IND vs ENG: ಭಾರತ- ಇಂಗ್ಲೆಂಡ್‌ ಟೆಸ್ಟ್ ಸರಣಿಯಲ್ಲಿ ಅಧಿಕ ರನ್ ಬಾರಿಸಿದ ಟಾಪ್ 5 ಬ್ಯಾಟ್ಸ್‌ಮನ್​ಗಳಿವರು.

ಇಂಗ್ಲೆಂಡ್ ಮತ್ತು ಟೀಂ ಇಂಡಿಯಾ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿ ಜೂನ್ 20 ರಿಂದ ಆರಂಭವಾಗಲಿದೆ. 2025-2027ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಎರಡೂ ತಂಡಗಳಿಗೆ ಇದು ಮೊದಲ ಸರಣಿಯಾಗಲಿದೆ. ಬೆನ್ ಸ್ಟೋಕ್ಸ್ ಇಂಗ್ಲೆಂಡ್ ತಂಡವನ್ನು ಮುನ್ನಡೆಸಿದರೆ, ಶುಭ್​ಮನ್ ಗಿಲ್ ಅವರಿಗೆ ಭಾರತ ತಂಡದ ನಾಯಕತ್ವದ ಜವಾಬ್ದಾರಿಯನ್ನು ವಹಿಸಲಾಗಿದೆ.

ಸರಣಿಯ ಆರಂಭಕ್ಕೂ ಮುನ್ನ ಇಂಗ್ಲೆಂಡ್-ಭಾರತ ಟೆಸ್ಟ್ ಸರಣಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ 5 ಬ್ಯಾಟ್ಸ್‌ಮನ್‌ಗಳ ಬಗ್ಗೆ ತಿಳಿದುಕೊಳ್ಳೋಣ.

ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ಜೋ ರೂಟ್ ಅವರ ಹೆಸರಿನಲ್ಲಿದೆ. 2012-2024ರ ನಡುವೆ ಜೋ ರೂಟ್ ಇದುವರೆಗೆ 30 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. 30 ಪಂದ್ಯಗಳಲ್ಲಿ 55 ಇನ್ನಿಂಗ್ಸ್‌ಗಳಲ್ಲಿ 58.08 ಸರಾಸರಿಯಲ್ಲಿ 2,846 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ ರೂಟ್ 10 ಶತಕಗಳು ಮತ್ತು 11 ಅರ್ಧಶತಕಗಳನ್ನು ಸಿಡಿಸಿದ್ದಾರೆ.

ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ 1990 ರಿಂದ 2012 ರ ನಡುವೆ ಆಡಿದ 32 ಟೆಸ್ಟ್ ಪಂದ್ಯಗಳಲ್ಲಿ 2,535 ರನ್ ಗಳಿಸಿದ್ದಾರೆ. ಸಚಿನ್ 51.73 ಸರಾಸರಿಯಲ್ಲಿ ಈ ರನ್ ಗಳಿಸಿದ್ದು, ಈ ಅವಧಿಯಲ್ಲಿ ಸಚಿನ್ 7 ಶತಕ ಮತ್ತು 13 ಅರ್ಧಶತಕಗಳನ್ನು ಬಾರಿಸಿದ್ದಾರೆ.

ಟೀಮ್ ಇಂಡಿಯಾದ ಮಾಜಿ ನಾಯಕ, ಲಿಟಲ್ ಮಾಸ್ಟರ್ ಸುನಿಲ್ ಗವಾಸ್ಕರ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. 1971 ರಿಂದ 1986 ರವರೆಗೆ ಇಂಗ್ಲೆಂಡ್ ವಿರುದ್ಧದ 38 ಪಂದ್ಯಗಳಲ್ಲಿ ಗವಾಸ್ಕರ್ 38.20 ರ ಸರಾಸರಿಯಲ್ಲಿ 2,438 ರನ್ ಗಳಿಸಿದ್ದಾರೆ. ಇದರಲ್ಲಿ 4 ಶತಕ ಮತ್ತು 16 ಅರ್ಧಶತಕಗಳು ಸೇರಿವೆ.

ಇಂಗ್ಲೆಂಡ್‌ನ ಮಾಜಿ ನಾಯಕ ಅಲಸ್ಟೇರ್ ಕುಕ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. 2006 ರಿಂದ 2018 ರವರೆಗೆ ಟೀಂ ಇಂಡಿಯಾ ವಿರುದ್ಧ ಆಡಿದ 30 ಟೆಸ್ಟ್ ಪಂದ್ಯಗಳಲ್ಲಿ ಅಲಸ್ಟೈರ್ ಕುಕ್ 47.66 ರ ಸರಾಸರಿಯಲ್ಲಿ 2,431 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ ಕುಕ್ 7 ಶತಕ ಮತ್ತು 9 ಅರ್ಧಶತಕಗಳನ್ನು ಸಿಡಿಸಿದ್ದಾರೆ.

ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಟೀಂ ಇಂಡಿಯಾದ ಮಾಜಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಐದನೇ ಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್ ವಿರುದ್ಧದ 28 ಟೆಸ್ಟ್ ಪಂದ್ಯಗಳಲ್ಲಿ ವಿರಾಟ್ 5 ಶತಕ ಮತ್ತು 9 ಅರ್ಧಶತಕಗಳ ಸಹಾಯದಿಂದ 1,991 ರನ್ ಗಳಿಸಿದ್ದಾರೆ. 42.36 ಸರಾಸರಿಯಲ್ಲಿ ಈ ರನ್ ಗಳಿಸಿರುವ ವಿರಾಟ್ 5 ಶತಕಗಳು ಮತ್ತು 9 ಅರ್ಧಶತಕಗಳನ್ನು ಗಳಿಸಿದ್ದಾರೆ.

ಇಂಗ್ಲೆಂಡ್ ಪ್ರವಾಸಕ್ಕೆ ಭಾರತ ತಂಡ: ಶುಭ್​ಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ ಮತ್ತು ವಿಕೆಟ್ ಕೀಪರ್), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಧ್ರುವ್ ಜುರೆಲ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಅರ್ಷದೀಪ್ ಸಿಂಗ್ ಮತ್ತು ಕುಲ್ದೀಪ್ ಯಾದವ್.

TV9 Kannada

Leave a Reply

Your email address will not be published. Required fields are marked *