India Squad: ಟೀಮ್ ಇಂಡಿಯಾದಲ್ಲಿ ನಾಲ್ವರು ಆಲ್​ರೌಂಡರ್​ಗಳು: ಐವರು ಬ್ಯಾಟ್ಸ್​ಮನ್​ಗಳು

India Test Squad: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯಕ್ಕಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಜೂನ್ 7 ರಂದು ಇಂಗ್ಲೆಂಡ್​ನ ಓವಲ್ ಮೈದಾನದಲ್ಲಿ ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಭಾರತ-ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ.ಈ ಫೈನಲ್ ಫೈಟ್​ಗಾಗಿ ಬಿಸಿಸಿಐ ಒಟ್ಟು 15 ಸದಸ್ಯರನ್ನು ಆಯ್ಕೆ ಮಾಡಲಾಗಿದ್ದು, ಇವರಲ್ಲಿ ಐವರು ಬ್ಯಾಟ್ಸ್​ಮನ್​ಗಳು, ಇಬ್ಬರು ವಿಕೆಟ್ ಕೀಪರ್​ಗಳು, ನಾಲ್ವರು ಆಲ್​ರೌಂಡರ್​ಗಳು ಹಾಗೂ ನಾಲ್ವರು ಬೌಲರ್​ಗಳು ಸ್ಥಾನ ಪಡೆದಿದ್ದಾರೆ.ಇಲ್ಲಿ ಬ್ಯಾಟ್ಸ್​ಮನ್​ಗಳಾಗಿ ರೋಹಿತ್ ಶರ್ಮಾ, ಶುಭ್​ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ ಹಾಗೂ ಅಜಿಂಕ್ಯ ರಹಾನೆ ಸ್ಥಾನ ಪಡೆದಿದ್ದಾರೆ.ಹಾಗೆಯೇ ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ ಹಾಗೂ ಶಾರ್ದೂಲ್ ಠಾಕೂರ್ ಆಲ್​ರೌಂಡರ್​ಗಳಾಗಿ ಸ್ಥಾನ ಪಡೆದಿದ್ದಾರೆ.ಇನ್ನು ಬೌಲರ್​ಗಳಾಗಿ ಮೊಹಮ್ಮದ್ ಶಮಿ, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್ ಹಾಗೂ ಜಯದೇವ್ ಉನಾದ್ಕಟ್ ತಂಡದಲ್ಲಿದ್ದಾರೆ.ವಿಕೆಟ್ ಕೀಪರ್​ ಸ್ಥಾನದಲ್ಲಿ ಈ ಬಾರಿ ಕೆಎಲ್ ರಾಹುಲ್ ಹಾಗೂ ಕೆಎಸ್ ಭರತ್ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಅಂದರೆ ಕಳೆದ ಬಾರಿ ಕೀಪರ್​ ಸ್ಥಾನದಲ್ಲಿ ತಂಡದಲ್ಲಿದ್ದ ಇಶಾನ್ ಕಿಶನ್ ಅವರನ್ನು ಈ ಬಾರಿ ಕೈ ಬಿಡಲಾಗಿದೆ.ಹಾಗೆಯೇ ಕಳೆದ ಟೆಸ್ಟ್ ಸರಣಿಯಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟರ್ ಆಗಿ ತಂಡದಲ್ಲಿದ್ದ ಸೂರ್ಯಕುಮಾರ್ ಯಾದವ್ ಹೊರಬಿದ್ದಿದ್ದು, ಅವರ ಬದಲಿಗೆ ಅಜಿಂಕ್ಯ ರಹಾನೆ ಸ್ಥಾನ ಪಡೆದಿದ್ದಾರೆ. ಇನ್ನು ನಿರೀಕ್ಷೆಯಂತೆ ಗಾಯಗೊಂಡಿರುವ ಜಸ್​ಪ್ರೀತ್ ಬುಮ್ರಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಿಂದ ಹೊರಗುಳಿದಿದ್ದಾರೆ.ಹಾಗೆಯೇ ಕಳೆದ ಟೆಸ್ಟ್ ಸರಣಿಯಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟರ್ ಆಗಿ ತಂಡದಲ್ಲಿದ್ದ ಸೂರ್ಯಕುಮಾರ್ ಯಾದವ್ ಹೊರಬಿದ್ದಿದ್ದು, ಅವರ ಬದಲಿಗೆ ಅಜಿಂಕ್ಯ ರಹಾನೆ ಸ್ಥಾನ ಪಡೆದಿದ್ದಾರೆ. ಇನ್ನು ನಿರೀಕ್ಷೆಯಂತೆ ಗಾಯಗೊಂಡಿರುವ ಜಸ್​ಪ್ರೀತ್ ಬುಮ್ರಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಿಂದ ಹೊರಗುಳಿದಿದ್ದಾರೆ.WTC ಫೈನಲ್​ಗೆ ಭಾರತ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಲ್ ರಾಹುಲ್, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್.

source https://tv9kannada.com/photo-gallery/cricket-photos/india-squad-for-wtc-final-2023-india-test-squad-for-wtc-final-kannada-news-zp-au50-563572.html

Leave a Reply

Your email address will not be published. Required fields are marked *