IND vs NZ 2nd T20I: ಭಾರತ- ನ್ಯೂಜಿಲೆಂಡ್ ಎರಡನೇ ಟಿ20 ಪಂದ್ಯ ಯಾವಾಗ?, ಎಲ್ಲಿ ನಡೆಯಲಿದೆ?

IND vs NZ T20I

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ (Rohit Sharma) ನಾಯಕತ್ವದ ಭಾರತ ಭರ್ಜರಿ ಪ್ರದರ್ಶನ ತೋರಿ ಮೂರೂ ಪಂದ್ಯಗಳನ್ನು ಗೆದ್ದು ಸರಣಿ ಕ್ಲೀನ್​ಸ್ವೀಪ್ ಮಾಡಿಕೊಂಡಿತ್ತು. ಆದರೀಗ ಟಿ20 ಸರಣಿಯ ಮೊದಲ ಪಂದ್ಯದಲ್ಲೇ ಟೀಮ್ ಇಂಡಿಯಾ ಸೋಲು ಕಂಡಿದೆ. ಹಾರ್ದಿಕ್ ಪಾಂಡ್ಯ (Hardik Pandya) ನಾಯಕತ್ವದಲ್ಲಿ ಬೌಲರ್​ಗಳು ಕಳಪೆ ಪ್ರದರ್ಶನ ತೋರಿದರೆ, ಬ್ಯಾಟರ್​ಗಳು ಕೂಡ ನಿರೀಕ್ಷೆಗೆ ತಕ್ಕಂತೆ ಆಡಲಿಲ್ಲ. ರೋಹಿತ್, ಕೊಹ್ಲಿ, ರಾಹುಲ್​ ಅನುಭವಿ ಆಟಗಾರರ ಅನುಪಸ್ಥಿತಿ ಎದ್ದು ಕಂಡಿತು. ಇದೀಗ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 0-1 ಅಂತರದ ಹಿನ್ನಡೆಯಲ್ಲಿರುವ ಟೀಮ್ ಇಂಡಿಯಾಕ್ಕೆ (Team India) ಮುಂದಿನ ಎರಡೂ ಪಂದ್ಯ ಬಹುಮುಖ್ಯವಾಗಿದೆ.

ಟಿ20 ಸರಣಿಯನ್ನು ವಶಪಡಿಸಿಕೊಳ್ಳಬೇಕಾದರೆ ಬಾಕಿ ಉಳಿದಿರುವ ಎರಡೂ ಪಂದ್ಯದಲ್ಲಿ ಭಾರತ ಗೆಲ್ಲಲೇ ಬೇಕಾದ ಒತ್ತಡಕ್ಕೆ ಸಿಲುಕಿದೆ. ದ್ವಿತೀಯ ಟಿ20 ಪಂದ್ಯ ಜನವರಿ 29 ಭಾನುವಾರದಂದು ಲಕ್ನೋದ ಭಾರತ್ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯ ಸಂಜೆ 7 ಗಂಟೆಗೆ ಶುರುವಾಗಲಿದೆ. ಅಂತೆಯೆ ಅಂತಿಮ ಮೂರನೇ ಪಂದ್ಯ ಫೆಬ್ರವರಿ 1 ಬುಧವಾರದಂದು ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ. ಈ ಮ್ಯಾಚ್ ಕೂಡ ಸಂಜೆ 7 ಗಂಟೆಗೆ ಪ್ರಾರಂಭವಾಗಲಿದೆ.

ದ್ವಿತೀಯ ಟಿ20ಗೆ ಬದಲಾವಣೆ?:

