IND vs ENG: ರೋಹಿತ್- ಜೈಸ್ವಾಲ್ ಅರ್ಧಶತಕ; 5ನೇ ಟೆಸ್ಟ್​ ಮೊದಲ ದಿನ ಭಾರತದ್ದೇ ಪಾರುಪತ್ಯ.

ಧರ್ಮಶಾಲಾದಲ್ಲಿ ನಡೆಯುತ್ತಿರುವ ಐದನೇ ಟೆಸ್ಟ್ ಪಂದ್ಯದ ಮೊದಲ ದಿನ ಸಂಪೂರ್ಣವಾಗಿ ಟೀಂ ಇಂಡಿಯಾ ಹೆಸರಿನಲ್ಲಿತ್ತು. ಈಗಾಗಲೇ ಸರಣಿ ಕೈವಶ ಮಾಡಿಕೊಂಡಿರುವ ಟೀಂ ಇಂಡಿಯಾ, ಪಂದ್ಯದ ಮೊದಲ ದಿನದಂತ್ಯಕ್ಕೆ ಇಂಗ್ಲೆಂಡ್ ತಂಡವನ್ನು (India vs England) ಮೊದಲ ಇನಿಂಗ್ಸ್​ನಲ್ಲಿ ಕೇವಲ 218 ರನ್ ಗಳಿಗೆ ಆಲೌಟ್ ಮಾಡಿ ನಂತರ ಉತ್ತರವಾಗಿ ಕೇವಲ 1 ವಿಕೆಟ್ ಕಳೆದುಕೊಂಡು 135 ರನ್ ಗಳಿಸಿದೆ. ಸದ್ಯ ಟೀಂ ಇಂಡಿಯಾ ಇಂಗ್ಲೆಂಡ್‌ಗಿಂತ 83 ರನ್‌ ಹಿಂದಿದೆ. ಬೌಲಿಂಗ್​ನಲ್ಲಿ ಮಿಂಚಿದ ಟೀಂ ಇಂಡಿಯಾದ ಸ್ಟಾರ್ ಸ್ಪಿನ್ನರ್ ಕುಲ್ದೀಪ್ ಯಾದವ್ (Kuldeep Yadav) ಇಂಗ್ಲೆಂಡ್ ತಂಡದ ಬ್ಯಾಟಿಂಗ್ ಬೆನ್ನೇಲುಬು ಮುರಿಯುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಕುಲ್ದೀಪ್ ಗರಿಷ್ಠ 5 ವಿಕೆಟ್ ಪಡೆದರೆ, 100ನೇ ಟೆಸ್ಟ್ ಆಡುತ್ತಿರುವ ರವಿಚಂದ್ರನ್ ಅಶ್ವಿನ್ (Ravichandran Ashwin) ಕೂಡ 4 ವಿಕೆಟ್ ಪಡೆದರು. ಇದಾದ ಬಳಿಕ ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ (57) ಹಾಗೂ ನಾಯಕ ರೋಹಿತ್ ಶರ್ಮಾ (Rohit Sharma) (ಔಟಾಗದೆ 52) ಅಜೇಯ ಅರ್ಧಶತಕ ಗಳಿಸಿ ತಂಡವನ್ನು ಉತ್ತಮ ಸ್ಥಿತಿಗೆ ತಂದರು. ಎರಡನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿರುವ ರೋಹಿತ್ ಜೊತೆಗೆ ಶುಭ್​ಮನ್ ಗಿಲ್ (ಔಟಾಗದೆ 26) ಕ್ರೀಸ್ ಹಂಚಿಕೊಳ್ಳಲಿದ್ದಾರೆ.

ಕುಲ್ದೀಪ್ ಅಶ್ವಿನ್ ಮ್ಯಾಜಿಕ್

ಇದಕ್ಕೂ ಮುನ್ನ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್, ಕುಲ್ದೀಪ್ ಯಾದವ್ ಮತ್ತು ಆರ್ ಅಶ್ವಿನ್ ಸ್ಪಿನ್ ಜೋಡಿಯ ಮುಂದೆ ಮಂಡಿಯೂರಿತು. ಹೀಗಾಗಿ ಇಂಗ್ಲೆಂಡ್‌ನ ಮೊದಲ ಇನ್ನಿಂಗ್ಸ್ 218 ರನ್‌ಗಳಿಗೆ ಕೊನೆಗೊಂಡಿತು. ಇಂಗ್ಲೆಂಡ್ ತನ್ನ ಕೊನೆಯ 7 ವಿಕೆಟ್‌ಗಳನ್ನು ಕೇವಲ 43 ರನ್‌ಗಳಿಗೆ ಕಳೆದುಕೊಂಡಿದ್ದು, ಸ್ಪಿನ್ ಜೋಡಿಯ ಕರಾರುವಕ್ಕಾದ ದಾಳಿಗೆ ಹಿಡಿದ ಕೈಗನ್ನಡಿಯಾಗಿತ್ತು. ಕೇವಲ 4 ವಿಕೆಟ್‌ಗೆ 175 ರನ್ ಕಲೆಹಾಕಿದ್ದ ಇಂಗ್ಲೆಂಡ್ ಆ ನಂತರ 218 ರನ್​ಗಳಿಗೆ ಆಲೌಟ್ ಆಯಿತು.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group: https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *