
India vs New Zealand, 1st Odi: ಹೈದರಾಬಾದ್ನ ರಾಜೀವ್ ಗಾಂಧಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ-ನ್ಯೂಜಿಲೆಂಡ್ ನಡುವೆ ಮೊದಲ ಏಕದಿನ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಭಾರತ-ನ್ಯೂಜಿಲೆಂಡ್ ಇದುವರೆಗೆ 113 ಏಕದಿನ ಪಂದ್ಯಗಳಲ್ಲಿ ಮುಖಾಮುಖಿಯಾಗಿದೆ. ಈ ವೇಳೆ ಟೀಮ್ ಇಂಡಿಯಾ ಗೆದ್ದಿರುವುದು 55 ಪಂದ್ಯಗಳಲ್ಲಿ. ಇನ್ನು ನ್ಯೂಜಿಲೆಂಡ್ ತಂಡವು 50 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನು 7 ಪಂದ್ಯಗಳು ನಾನಾ ಕಾರಣಗಳಿಂದ ರದ್ದಾಗಿತ್ತು. ಅಂದರೆ ಇಲ್ಲಿ ಉಭಯ ತಂಡಗಳು ಸಮಬಲ ಹೊಂದಿದೆ ಎಂದೇ ಹೇಳಬಹುದು. ಹೀಗಾಗಿ ಎರಡೂ ತಂಡಗಳಿಂದ ರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು. ಇನ್ನು ಈ ಸರಣಿಯಿಂದ ಕೆಎಲ್ ರಾಹುಲ್ ಹಾಗೂ ಅಕ್ಷರ್ ಪಟೇಲ್ ಹೊರಗುಳಿದಿದ್ದಾರೆ. ಹಾಗೆಯೇ ಬೆನ್ನು ನೋವಿನ ಕಾರಣ ಶ್ರೇಯಸ್ ಅಯ್ಯರ್ ಸರಣಿಯಿಂದ ಹೊರಬಿದ್ದಿದ್ದಾರೆ. ಹೀಗಾಗಿ ಶ್ರೀಲಂಕಾ ವಿರುದ್ಧ ಆಡಿದ್ದ ಮೂವರು ಈ ಸರಣಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ.
ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್.
ನ್ಯೂಜಿಲೆಂಡ್ ಪ್ಲೇಯಿಂಗ್ 11: ಫಿನ್ ಅಲೆನ್, ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ನಾಯಕ), ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್ವೆಲ್, ಹೆನ್ರಿ ಶಿಪ್ಲಿ, ಮಿಚೆಲ್ ಸ್ಯಾಂಟ್ನರ್, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್.
ಟೀಮ್ ಇಂಡಿಯಾ ಏಕದಿನ ತಂಡ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಸ್ ಭರತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ವಾಷಿಂಗ್ಟನ್ ಸುಂದರ್, ಶಹಬಾಝ್ ಅಹ್ಮದ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್.
ನ್ಯೂಜಿಲೆಂಡ್ ಏಕದಿನ ತಂಡ:
ಟಾಮ್ ಲ್ಯಾಥಮ್ (ನಾಯಕ) , ಫಿನ್ ಅಲೆನ್ , ಡೆವೊನ್ ಕಾನ್ವೇ , ಹೆನ್ರಿ ನಿಕೋಲ್ಸ್ , ಡೇರಿಲ್ ಮಿಚೆಲ್ , ಮೈಕೆಲ್ ಬ್ರೇಸ್ವೆಲ್ , ಗ್ಲೆನ್ ಫಿಲಿಪ್ಸ್ , ಮಿಚೆಲ್ ಸ್ಯಾಂಟ್ನರ್ , ಇಶ್ ಸೋಧಿ , ಲಾಕಿ ಫರ್ಗುಸನ್ , ಬ್ಲೇರ್ ಟಿಕ್ನರ್ , ಜೇಕಬ್ ಡಫ್ಫಿ, ಡೌಗ್ ಬ್ರೇಸ್ವೆಲ್, ಮಾರ್ಕ್ ಚಾಪ್ಮನ್, ಹೆನ್ರಿ ಶಿಪ್ಲೆ.