IND vs ENG: ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ 3 ಬದಲಾವಣೆ ಸಾಧ್ಯತೆ.

ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರನೇ ಏಕದಿನ ಪಂದ್ಯ ಬುಧವಾರ (ಫೆ.12) ನಡೆಯಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್ ಇಲೆವೆನ್​​ನಲ್ಲಿ ಮೂರು ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಮೂರು ಪಂದ್ಯಗಳ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಜಯ ಸಾಧಿಸಿ ಟೀಮ್ ಇಂಡಿಯಾ 2-0 ಅಂತರದಿಂದ ಸರಣಿ ವಶಪಡಿಸಿಕೊಂಡಿದೆ. ಹೀಗಾಗಿ ಮೂರನೇ ಪಂದ್ಯವು ಭಾರತದ ಪಾಲಿಗೆ ಔಪಚಾರಿಕ ಪಂದ್ಯ ಎನ್ನಬಹುದು.

ಹೀಗಾಗಿ ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಟೀಮ್ ಇಂಡಿಯಾ ಕೆಲ ಪ್ರಯೋಗಗಳನ್ನು ನಡೆಸುವ ಸಾಧ್ಯತೆಯಿದೆ. ಅದರಂತೆ ಮೂರನೇ ಪಂದ್ಯದಲ್ಲಿ ಮೂರು ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ.

ಯಾರು ಇನ್-ಯಾರು ಔಟ್?

ಟೀಮ್ ಇಂಡಿಯಾ ಮೂರು ಬದಲಾವಣೆ ಮಾಡಿಕೊಳ್ಳಲು ಮುಂದಾದರೆ, ವಿಕೆಟ್ ಕೀಪರ್ ಆಗಿ ರಿಷಭ್ ಪಂತ್ ಕಣಕ್ಕಿಳಿಯಲಿದ್ದಾರೆ. ಕಳೆದ 2 ಮ್ಯಾಚ್​ಗಳಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ಆಡಿರುವ ರಾಹುಲ್ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಹೀಗಾಗಿ ಪಂತ್ ಅವರನ್ನು ಮೂರನೇ ಪಂದ್ಯದಲ್ಲಿ ಕಣಕ್ಕಿಳಿಸಬಹುದು.

ಹಾಗೆಯೇ ಮೊದಲೆರಡು ಮ್ಯಾಚ್​ಗಳಲ್ಲಿ ಕಣಕ್ಕಿಳಿದರೂ ಮೊಹಮ್ಮದ್ ಶಮಿ ಪರಿಣಾಕಾರಿಯಾಗಿ ದಾಳಿ ಸಂಘಟಿಸುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಮೂರನೇ ಪಂದ್ಯದಲ್ಲಿ ಅವರ ಸ್ಥಾನದಲ್ಲಿ ಅರ್ಷದೀಪ್ ಸಿಂಗ್ ಕಣಕ್ಕಿಳಿಯುವ ಸಾಧ್ಯತೆಯಿದೆ.

ಇನ್ನು ಎರಡನೇ ಪಂದ್ಯದಿಂದ ಹೊರಗುಳಿದಿದ್ದ ಕುಲ್ದೀಪ್ ಯಾದವ್ ಮೂರನೇ ಮ್ಯಾಚ್​ನಲ್ಲಿ ಕಣಕ್ಕಿಳಿಯಬಹುದು. ಇದರಿಂದ ವರುಣ್ ಚಕ್ರವರ್ತಿ ಅಥವಾ ಅಕ್ಷರ್ ಪಟೇಲ್ ಹೊರಗುಳಿಯಬೇಕಾಗಿ ಬರಬಹುದು. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಹೀಗಿರಲಿದೆ…

  1. ರೋಹಿತ್ ಶರ್ಮಾ (ನಾಯಕ)
  2. ಶುಭ್​​ಮನ್ ಗಿಲ್
  3. ವಿರಾಟ್ ಕೊಹ್ಲಿ
  4. ಶ್ರೇಯಸ್ ಅಯ್ಯರ್
  5. ರಿಷಭ್ ಪಂತ್ (ವಿಕೆಟ್ ಕೀಪರ್)
  6. ಹಾರ್ದಿಕ್ ಪಾಂಡ್ಯ
  7. ರವೀಂದ್ರ ಜಡೇಜಾ
  8. ಅಕ್ಷರ್ ಪಟೇಲ್
  9. ಹರ್ಷಿತ್ ರಾಣಾ
  10. ಅರ್ಷದೀಪ್ ಸಿಂಗ್
  11. ಕುಲ್ದೀಪ್​ ಯಾದವ್.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಭ್ ಪಂತ್, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.

Source : https://tv9kannada.com/sports/cricket-news/ind-vs-eng-indias-likely-playing-xi-for-3rd-odi-zp-976990.html

Leave a Reply

Your email address will not be published. Required fields are marked *