
ಇಂದು ಆಸ್ಟ್ರೇಲಿಯಾ ಮತ್ತು ಟೀಂ ಇಂಡಿಯಾ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದ ಮೂರನೇ ದಿನವಾಗಿದೆ. ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್ನಲ್ಲಿ ಇನ್ನೂ 318 ರನ್ಗಳ ಹಿನ್ನಡೆಯಲ್ಲಿದೆ. ಎರಡನೇ ದಿನದಾಟದ ಅಂತ್ಯಕ್ಕೆ ಭಾರತ ತಂಡ 38 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 151 ರನ್ ಕಲೆ ಹಾಕಿದೆ. ಅಜಿಂಕ್ಯ ರಹಾನೆ ಮತ್ತು ಕೆಎಸ್ ಭರತ್ ಇಬ್ಬರೂ ಅಜೇಯರಾಗಿದ್ದಾರೆ.