IND vs ENG: ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ತಂಡದಲ್ಲಿ ಯಾರೆಲ್ಲ ಆಡಬಹುದು ಎಂಬುದಕ್ಕೆ ನಾಯಕ ರೋಹಿತ್ ಶರ್ಮಾ ಸ್ಪಷ್ಟ ಸುಳಿವು ನೀಡಿದ್ದಾರೆ. ಮುಖ್ಯವಾಗಿ ವಿರಾಟ್ ಕೊಹ್ಲಿ ಸ್ಥಾನದಲ್ಲಿ ಯಾರು ಆಡಲಿದ್ದಾರೆ ಎಂಬುದಕ್ಕೆ ಉತ್ತರ ಸಿಕ್ಕಿದ್ದು, ಈ ಪಂದ್ಯದಲ್ಲಿ ಬ್ಯಾಟ್ಸ್‌ಮನ್ ಆಗಿ ಕಣಕ್ಕಿಳಿಯುತ್ತಿರುವ ಕೆಎಲ್ ರಾಹುಲ್ ಕೊಹ್ಲಿ ಸ್ಥಾನವನ್ನು ತುಂಬುವುದು ಖಚಿತವಾಗಿದೆ.
![](https://samagrasuddi.co.in/wp-content/uploads/2024/01/image-250-1024x576.png)
ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯ ಗುರುವಾರದಿಂದ ಹೈದರಾಬಾದ್‌ನಲ್ಲಿ ಆರಂಭವಾಗಲಿದೆ. ಈಗಾಗಲೇ ಆಂಗ್ಲರು ಮೊದಲ ಟೆಸ್ಟ್ ಪಂದ್ಯಕ್ಕೆ ತಂಡವನ್ನು ಪ್ರಕಟಿಸಿದ್ದು, ಹಲವು ಆಚ್ಚರಿಯ ಆಯ್ಕೆಗಳನ್ನು ಮಾಡಿದ್ದಾರೆ. ಆದರೆ ಟೀಂ ಇಂಡಿಯಾ (Team India) ಮಾತ್ರ ತಂಡದ ಬಗ್ಗೆ ಯಾವುದೇ ಸುಳುವು ನೀಡದಿದ್ದರೂ, ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ತಂಡದಲ್ಲಿ ಯಾರೆಲ್ಲ ಆಡಬಹುದು ಎಂಬುದಕ್ಕೆ ನಾಯಕ ರೋಹಿತ್ ಶರ್ಮಾ (Rohit Sharma) ಸ್ಪಷ್ಟ ಸುಳಿವು ನೀಡಿದ್ದಾರೆ. ಮುಖ್ಯವಾಗಿ ವಿರಾಟ್ ಕೊಹ್ಲಿ (Virat Kohli) ಸ್ಥಾನದಲ್ಲಿ ಯಾರು ಆಡಲಿದ್ದಾರೆ ಎಂಬುದಕ್ಕೆ ಉತ್ತರ ಸಿಕ್ಕಿದ್ದು, ಈ ಪಂದ್ಯದಲ್ಲಿ ಬ್ಯಾಟ್ಸ್‌ಮನ್ ಆಗಿ ಕಣಕ್ಕಿಳಿಯುತ್ತಿರುವ ಕೆಎಲ್ ರಾಹುಲ್, ಕೊಹ್ಲಿ ಸ್ಥಾನವನ್ನು ತುಂಬುವುದು ಖಚಿತವಾಗಿದೆ. ಹಾಗಾಗಿ ಶ್ರೇಯಸ್ ಅಯ್ಯರ್ 5 ನೇ ಕ್ರಮಾಂಕದಲ್ಲಿ ಆಡುವುದನ್ನು ಕಾಣಬಹುದಾಗಿದೆ.
ವಿಕೆಟ್ ಕೀಪರ್ ಯಾರು?
