IND vs ENG: ಜೈಸ್ವಾಲ್- ಗಿಲ್ ಬೊಂಬಾಟ್ ಬ್ಯಾಟಿಂಗ್; 3ನೇ ದಿನ ಭಾರತದ ಮೇಲುಗೈ

Sports: ರಾಜ್‌ಕೋಟ್‌ನಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಎರಡನೇ ಇನ್ನಿಂಗ್ಸ್ ಆರಂಭಿಸಿರುವ ಟೀಂ ಇಂಡಿಯಾ ನಾಲ್ಕನೇ ದಿನದಾಟದ ಅಂತ್ಯಕ್ಕೆ 322 ರನ್‌ಗಳ ಮುನ್ನಡೆ ಕಾಯ್ದುಕೊಂಡಿದೆ.

ರಾಜ್‌ಕೋಟ್‌ನಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಎರಡನೇ ಇನ್ನಿಂಗ್ಸ್ ಆರಂಭಿಸಿರುವ ಟೀಂ ಇಂಡಿಯಾ ನಾಲ್ಕನೇ ದಿನದಾಟದ ಅಂತ್ಯಕ್ಕೆ 322 ರನ್‌ಗಳ ಮುನ್ನಡೆ ಕಾಯ್ದುಕೊಂಡಿದೆ.. ತಂಡದ ಪರ ಆರಂಭಿಕ ಯಶಸ್ವಿ ಜೈಸ್ವಾಲ್ ಎರಡನೇ ಇನ್ನಿಂಗ್ಸ್​ನಲ್ಲಿ ಅಜೇಯ ಶತಕ ಸಿಡಿಸಿದರೆ, ಶುಭ್​ಮನ್ ಗಿಲ್ ಅಜೇಯ ಅರ್ಧಶತಕ ಕಲೆಹಾಕಿದ್ದಾರೆ. ಈ ಇಬ್ಬರ ಬೊಂಬಾಟ್​ ಬ್ಯಾಟಿಂಗ್​ನಿಂದಾಗಿ ಪ್ರಸ್ತುತ ಟೀಂ ಇಂಡಿಯಾ, ಇಂಗ್ಲೆಂಡ್ ವಿರುದ್ಧ ಮೇಲುಗೈ ಸಾಧಿಸಿದೆ. ಅಂತಿಮವಾಗಿ ನಾಲ್ಕನೇ ದಿನದಾಟದಂತ್ಯಕ್ಕೆ ಟೀಂ ಇಂಡಿಯಾ 2 ವಿಕೆಟ್ ಕಳೆದುಕೊಂಡು 196 ಕಲೆಹಾಕಿದೆ.

ಸೊನ್ನೆ ಸುತ್ತಿದ ರಜತ್

ಆದರೆ ಆತಂಕಕ್ಕಾರಿ ಸುದ್ದಿಯೆಂದರೆ ದಿನದಾಟದ ಅಂತ್ಯಕ್ಕೂ ಮೊದಲು, ಯಶಸ್ವಿ ಜೈಸ್ವಾಲ್ ಬೆನ್ನಿನಲ್ಲಿ ಸಮಸ್ಯೆ ಇದ್ದ ಕಾರಣ ಗಾಯಗೊಂಡು ನಿವೃತ್ತರಾದರು. ಅವರ ನಂತರ ಬಂದ ಬ್ಯಾಟಿಂಗ್​ಗೆ ಬಂದ ರಜತ್ ಪಾಟಿದಾರ್ 10 ಎಸೆತಗಳನ್ನು ಎದುರಿಸಿ ಖಾತೆ ತೆರೆಯದೆ ಔಟಾದರು. ಹೀಗಾಗಿ ಟೀಂ ಇಂಡಿಯಾ ಕುಲ್ದೀಪ್ ಯಾದವ್ ಅವರನ್ನು ನೈಟ್ ವಾಚ್​ಮನ್ ಆಗಿ ಕಳುಹಿಸಿದ್ದು, ಅವರು ಪ್ರಸ್ತುತ ಶುಭ್​ಮನ್ ಗಿಲ್ ಅವರೊಂದಿಗೆ ಅಜೇಯರಾಗಿದ್ದಾರೆ.

319 ರನ್‌ಗಳಿಗೆ ಇಂಗ್ಲೆಂಡ್ ಆಲೌಟ್

ಇದಕ್ಕೂ ಮುನ್ನ ಭಾರತ ತಂಡ ಇಂಗ್ಲೆಂಡ್ ತಂಡವನ್ನು 319 ರನ್‌ಗಳಿಗೆ ಆಲೌಟ್ ಮಾಡಿತ್ತು. ರವಿಚಂದ್ರನ್ ಅಶ್ವಿನ್ ಅನುಪಸ್ಥಿತಿಯ ನಡುವೆಯೂ ಭಾರತ ತಂಡ, ಇಂಗ್ಲೆಂಡ್ ತಂಡವನ್ನು 319 ರನ್‌ಗಳಿಗೆ ಆಲೌಟ್ ಮಾಡುವ ಮೂಲಕ 126 ರನ್‌ಗಳ ಮುನ್ನಡೆ ಸಾಧಿಸಿತು. ಭಾರತ ತಂಡದ ಪರವಾಗಿ ಕುಲ್ದೀಪ್ ಯಾದವ್ (2) ಅಗ್ರ ಕ್ರಮಾಂಕದಲ್ಲಿ 2 ದೊಡ್ಡ ವಿಕೆಟ್ ಪಡೆಯುವ ಮೂಲಕ ಇಂಗ್ಲೆಂಡ್ ಕುಸಿತಕ್ಕೆ ನಾಂದಿ ಹಾಡಿದರು. ನಂತರ ಮಾರಕ ದಾಳಿ ಆರಂಭಿಸಿದ ಮೊಹಮ್ಮದ್ ಸಿರಾಜ್ (4)-ರವೀಂದ್ರ ಜಡೇಜಾ (2) ಉಳಿದ ಬ್ಯಾಟ್ಸ್‌ಮನ್‌ಗಳನ್ನು ಪೆವಿಲಿಯನ್​ಗಟ್ಟಿದರು. ಇಂಗ್ಲೆಂಡ್ ಪರ ಡಕೆಟ್ ಬಿಟ್ಟರೆ ಬೇರಾವ ಬ್ಯಾಟ್ಸ್‌ಮನ್ ಅರ್ಧಶತಕ ಕೂಡ ಗಳಿಸಲು ಸಾಧ್ಯವಾಗಲಿಲ್ಲ.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group: https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *