IND vs SA: 11 ಎಸೆತ, 0 ರನ್, 6 ವಿಕೆಟ್ ಪತನ! 153 ರನ್​ಗಳಿಗೆ ಭಾರತ ಆಲೌಟ್.

IND vs SA: 2ನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಫ್ರಿಕಾ ತಂಡ ಮೊದಲ ಇನ್ನಿಂಗ್ಸ್​ನಲ್ಲಿ 55 ರನ್​ಗಳಿಗೆ ಆಲೌಟ್ ಆಗಿತ್ತು. ಬಳಿಕ ಮೊದಲ ಇನ್ನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾ ಕೂಡ 153 ರನ್​ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿದೆ. ಈ ಮೂಲಕ 98 ರನ್​ಗಳ ಮುನ್ನಡೆ ಕಾಯ್ದುಕೊಂಡಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ (India vs South Africa) ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಮತ್ತು ಕೊನೆಯ ಟೆಸ್ಟ್ ಪಂದ್ಯ ಕೇಪ್ ಟೌನ್‌ನ ನ್ಯೂಲ್ಯಾಂಡ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಫ್ರಿಕಾ ತಂಡ ಮೊದಲ ಇನ್ನಿಂಗ್ಸ್​ನಲ್ಲಿ 55 ರನ್​ಗಳಿಗೆ ಆಲೌಟ್ ಆಗಿತ್ತು. ಬಳಿಕ ಮೊದಲ ಇನ್ನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾ ಕೂಡ 153 ರನ್​ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿದೆ. ಈ ಮೂಲಕ 98 ರನ್​ಗಳ ಮುನ್ನಡೆ ಕಾಯ್ದುಕೊಂಡಿದೆ. ಟೀಂ ಇಂಡಿಯಾ ಪರ ವಿರಾಟ್ ಕೊಹ್ಲಿ (Virat Kohli) ಅತ್ಯಧಿಕ 46 ರನ್​ಗಳ ಇನ್ನಿಂಗ್ಸ್ ಆಡಿದರೆ, ನಾಯಕ ರೋಹಿತ್ ಶರ್ಮಾ(Rohit Sharma) 39 ಹಾಗೂ ಶುಭ್​ಮನ್​ ಗಿಲ್ (Shubman Gill) 36 ರನ್​ಗಳ ಕೊಡುಗೆ ನೀಡಿದರು.

ಭಾರತಕ್ಕೂ ಕಳಪೆ ಆರಂಭ

ಆಫ್ರಿಕಾ ನೀಡಿದ 55 ರನ್​ಗಳ ಗುರಿ ಬೆನ್ನತ್ತಿದ ಭಾರತಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಆರಂಭಿಕ ಯಶಸ್ವಿ ಜೈಸ್ವಾಲ್ ಖಾತೆ ತೆರೆಯದೆ ವಿಕೆಟ್ ಒಪ್ಪಿಸಿದರು. ಆ ಬಳಿಕ ಜೊತೆಯಾದ ನಾಯಕ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ತಂಡದ ಇನ್ನಿಂಗ್ಸ್​ಗೆ ಜೀವ ತುಂಬಿದರು. ಇಬ್ಬರು ಅರ್ಧಶತಕದ ಜೊತೆಯಾಟ ಕೂಡ ಹಂಚಿಕೊಂಡರು. ಈ ವೇಳೆ ರೋಹಿತ್ ಶರ್ಮಾ 39 ರನ್​ಗಳಿಗೆ ಇನ್ನಿಂಗ್ಸ್ ಮುಗಿಸಿದರೆ, ಶುಭ್​ಮನ್ ಗಿಲ್ ಕೂಡ ಹೆಚ್ಚು ಹೊತ್ತು ಕ್ರೀಸ್​ನಲ್ಲಿ ನಿಲ್ಲದೆ 36 ರನ್​ಗಳಿಗೆ ಬ್ಯಾಟ್ ಎತ್ತಿಟ್ಟರು.

11 ಎಸೆತಗಳಲ್ಲಿ 6 ವಿಕೆಟ್ ಪತನ

ಗಿಲ್ ವಿಕೆಟ್ ಬಳಿಕ ಬಂದ ಶ್ರೇಯಸ್ ಅಯ್ಯರ್ ಕೂಡ 2 ಎಸೆತಗಳಲ್ಲಿ ಸುಸ್ತಾಗಿ ಖಾತೆ ತೆರೆಯದೆ ವಿಕೆಟ್ ಒಪ್ಪಿಸಿದರು. ಆದರೆ ಒಂದು ತುದಿಯಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ಕೊಹ್ಲಿ ತಂಡದ ಇನ್ನಿಂಗ್ಸ್ ನಿಭಾಯಿಸಿದರು. ಮೊದಲ ಪಂದ್ಯದಲ್ಲಿ ಶತಕ ಬಾರಿಸಿದ್ದ ಕೆಎಲ್ ರಾಹುಲ್ 8 ರನ್​ಗಳಿಗೆ ಪೆವಿಲಿಯನ್ ಹಾದಿ ಹಿಡಿದರೆ, ಈ ವಿಕೆಟ್ ಬಳಿಕ ಬಂದ ಯಾವ ಬ್ಯಾಟರ್​ಗೂ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ಕೊನೆಯ 6 ವಿಕೆಟ್​ಗಳು ಕೇವಲ 11 ಎಸೆತಗಳಲ್ಲಿ ಪತನವಾದವು.

2 ಓವರ್​ಗಳಲ್ಲಿ ತಲಾ 3 ವಿಕೆಟ್

ಅರ್ಧಶತಕದ ಅಂಚಿನಲ್ಲಿದ್ದ ವಿರಾಟ್ ಕೊಹ್ಲಿ ಕೂಡ 46 ರನ್​ಗಳಿಗೆ ಸ್ಲಿಪ್​ನಲ್ಲಿ ಕ್ಯಾಚಿತ್ತು ಔಟಾದರು. ಕೊನೆಯ 4 ಬ್ಯಾಟರ್​ಗಳು ಖಾತೆ ತೆರೆಯದೆ ಔಟಾಗಿದ್ದು, ಆಫ್ರಿಕಾ ಬೌಲರ್​ಗಳ ಮಾರಕ ದಾಳಿಗೆ ಕೈಗನ್ನಡಿಯಾಗಿತ್ತು. ಕೊನೆಯ ಎರಡು ಓವರ್​ಗಳಲ್ಲಿ ಲುಂಗಿ ಎನ್​ಗಿಡಿ ಯಾವುದೇ ರನ್ ನೀಡಿದೆ 3 ವಿಕೆಟ್ ಪಡೆದರೆ, ಕಗಿಸೋ ರಬಾಡ ಕೂಡ ಒಂದೇ ಓವರ್​ನಲ್ಲಿ 3 ವಿಕೆಟ್​ ಪಡೆದರು.

Source: https://tv9kannada.com/sports/cricket-news/ind-vs-sa-india-lose-6-wickets-in-11-balls-take-98-run-lead-psr-753736.html

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group: https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *