Rohit Sharma Breaks Sachin’s Record: ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ 20 ರನ್‌ಗಳಿಗೆ ಔಟಾದರೂ, ಏಕದಿನ ಕ್ರಿಕೆಟ್‌ನಲ್ಲಿ ಆರಂಭಿಕನಾಗಿ 9000 ರನ್‌ಗಳನ್ನು ಪೂರ್ಣಗೊಳಿಸಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಸಚಿನ್ ತೆಂಡೂಲ್ಕರ್‌ರ ದಾಖಲೆಯನ್ನು ಮುರಿದು, ಅತಿ ಕಡಿಮೆ ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆಯನ್ನು ಮಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮತ್ತೊಮ್ಮೆ ಉತ್ತಮ ಆರಂಭವನ್ನು ಬಿಗ್ ಇನ್ನಿಂಗ್ಸ್ ಆಗಿ ಪರಿವರ್ತಿಸುವಲ್ಲಿ ವಿಫಲರಾಗಿದ್ದಾರೆ. ಪಾಕಿಸ್ತಾನ ವಿರುದ್ಧದ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಎಂದಿನಂತೆ ಆರಂಭಿಕರಾಗಿ ಕಣಕ್ಕಿಳಿದಿದ್ದ ರೋಹಿತ್ ಹೊಡಿಬಡಿ ಆಟದ ಮೂಲಕ ಪಾಕ್ ಬೌಲರ್ಗಳ ಬೆವರಿಳಿಸಿದರು. ಆದರೆ 20 ರನ್‌ಗಳಿಗೆ ರೋಹಿತ್ ಇನ್ನಿಂಗ್ಸ್ ಅಂತ್ಯಗೊಂಡಿತು.




