ಭಾರತ- ಲಂಕಾ ಏಕದಿನ ಸರಣಿ; ಮೊದಲ ಪಂದ್ಯ ಯಾವ ಚಾನೆಲ್​ನಲ್ಲಿ ಎಷ್ಟು ಗಂಟೆಗೆ ಆರಂಭ?

ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಆತಿಥೇಯ ಶ್ರೀಲಂಕಾವನ್ನು ವೈಟ್‌ವಾಶ್ ಮಾಡಿರುವ ಟೀಂ ಇಂಡಿಯಾ ತನ್ನ ಗೆಲುವಿನ ಸರಣಿಯನ್ನು ಮುಂದುವರೆಸಿದೆ. ಟಿ20 ಬಳಿಕ ಇದೀಗ ಏಕದಿನ ಸರಣಿಯ ಸರದಿಯಾಗಿದ್ದು, ಆಗಸ್ಟ್ 2 ರಿಂದ 7 ರವರೆಗೆ ಕೊಲಂಬೊದಲ್ಲಿ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಟಿ20 ವಿಶ್ವಕಪ್ ಗೆದ್ದ ನಂತರ ಟಿ20 ಮಾದರಿಯಿಂದ ನಿವೃತ್ತಿಯಾಗಿರುವ ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಕೂಡ ಈ ಸರಣಿಯಿಂದ ಮೈದಾನಕ್ಕೆ ಮರಳಲಿದ್ದಾರೆ. ರೋಹಿತ್ ನಾಯಕತ್ವದಲ್ಲಿ ತಂಡವು ಮೈದಾನಕ್ಕಿಳಿಯಲಿದ್ದು, ಇದರೊಂದಿಗೆ ಚಾಂಪಿಯನ್ಸ್ ಟ್ರೋಫಿ 2025ಕ್ಕೆ ಟೀಂ ಇಂಡಿಯಾದ ತಯಾರಿಯೂ ಆರಂಭವಾಗಲಿದೆ.

ಶುಭ್‌ಮನ್ ಗಿಲ್‌ಗೆ ಏಕದಿನ ಪಂದ್ಯದಲ್ಲೂ ಉಪನಾಯಕನ ಜವಾಬ್ದಾರಿ ನೀಡಲಾಗಿದೆ. ಬಿಸಿಸಿಐ ಕೇಂದ್ರ ಒಪ್ಪಂದವನ್ನು ಕಳೆದುಕೊಂಡಿದ್ದ ಶ್ರೇಯಸ್ ಅಯ್ಯರ್ ಈ ಸರಣಿಯಲ್ಲಿ ತಂಡದ ಪರ ಕಣಕ್ಕಿಳಿಯಲ್ಲಿದ್ದಾರೆ. ಇವರಲ್ಲದೆ ರಿಯಾನ್ ಪರಾಗ್ ಅವರಿಗೂ ಏಕದಿನದಲ್ಲಿ ಮೊದಲ ಅವಕಾಶ ಸಿಕ್ಕಿದೆ.

ನೇರಪ್ರಸಾರದ ವಿವರ

ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲನೇ ಏಕದಿನ ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಏಕದಿನ ಪಂದ್ಯ ಆಗಸ್ಟ್ 2 ರಂದು 2.30ಕ್ಕೆ ನಡೆಯಲಿದೆ.

ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲನೇ ಏಕದಿನ ಪಂದ್ಯ ಎಲ್ಲಿ ನಡೆಯಲಿವೆ?

ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲನೇ ಏಕದಿನ ಪಂದ್ಯ ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲನೇ ಏಕದಿನ ಪಂದ್ಯದ ನೇರ ಪ್ರಸಾರ ಯಾವ ಚಾನಲ್‌ನಲ್ಲಿ ವೀಕ್ಷಿಸಬಹುದು?

ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲನೇ ಏಕದಿನ ಪಂದ್ಯದ ನೇರ ಪ್ರಸಾರವನ್ನು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ವೀಕ್ಷಿಸಬಹುದು

ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲನೇ ಏಕದಿನ ಪಂದ್ಯದ ಆನ್‌ಲೈನ್ ಸ್ಟ್ರೀಮಿಂಗ್ ಯಾವ ಅಪ್ಲಿಕೇಶನ್‌ನಲ್ಲಿ?

ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲನೇ ಏಕದಿನ ಪಂದ್ಯದ ಆನ್‌ಲೈನ್ ಸ್ಟ್ರೀಮಿಂಗ್ ಸೋನಿ ಲಿವ್ ಅಪ್ಲಿಕೇಶನ್‌ನಲ್ಲಿ ಇರುತ್ತದೆ.

ಸರಣಿ ವೇಳಾಪಟ್ಟಿ

  • 2 ಆಗಸ್ಟ್- ಮೊದಲನೇ ಏಕದಿನ. ಕೊಲಂಬೊ
  • 4 ಆಗಸ್ಟ್- ಎರಡನೇ ಏಕದಿನ. ಕೊಲಂಬೊ
  • 7 ಆಗಸ್ಟ್- ಮೂರನೇ ಏಕದಿನ. ಕೊಲಂಬೊ

ಏಕದಿನ ಸರಣಿಗೆ ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಬ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಶಿವಂ ದುಬೆ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಷರ್ ಪಟೇಲ್, ಖಲೀಲ್ ಅಹ್ಮದ್, ಹರ್ಷಿತ್ ರಾಣಾ.

Source : https://tv9kannada.com/sports/cricket-news/india-vs-sri-lanka-1st-odi-live-streaming-details-in-kannada-psr-876284.html

 

Leave a Reply

Your email address will not be published. Required fields are marked *