ಮೊದಲ ಟಿ20ಯಲ್ಲಿ ಸೋತ ಪರಿಣಾಮ ದ್ವಿತೀಯ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ ಬದಲಾವಣೆ ಖಚಿತ ಎಂದೇ ಹೇಳಬಹುದು. 4 ಓವರ್​ಗೆ ಬರೋಬ್ಬರಿ 51 ರನ್ ನೀಡಿ ಬೌಲಿಂಗ್ ಸಾಕಷ್ಟು ದುಬಾರಿ ಆಗಿದ್ದ ಅರ್ಶ್​ದೀಪ್ ಸಿಂಗ್ ಪ್ಲೇಯಿಂಗ್ ಇಲೆವೆನ್​ನಿಂದ ಸ್ಥಾನ ಕಳೆದುಕೊಳ್ಳುವ ಸಾಧ್ಯತೆ ಇದೆ. ಇವರ ಜಾಗಕ್ಕೆ ಹೊಸ ಮುಖ ಮುಖೇಶ್ ಕುಮಾರ್​ಗೆ ಮಣೆ ಹಾಕಬಹುದು. ಅಂತೆಯೆ ರಾಹುಲ್ ತ್ರಿಪಾಠಿ ಜಾಗಕ್ಕೆ ಪೃಥ್ವಿ ಶಾ ಬಂದರೆ ಅಚ್ಚರಿ ಪಡಬೇಕಿಲ್ಲ. ಕುಲ್ದೀಪ್ ಯಾದವ್ 4 ಓವರ್​ಗೆ ಕೇವಲ 20 ರನ್ ನೀಡಿ 1 ವಿಕೆಟ್ ಪಡೆದ ಕಾರಣ ಯುಜ್ವೇಂದ್ರ ಚಹಲ್ ಮತ್ತೊಮ್ಮೆ ಬೆಂಚ್ ಕಾಯಬೇಕಿದೆ.

VIDEO: ಅತ್ಯದ್ಭುತ ಕ್ಯಾಚ್​ ಹಿಡಿದು ಎಲ್ಲರನ್ನು ದಂಗಾಗಿಸಿದ ವಾಷಿಂಗ್ಟನ್ ಸುಂದರ್

ಮೊದಲ ಟಿ20 ಹೇಗಿತ್ತು?:

ಶುಕ್ರವಾರ ನಡೆದ ಮೊದಲ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್​ ಡೆವೊನ್​ ಕಾನ್ವೆ (52) ಹಾಗೂ ಡೆರಲ್​ ಮಿಚೆಲ್​(59) ಅವರ ಅರ್ಧಶತಕಗಳ ನೆರವಿನಿಂದ 176 ರನ್​ ಪೇರಿಸಿತು. ಫಿನ್ ಅಲೆನ್ 35, ಗ್ಲೇನ್ ಫಿಲ್ಲಿಪ್ಸ್ 17 ರನ್​ಗಳ ಕೊಡುಗೆ ನೀಡಿದರು. ಭಾರತ ಪರ ವಾಷಿಂಗ್ಟನ್ ಸುಂದರ್ 2 ವಿಕೆಟ್ ಕಬಳಿಸಿದರು. ಟಾರ್ಗೆಟ್ ಬೆನ್ನಟ್ಟಿದ ಭಾರತ ಆರಂಭದಲ್ಲೇ ವಿಕೆಟ್​ ಕಳೆದುಕೊಳ್ಳುತ್ತ ಸಾಗಿತು. 15 ರನ್​ಗೆ ಪ್ರಮುಖ ಮೂರು ವಿಕೆಟ್​ ಕಳೆದುಕೊಂಡು ಒತ್ತಡಕ್ಕೆ ಸಿಲುಕಿತು. ಬಳಿಕ ನಾಯಕ ಹಾರ್ದಿಕ್ ಪಾಂಡ್ಯ (21)​ ಹಾಗೂ ಸೂರ್ಯಕುಮಾರ್​ ಯಾದವ್(47) ಜೊತೆಯಾಟದ ಮೂಲಕ ಭರವಸೆ ಮೂಡಿಸಿದರೂ ಗೆಲುವಿನ ಹತ್ತಿರಕ್ಕೆ ಕೊಂಡೊಯ್ಯಲು ಸಾಧ್ಯವಾಗಲಿಲ್ಲ. ಆಲ್​ರೌಂಡರ್​ ವಾಷಿಂಗ್ಟನ್​ ಸುಂದರ್​ 28 ಎಸೆತಗಳಲ್ಲಿ 50 ರನ್​ ಬಾರಿಸಿದರೂ ಸಹ ಇತರೆ ಬ್ಯಾಟರ್​ಗಳು ಸಾಥ್ ನೀಡಲಿಲ್ಲ. ಭಾರತ 20 ಓವರ್​ಗಳಲ್ಲಿ 9 ವಿಕೆಟ್​ಗೆ 155 ರನ್​ಗಳನ್ನಷ್ಟೆ ಗಳಿಸಿ ಸೋಲುಂಡಿತು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

source https://tv9kannada.com/sports/cricket-news/india-vs-new-zealand-2nd-t20-will-be-played-on-29th-january-cricket-news-in-kannada-vb-au48-509894.html

Leave a Reply

Your email address will not be published. Required fields are marked *