IND vs ENG: ಭಾರತ vs ಇಂಗ್ಲೆಂಡ್ ನಡುವಣ ಸರಣಿ ನಿರ್ಣಾಯಕ ಪಂದ್ಯ ಎಷ್ಟು ಗಂಟೆಗೆ ಶುರು?

India vs England 3rd T20: ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಸರಣಿಯ ಮೊದಲ ಮ್ಯಾಚ್​​ನಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್​ಗಳ ಜಯ ಸಾಧಿಸಿತ್ತು. ಇನ್ನು ಚೆನ್ನೈನಲ್ಲಿ ನಡೆದ ದ್ವಿತೀಯ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 2 ವಿಕೆಟ್​ಗಳ ರೋಚಕ ಗೆಲುವು ದಾಖಲಿಸಿದೆ.

ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟಿ20 ಸರಣಿಯ ಮೂರನೇ ಪಂದ್ಯವು ಇಂದು ನಡೆಯಲಿದೆ. ರಾಜ್​ಕೋಟ್​ನ ನಿರಂಜನ್ ಶಾ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಸರಣಿ ನಿರ್ಣಾಯಕ ಮ್ಯಾಚ್. ಏಕೆಂದರೆ 5 ಪಂದ್ಯಗಳ ಸರಣಿಯ ಮೊದಲೆರಡು ಮ್ಯಾಚ್​ಗಳಲ್ಲಿ ಟೀಮ್ ಇಂಡಿಯಾ ಗೆಲುವು ದಾಖಲಿಸಿದೆ.

ಇದೀಗ ರಾಜ್​ಕೋಟ್​ನಲ್ಲೂ ಭಾರತ ತಂಡ ಜಯ ಸಾಧಿಸಿದರೆ 3-0 ಅಂತರದಿಂದ ಸರಣಿ ವಶಪಡಿಸಿಕೊಳ್ಳಲಿದೆ. ಅತ್ತ ಸರಣಿ ಆಸೆಯನ್ನು ಜೀವಂತವಿರಿಸಿಕೊಳ್ಳಬೇಕಿದ್ದರೆ ಇಂಗ್ಲೆಂಡ್ ತಂಡವು ಗೆಲ್ಲಲೇಬೇಕು. ಹೀಗಾಗಿ ಮೂರನೇ ಟಿ20 ಪಂದ್ಯವು ಆಂಗ್ಲರ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ.

ಹೀಗಾಗಿ ರಾಜ್​ಕೋಟ್​ನಲ್ಲಿ ನಡೆಯಲಿರುವ ಮೂರನೇ ಟಿ20 ಪಂದ್ಯದಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು. ಇನ್ನು ಈ ಪಂದ್ಯದ ಇನ್ನಿತರ ಮಾಹಿತಿ ಈ ಕೆಳಗಿನಂತಿದೆ…

ಭಾರತ vs ಇಂಗ್ಲೆಂಡ್ 3ನೇ ಟಿ20 ಪಂದ್ಯ ಎಷ್ಟು ಗಂಟೆಗೆ ಶುರು?

ರಾಜ್​ಕೋಟ್​ನ ನಿರಂಜನ್ ಶಾ ಮೈದಾನದಲ್ಲಿ ನಡೆಯಲಿರುವ 3ನೇ ಟಿ20 ಪಂದ್ಯದ ಟಾಸ್ ಪ್ರಕ್ರಿಯೆ​​ ಭಾರತೀಯ ಕಾಲಮಾನ ರಾತ್ರಿ 6.30 ಕ್ಕೆ ನಡೆಯಲಿದೆ. ಇನ್ನು ಪಂದ್ಯವು ರಾತ್ರಿ 7 ಗಂಟೆಯಿಂದ ಶುರುವಾಗಲಿದೆ.

ಭಾರತ vs ಇಂಗ್ಲೆಂಡ್ ಪಂದ್ಯ ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಈ ಸರಣಿಯ ಮೂರನೇ ಪಂದ್ಯವನ್ನು ಸಹ ಸ್ಟಾರ್ ಸ್ಪೋರ್ಟ್ಸ್ ಚಾನೆಲ್​ನಲ್ಲಿ ವೀಕ್ಷಿಸಬಹುದು. ಹಾಗೆಯೇ ಡಿಸ್ನಿ ಹಾಟ್​​ಸ್ಟಾರ್ ಆ್ಯಪ್ ಹಾಗೂ ವೆಬ್​ಸೈಟ್​ನಲ್ಲಿ ಉಚಿತ ಲೈವ್ ಸ್ಟ್ರೀಮಿಂಗ್ ಇರಲಿದೆ.

ಉಭಯ ತಂಡಗಳು:

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ಅಕ್ಷರ್ ಪಟೇಲ್ (ಉಪಾನಾಯಕ), ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ವಾಷಿಂಗ್ಟನ್ ಸುಂದರ್, ಧ್ರುವ್ ಜುರೇಲ್ (ವಿಕೆಟ್ ಕೀಪರ್), ರಮಣ್​ದೀಪ್ ಸಿಂಗ್, ಶಿವಂ ದುಬೆ.

ಇಂಗ್ಲೆಂಡ್ ಟಿ20 ತಂಡ: ಜೋಸ್ ಬಟ್ಲರ್ (ನಾಯಕ), ರೆಹಾನ್ ಅಹ್ಮದ್, ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜೇಕಬ್ ಬೆಥೆಲ್, ಹ್ಯಾರಿ ಬ್ರೂಕ್ (ಉಪನಾಯಕ), ಬ್ರೈಡನ್ ಕಾರ್ಸೆ, ಬೆನ್ ಡಕೆಟ್, ಜೇಮೀ ಓವರ್ಟನ್, ಜಾಮಿ ಸ್ಮಿತ್, ಲಿಯಾಮ್ ಲಿವಿಂಗ್​ಸ್ಟೋನ್, ಆದಿಲ್ ರಶೀದ್, ಸಾಕಿಬ್ ಮಹಮೂದ್, ಫಿಲ್ ಸಾಲ್ಟ್, ಮಾರ್ಕ್ ವುಡ್.

Source : https://tv9kannada.com/sports/cricket-news/india-vs-england-3rd-t20-series-decider-match-zp-970088.html

Leave a Reply

Your email address will not be published. Required fields are marked *