ಲೇಯಿಂಗ್ ಇಲೆವೆನ್​ನಿಂದ ಹೊರಬಿದ್ದಿದ್ದಾರೆ. ಇನ್ನು ಇಂಗ್ಲೆಂಡ್ ಆಡುವ ಬಳಗದಲ್ಲೂ ಒಂದು ಬದಲಾವಣೆ ಮಾಡಲಾಗಿದ್ದು, 4ನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಒಲೀ ರಾಬಿನ್ಸನ್ ಈ ಪಂದ್ಯದಿಂದ ಹೊರಗುಳಿದಿದ್ದಾರೆ. ಅವರ ಬದಲಿಗೆ ವೇಗದ ಬೌಲರ್ ಮಾರ್ಕ್​ ವುಡ್​ ಕಣಕ್ಕಿಳಿದಿದ್ದಾರೆ.

ಭಾರತ ಪ್ಲೇಯಿಂಗ್ 11: ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ದೇವದತ್ ಪಡಿಕ್ಕಲ್, ರವೀಂದ್ರ ಜಡೇಜಾ, ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group: https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *