IND vs ENG: ವಿಶಾಖಪಟ್ಟಣಂನ ಡಾ. ವೈಎಸ್ ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ ಇಂಗ್ಲೆಂಡ್ ತಂಡವನ್ನು 253 ರನ್ಗಳಿಗೆ ಆಲೌಟ್ ಮಾಡುವಲ್ಲಿ ಟೀಂ ಇಂಡಿಯಾ ಯಶಸ್ವಿಯಾಗಿದೆ.

ವಿಶಾಖಪಟ್ಟಣಂನ ಡಾ. ವೈಎಸ್ ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ ಇಂಗ್ಲೆಂಡ್ ತಂಡವನ್ನು 253 ರನ್ಗಳಿಗೆ ಆಲೌಟ್ ಮಾಡುವಲ್ಲಿ ಟೀಂ ಇಂಡಿಯಾ ಯಶಸ್ವಿಯಾಗಿದೆ. ಈ ಮೂಲಕ 143 ರನ್ಗಳ ಮುನ್ನಡೆ ಕಾಯ್ದುಕೊಂಡಿದೆ. ಇಂಗ್ಲೆಂಡ್ ಪರ ಆರಂಭಿಕ ಝಾಕ್ ಕ್ರೌಲಿಅತ್ಯಧಿಕ 76 ರನ್ಗಳ ಇನ್ನಿಂಗ್ಸ್ ಆಡಿದರೆ, ನಾಯಕ ಬೆನ್ ಸ್ಟೋಕ್ಸ್ 47 ರನ್ಗಳ ಕೊಡುಗೆ ನೀಡಿದರು. ಬೌಲಿಂಗ್ನಲ್ಲಿ ಟೀಂ ಇಂಡಿಯಾ ಪರ ಮಿಂಚಿದ ಜಸ್ಪ್ರೀತ್ ಬುಮ್ರಾ 6 ವಿಕೆಟ್ ಪಡೆದರೆ, ಕುಲ್ದೀಪ್ ಯಾದವ್ 3 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.
6 ವಿಕೆಟ್ ಪಡೆದ ಬುಮ್ರಾ
ಎರಡನೇ ಟೆಸ್ಟ್ ಪಂದ್ಯದ ಎರಡನೇ ದಿನದಾಟದ ಮೊದಲ ಸೆಷನ್ನಲ್ಲಿ ಟೀಂ ಇಂಡಿಯಾ 396 ರನ್ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿತ್ತು. ಇದಾದ ಬಳಿಕ ಎರಡನೇ ದಿನವೇ ಮೊದಲ ಇನ್ನಿಂಗ್ಸ್ನಲ್ಲಿ ಇಂಗ್ಲೆಂಡ್ ತಂಡವನ್ನು ಟೀಂ ಇಂಡಿಯಾ ಆಲೌಟ್ ಮಾಡಿದೆ. ಜಸ್ಪ್ರೀತ್ ಬುಮ್ರಾ ಅವರ ಮಾರಕ ದಾಳಿಗೆ ನಲುಗಿದ ಇಂಗ್ಲೆಂಡ್ ಇನ್ನಿಂಗ್ಸ್ 55.5 ಓವರ್ಗಳಲ್ಲಿ 253 ರನ್ಗಳಿಗೆ ಕೊನೆಗೊಂಡಿತು. ಈ ಮೂಲಕ ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್ನಲ್ಲಿ 143 ರನ್ಗಳ ಬೃಹತ್ ಮುನ್ನಡೆ ಸಾಧಿಸಿದೆ. ಇಂಗ್ಲೆಂಡ್ ಪರ ಝಾಕ್ ಕ್ರೌಲಿ 76 ಮತ್ತು ಬೆನ್ ಸ್ಟೋಕ್ಸ್ 47 ರನ್ ಗಳಿಸಿದರು. ಜಸ್ಪ್ರೀತ್ ಬುಮ್ರಾ ಟೀಂ ಇಂಡಿಯಾ ಪರ ಅತಿ ಹೆಚ್ಚು 6 ವಿಕೆಟ್ಗಳನ್ನು ಕಬಳಿಸಿದ್ದಾರೆ.
