
India vs New Zealand 2nd ODI: ಭಾರತ-ನ್ಯೂಜಿಲೆಂಡ್ ನಡುವಣ 2ನೇ ಏಕದಿನ ಪಂದ್ಯಕ್ಕೆ ಶಹೀದ್ ವೀರ್ ನಾರಾಯಣ್ ಸಿಂಗ್ ಇಂಟರ್ನ್ಯಾಷನಲ್ ಸ್ಟೇಡಿಯಂ ಸಜ್ಜಾಗಿದೆ. ಈ ಪಂದ್ಯದಲ್ಲಿ ಭಾರತ ತಂಡ ಗೆದ್ದರೆ ಸರಣಿ ಟೀಮ್ ಇಂಡಿಯಾ ವಶವಾಗಲಿದೆ. ಇನ್ನು ಸರಣಿ ಕನಸನ್ನು ಜೀವಂತವರಿಸಿಕೊಳ್ಳಲು ಈ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಗೆಲ್ಲಲೇಬೇಕು.
ಮೂರು ಪಂದ್ಯಗಳ ಈ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ರೋಚಕ ಜಯ ಸಾಧಿಸಿತ್ತು. ಹೈದರಾಬಾದ್ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಶುಭ್ಮನ್ ಗಿಲ್ (208) ಆಕರ್ಷಕ ದ್ವಿಶತಕ ಬಾರಿಸಿದ್ದರು. ಇದಾಗ್ಯೂ ಭಾರತ ತಂಡವು ಮೊದಲ ಪಂದ್ಯವನ್ನು ಗೆದ್ದಿರುವುದು ಕೇವಲ 12 ರನ್ಗಳಿಂದ ಮಾತ್ರ.
ಇದೀಗ ರಾಯ್ಪುರದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದರೆ 2-0 ಅಂತರದಿಂದ ಸರಣಿಯನ್ನು ವಶಪಡಿಸಿಕೊಳ್ಳಬಹುದು. ಮತ್ತೊಂದೆಡೆ ಸರಣಿಯನ್ನು ಸಮಬಲಗೊಳಿಸುವ ಇರಾದೆಯೊಂದಿಗೆ ಕಿವೀಸ್ ಬಳಗ ಕಣಕ್ಕಿಳಿಯಲಿದೆ. ಹೀಗಾಗಿ ಉಭಯ ತಂಡಗಳಿಂದ ರೋಚಕ ಪೈಪೋಟಿ ನಿರೀಕ್ಷಿಸಬಹುದು.
ಟೀಮ್ ಇಂಡಿಯಾ ಏಕದಿನ ತಂಡ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಸ್ ಭರತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ವಾಷಿಂಗ್ಟನ್ ಸುಂದರ್, ಶಹಬಾಝ್ ಅಹ್ಮದ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ರಜತ್ ಪಾಟಿದಾರ್.
ನ್ಯೂಜಿಲೆಂಡ್ ಏಕದಿನ ತಂಡ:
ಟಾಮ್ ಲ್ಯಾಥಮ್ (ನಾಯಕ) , ಫಿನ್ ಅಲೆನ್ , ಡೆವೊನ್ ಕಾನ್ವೇ , ಹೆನ್ರಿ ನಿಕೋಲ್ಸ್ , ಡೇರಿಲ್ ಮಿಚೆಲ್ , ಮೈಕೆಲ್ ಬ್ರೇಸ್‌ವೆಲ್ , ಗ್ಲೆನ್ ಫಿಲಿಪ್ಸ್ , ಮಿಚೆಲ್ ಸ್ಯಾಂಟ್ನರ್ , ಇಶ್ ಸೋಧಿ , ಲಾಕಿ ಫರ್ಗುಸನ್ , ಬ್ಲೇರ್ ಟಿಕ್ನರ್ , ಜೇಕಬ್ ಡಫ್ಫಿ, ಡೌಗ್ ಬ್ರೇಸ್‌ವೆಲ್, ಮಾರ್ಕ್ ಚಾಪ್ಮನ್, ಹೆನ್ರಿ ಶಿಪ್ಲೆ.