
Harshit Rana’s ODI Debut: ನಾಗ್ಪುರದಲ್ಲಿ ಇಂಗ್ಲೆಂಡ್ ವಿರುದ್ಧದ ಏಕದಿನ ಪಂದ್ಯದಲ್ಲಿ ತಮ್ಮ ಚೊಚ್ಚಲ ಏಕದಿನ ಪಂದ್ಯವನ್ನಾಡಿದ ಹರ್ಷಿತ್ ರಾಣಾ 7 ಓವರ್‌ಗಳಲ್ಲಿ 53 ರನ್‌ಗಳಿಗೆ 3 ವಿಕೆಟ್‌ಗಳನ್ನು ಪಡೆದು ವಿಶೇಷ ಹ್ಯಾಟ್ರಿಕ್ ಸಾಧನೆ ಮಾಡಿದರು. ಟೆಸ್ಟ್ ಮತ್ತು ಟಿ20 ಯಲ್ಲೂ ಮೊದಲ ಪಂದ್ಯದಲ್ಲಿಯೇ ಅತ್ಯುತ್ತಮ ಪ್ರದರ್ಶನ ನೀಡಿದ್ದ ರಾಣಾ, ಮೂರು ಮಾದರಿಗಳಲ್ಲೂ ಮೊದಲ ಪಂದ್ಯದಲ್ಲಿ 3 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದ ಮೊದಲ ಭಾರತೀಯ ಆಟಗಾರ ಎಂಬ ದಾಖಲೆ ಸೃಷ್ಟಿಸಿದ್ದಾರೆ.