ಇನ್ನು ಮೊದಲ ಟೆಸ್ಟ್ಗೆ ಯಾರು ವಿಕೆಟ್ ಕೀಪರ್ ಆಗಿ ಕಣಕ್ಕಿಳಿಯಲ್ಲಿದ್ದಾರೆ ಎಂಬುದನ್ನು ಈಗಲೇ ಹೇಳುವುದು ಕಷ್ಟ. ಏಕೆಂದರೆ ತಂಡದಲ್ಲಿ ಕೆಎಸ್ ಭರತ್ ಮತ್ತು ಧ್ರುವ್ ಜುರೆಲ್ ರೂಪದಲ್ಲಿ ಇಬ್ಬರು ವಿಕೆಟ್ ಕೀಪರ್ಗಳಿದ್ದಾರೆ. ಹಾಗೆಯೇ ವಿರಾಟ್ ಬದಲಿಗೆ ರಜತ್ ಪಾಟಿದಾರ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಆದರೆ ಮೊದಲ ಟೆಸ್ಟ್ ಪಂದ್ಯದಲ್ಲಿ ರಜತ್ ಹಾಗೂ ಧೃವ್ ಜುರೇಲ್ ಆಡುವುದು ಅನುಮಾನ. ಕೊಂಚ ಅನುಭವದ ಆಧಾರದ ಮೇಲೆ ಕೆಎಸ್ ಭರತ್ ವಿಕೆಟ್ ಕೀಪಿಂಗ್ ಮಾಡುವುದನ್ನು ಕಾಣಬಹುದು. ಉಳಿದಂತೆ ರವೀಂದ್ರ ಜಡೇಜಾ 7ನೇ ಕ್ರಮಾಂಕದಲ್ಲಿ ಹಾಗೂ ಅಕ್ಷರ್ ಪಟೇಲ್ ಮತ್ತು ರವಿಚಂದ್ರನ್ ಅಶ್ವಿನ್ ಕ್ರಮವಾಗಿ 8 ಮತ್ತು 9ನೇ ಸ್ಥಾನದಲ್ಲಿ ಬ್ಯಾಟ್ ಬೀಸಲಿದ್ದಾರೆ.
ಐವರು ಬೌಲರ್‌ಗಳಿಗೆ ಅವಕಾಶ
ನಾವು ಭಾರತ ತಂಡದ ಬೌಲಿಂಗ್ ಲೈನ್‌ಅಪ್ ಬಗ್ಗೆ ಮಾತನಾಡಿದರೆ, ಮೂವರು ಸ್ಪಿನ್ನರ್‌ಗಳು ತಂಡದಲ್ಲಿ ಆಡುವುದನ್ನು ಕಾಣಬಹುದು. ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್ ಮತ್ತು ರವೀಂದ್ರ ಜಡೇಜಾ ಸ್ಪಿನ್ ವಿಭಾಗವನ್ನು ನಿಭಾಯಿಸಲಿದ್ದಾರೆ. ಆದ್ದರಿಂದ ಪೇಸ್ ವಿಭಾಗದ ಜವಾಬ್ದಾರಿ ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ಅವರ ಹೆಗಲ ಮೇಲಿರಲಿದೆ. ಇದು ಸಿರಾಜ್ ಅವರ ತವರು ನೆಲವೂ ಆಗಿರುವುದರಿಂದ ಎಲ್ಲರ ಕಣ್ಣು ಅವರ ಮೇಲಿದೆ. ಇದೆಲ್ಲದರ ಹೊರತಾಗಿಯೂ ರೋಹಿತ್ ಯಾವ ತಂಡವನ್ನು ಕಟ್ಟಿಕೊಂಡು ಕಣಕ್ಕಿಳಿಯಲ್ಲಿದ್ದಾರೆ ಎಂಬುದು ಗುರುವಾರದ ಟಾಸ್ ನಂತರವೇ ತಿಳಿಯಲಿದೆ.
ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
ಇಂಗ್ಲೆಂಡ್ ತಂಡ: ಝಾಕ್ ಕ್ರಾಲಿ, ಬೆನ್ ಡಕೆಟ್, ಆಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್, ರೆಹಾನ್ ಅಹ್ಮದ್, ಟಾಮ್ ಹಾರ್ಟ್ಲೆ, ಮಾರ್ಕ್ ವುಡ್, ಜ್ಯಾಕ್ ಲೀಚ್.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1