India vs Pakistan Asia Cup 2023: ಇದಕ್ಕೂ ಮುನ್ನ ಗ್ರೂಪ್ ಹಂತದಲ್ಲಿ ಮಳೆ ಅಡ್ಡಿಪಡಿಸಿದ ಕಾರಣ ಭಾರತ-ಪಾಕಿಸ್ತಾನ ಪಂದ್ಯ ರದ್ದಾಗಿತ್ತು. ಇನ್ನು ಈ ಮಧ್ಯೆ ಪಾಕಿಸ್ತಾನ ಈ ಪಂದ್ಯಕ್ಕೆ ಪ್ಲೇಯಿಂಗ್ 11 ಘೋಷಿಸಿದೆ.

India vs Pakistan Asia Cup 2023: ಏಷ್ಯಾ ಕಪ್ 2023 ರಲ್ಲಿ ಭಾರತ-ಪಾಕಿಸ್ತಾನ ತಂಡಗಳು ಮತ್ತೊಮ್ಮೆ ಮುಖಾಮುಖಿಯಾಗಲಿವೆ. ಸೆಪ್ಟೆಂಬರ್ 10 ರಂದು ಅಂದರೆ ಇಂದು ಉಭಯ ತಂಡಗಳ ನಡುವೆ ಸೂಪರ್-4 ಪಂದ್ಯ ನಡೆಯಲಿದೆ. ಈ ಪಂದ್ಯ ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿದೆ. 2023ರ ಏಷ್ಯಾಕಪ್’ನಲ್ಲಿ ಉಭಯ ತಂಡಗಳ ನಡುವಿನ ಎರಡನೇ ಹಣಾಹಣಿ ಇದಾಗಿದೆ.
ಇದಕ್ಕೂ ಮುನ್ನ ಗ್ರೂಪ್ ಹಂತದಲ್ಲಿ ಮಳೆ ಅಡ್ಡಿಪಡಿಸಿದ ಕಾರಣ ಭಾರತ-ಪಾಕಿಸ್ತಾನ ಪಂದ್ಯ ರದ್ದಾಗಿತ್ತು. ಇನ್ನು ಈ ಮಧ್ಯೆ ಪಾಕಿಸ್ತಾನ ಈ ಪಂದ್ಯಕ್ಕೆ ಪ್ಲೇಯಿಂಗ್ 11 ಘೋಷಿಸಿದೆ.
ಭಾರತ-ಪಾಕಿಸ್ತಾನ ಸೂಪರ್-4 ಪಂದ್ಯಕ್ಕೆ ಮೀಸಲು ದಿನವನ್ನು ಇರಿಸಲಾಗಿದೆ. ಆದರೆ ಈ ಪಂದ್ಯದ ಮೇಲೆ ಮಳೆಯ ಭೀತಿ ಮಾತ್ರ ತಪ್ಪಿಲ್ಲ. ಪಲ್ಲೆಕೆಲೆಯಲ್ಲಿ ನಡೆಯಬೇಕಿದ್ದ ಭಾರತದ ಲೀಗ್ ಮಳೆಯಿಂದಾಗಿ ರದ್ದಾಗಿತ್ತು. ಇನ್ನು ನೇಪಾಳ ವಿರುದ್ಧದ ಪಂದ್ಯದ ಮೇಲೂ ಪರಿಣಾಮ ಬೀರಿತ್ತು. ಆದರೆ ಡಿ ಎಲ್ ಎಸ್ ನಿಯಮ ಅನ್ವಯಿಸಿದ ಬಳಿಕ ಟೀಂ ಇಂಡಿಯಾ ಗೆಲುವು ಕಂಡಿತು.
ಕೊಲಂಬೊದಲ್ಲಿ ಕೂಡ ಮಳೆಯಿಂದಾಗಿ ಪಂದ್ಯ ರದ್ದಾಗುವ ಭೀತಿ ಎದುರಾಗಿದೆ. ವಿವಿಧ ಹವಾಮಾನ ಮುನ್ಸೂಚನೆಗಳ ಪ್ರಕಾರ, ಭಾನುವಾರದ ಪಂದ್ಯಕ್ಕೆ ಮಳೆಯ ಸಾಧ್ಯತೆ 90% ಇದೆ. ಮೀಸಲು ದಿನವೂ ಮಳೆಯಾಗುವ ಸಾಧ್ಯತೆಯಿದೆ.
ಭಾರತ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್’ಮನ್ ದಿನೇಶ್ ಕಾರ್ತಿಕ್ ಕೂಡ ಭಾರತ-ಪಾಕ್ ಪಂದ್ಯದ ದಿನದಂದು ಮಳೆಯ ಮುನ್ಸೂಚನೆಯ ಫೋಟೋವನ್ನು ಹಂಚಿಕೊಂಡಿದ್ದಾರೆ. ಅವರು ಶೇರ್ ಮಾಡಿರುವ ಫೋಟೋದಲ್ಲಿ ಮಧ್ಯಾಹ್ನ 1ರಿಂದ ಸಂಜೆ 7ರವರೆಗೆ ಶೇ.90ರಷ್ಟು ಮಳೆಯಾಗುವ ಮುನ್ಸೂಚನೆ ಇದೆ.
ಭಾರತ:
ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್ ಮತ್ತು ಪ್ರಸಿದ್ಧ್ ಕೃಷ್ಣ.
ಪಾಕಿಸ್ತಾನ:
ಬಾಬರ್ ಅಜಮ್ (ನಾಯಕ), ಅಬ್ದುಲ್ಲಾ ಶಫೀಕ್, ಫಖರ್ ಜಮಾನ್, ಇಮಾಮ್-ಉಲ್-ಹಕ್, ಸಲ್ಮಾನ್ ಅಲಿ ಆಗಾ, ಇಫ್ತಿಕರ್ ಅಹ್ಮದ್, ಮೊಹಮ್ಮದ್ ರಿಜ್ವಾನ್, ಮೊಹಮ್ಮದ್ ಹ್ಯಾರಿಸ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಉಸಾಮಾ ಮಿರ್, ಫಹೀಮ್ ಅಶ್ರಫ್, ಹರಿಸ್ ರೌಫ್, ಮೊಹಮ್ಮದ್ ವಾಸ್ ಜೂನಿಯರ್, ನಸೀಮ್ ಶಾ, ಶಾಹೀನ್ ಶಾ ಆಫ್ರಿದಿ, ಸೌದ್ ಶಕೀಲ್ ಮತ್ತು ತಯ್ಯಬ್ ತಾಹಿರ್ (ಮೀಸಲು ಆಟಗಾರ)
ಸಮಗ್ರ ಸುದ್ದಿಗಳಿಗಾಗಿ WhatsApp Group ಸೇರಿ: https://chat.whatsapp.com/KnDIfiBURQ9G5sLEJLqshk
ನಮ್ಮ Facebook page: https://www.facebook.com/samagrasudii