ಇಂಗ್ಲೆಂಡ್ ಬ್ಯಾಟಿಂಗ್ ಹೀಗಿತ್ತು
ಟೀಂ ಇಂಡಿಯಾ ನೀಡಿದ 396 ರನ್ಗಳಿಗೆ ಉತ್ತರವಾಗಿ ಇಂಗ್ಲೆಂಡ್ ಮೊದಲ 2 ವಿಕೆಟ್ಗೆ ಅರ್ಧಶತಕದ ಜೊತೆಯಾಟವಾಡಿತು. ಆರಂಭಿಕ ಜೋಡಿ ಝಾಕ್ ಕ್ರೌಲಿ-ಬೆನ್ ಡಕೆಟ್ 59 ರನ್ ಜೊತೆಯಾಟವಾಡಿದರು. ಝಾಕ್ ಕ್ರೌಲಿ ಮತ್ತು ಒಲ್ಲಿ ಪೋಪ್ ಇಬ್ಬರೂ ಎರಡನೇ ವಿಕೆಟ್ಗೆ 55 ರನ್ ಸೇರಿಸಿದರು. ಆದರೆ ಆ ಬಳಿಕ ಟೀಂ ಇಂಡಿಯಾದ ಬೌಲರ್ಗಳು ನಿಗದಿತ ಅಂತರದಲ್ಲಿ ಇಂಗ್ಲೆಂಡ್ ತಂಡದ ವಿಕೆಟ್ ಪಡೆದು ತಂಡವನ್ನು ಬೇಗನೇ ಆಲೌಟ್ ಮಾಡಿದರು. ಝಾಕ್ ಕ್ರೌಲಿ ಮತ್ತು ಬೆನ್ ಸ್ಟೋಕ್ಸ್ ಹೊರತುಪಡಿಸಿ, ಇಂಗ್ಲೆಂಡ್ನಿಂದ ಯಾರಿಗೂ ದೊಡ್ಡ ಇನ್ನಿಂಗ್ಸ್ ಆಡಲು ಸಾಧ್ಯವಾಗಲಿಲ್ಲ. ಇಂಗ್ಲೆಂಡ್ ತಂಡದ ನಾಲ್ವರು ಎರಡಂಕಿ ತಲುಪುವ ಮುನ್ನವೇ ವಿಕೆಟ್ ಒಪ್ಪಿಸಿದರು. ಇದು ಇಂಗ್ಲೆಂಡ್ ತಂಡಕ್ಕೆ ಹಿನ್ನಡೆಯನ್ನುಂಟು ಮಾಡಿತು.
ಎರಡನೇ ಇನ್ನಿಂಗ್ಸ್ ಆರಂಭಿಸಿದ ಭಾರತ
ಜಸ್ಪ್ರೀತ್ ಬುಮ್ರಾ ಟೀಂ ಇಂಡಿಯಾದಿಂದ 6 ವಿಕೆಟ್ ಪಡೆದು ಟೆಸ್ಟ್ ಕ್ರಿಕೆಟ್ನಲ್ಲಿ 150 ವಿಕೆಟ್ಗಳ ಮೈಲಿಗಲ್ಲನ್ನು ದಾಟಿದ ಭಾರತದ 17ನೇ ಬೌಲರ್ ಎನಿಸಿಕೊಂಡರು. ಬುಮ್ರಾ ಹೊರತುಪಡಿಸಿ ಕುಲ್ದೀಪ್ ಯಾದವ್ 3 ವಿಕೆಟ್ ಪಡೆದರೆ, ಅಕ್ಷರ್ ಪಟೇಲ್ 1 ವಿಕೆಟ್ ಪಡೆದರು. ಇದೀಗ ಎರಡನೇ ದಿನವೇ ಎರಡನೇ ಇನ್ನಿಂಗ್ಸ್ ಆರಂಭಿಸಿರುವ ಭಾರತ ಯಾವುದೇ ವಿಕೆಟ್ ನಷ್ಟವಿಲ್ಲದೆ 28 ರನ್ ಕಲೆಹಾಕಿದೆ. ಆರಂಭಿಕರಾದ ಯಶಸ್ವಿ ಜೈಸ್ವಾಲ್ 15 ರನ್ ಹಾಗೂ ನಾಯಕ ರೋಹಿತ್ ಶರ್ಮಾ 13 ರನ್ ಸಿಡಿಸಿ ಮೂರನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1