
India vs New Zealand 2nd T20: ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ-ನ್ಯೂಜಿಲೆಂಡ್ ನುಡವಣ 2ನೇ ಟಿ20 ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಕಿವೀಸ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವು ಜಯ ಸಾಧಿಸಿದೆ. ಹೀಗಾಗಿ ಸರಣಿಯನ್ನು ಉಳಿಸಿಕೊಳ್ಳಲು ಟೀಮ್ ಇಂಡಿಯಾ ಇಂದಿನ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಇನ್ನು ಈ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಗೆದ್ದರೆ ಸರಣಿ ಅವರ ವಶವಾಗಲಿದೆ. ಹೀಗಾಗಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.
ರಾಂಚಿಯಲ್ಲಿ ನಡೆದ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವು ಜಯಭೇರಿ ಬಾರಿಸಿತ್ತು. ಆ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ತಂಡವು 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 176 ರನ್ ಕಲೆಹಾಕಿತು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 9 ವಿಕೆಟ್ ನಷ್ಟಕ್ಕೆ 155 ರನ್ಗಳಿಸಲಷ್ಟೇ ಶಕ್ತರಾಗಿದ್ದರು. ಈ ಮೂಲಕ ಭಾರತ ತಂಡವು 21 ರನ್ಗಳಿಂದ ಸೋಲೋಪ್ಪಿಕೊಂಡಿತ್ತು.
ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ಶುಭ್ಮನ್ ಗಿಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಾಹುಲ್ ತ್ರಿಪಾಠಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ನಾಯಕ) ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಶಿವಂ ಮಾವಿ, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಹಾಲ್.
ನ್ಯೂಜಿಲೆಂಡ್ ಪ್ಲೇಯಿಂಗ್ ಇಲೆವೆನ್: ಫಿನ್ ಅಲೆನ್, ಡೆವೊನ್ ಕಾನ್ವೇ, ಮಾರ್ಕ್ ಚಾಪ್ಮನ್, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಮೈಕೆಲ್ ಬ್ರೇಸ್ವೆಲ್, ಜಾಕೋಬ್ ಡಫಿ, ಇಶ್ ಸೋಧಿ, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್.
ಟೀಮ್ ಇಂಡಿಯಾ ಟಿ20 ತಂಡ:
ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ಪೃಥ್ವಿ ಶಾ, ಸೂರ್ಯಕುಮಾರ್ ಯಾದವ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಶಿವಂ ಮಾವಿ, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.
ನ್ಯೂಜಿಲೆಂಡ್ ಟಿ20 ತಂಡ:
ಮಿಚೆಲ್ ಸ್ಯಾಂಟ್ನರ್ (ನಾಯಕ), ಫಿನ್ ಅಲೆನ್, ಮೈಕೆಲ್ ಬ್ರೇಸ್ವೆಲ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೇ, ಡೇನ್ ಕ್ಲೀವರ್, ಜಾಕೋಬ್ ಡಫಿ, ಲಾಕಿ ಫರ್ಗುಸನ್, ಬೆಂಜಮಿನ್ ಲಿಸ್ಟರ್, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮೈಕೆಲ್ ರಿಪ್ಪನ್, ಹೆನ್ರಿ ಶಿಪ್ಲಿ, ಇಶ್ ಸೋಧಿ, ಬ್ಲೇರ್ ಟಿಕ್ನರ್.