ಭಾರತ ಮತ್ತು ದಕ್ಷಿಣ ಆಫ್ರಿಕಾ (India vs South Africa) ನಡುವಿನ ಎರಡು ಟೆಸ್ಟ್ ಪಂದ್ಯಗಳ ಸರಣಿಯ ಮೊದಲ ಪಂದ್ಯವು ನವೆಂಬರ್ 14 ರಿಂದ18 ರವರೆಗೆ ಕೋಲ್ಕತ್ತಾದ ಐತಿಹಾಸಿಕ ಕ್ರಿಕೆಟ್ ಕ್ರೀಡಾಂಗಣವಾದ ಈಡನ್ ಗಾರ್ಡನ್ಸ್‌ನಲ್ಲಿ (Eden Gardens) ನಡೆಯಲಿದೆ. ಎರಡೂ ತಂಡಗಳು ತಮ್ಮ ಕೊನೆಯ ಟೆಸ್ಟ್ ಸರಣಿಯನ್ನು ಏಷ್ಯಾದಲ್ಲಿ ಆಡಿದ್ದು, ಒಂದೆಡೆ ಟೀಂ ಇಂಡಿಯಾ, ವೆಸ್ಟ್ ಇಂಡೀಸ್ ತಂಡವನ್ನು ತವರಿನಲ್ಲಿ 2-0 ಅಂತರದಿಂದ ಸೋಲಿಸಿದರೆ, ಮತ್ತೊಂದೆಡೆ ದಕ್ಷಿಣ ಆಫ್ರಿಕಾ, ಪಾಕಿಸ್ತಾನ ವಿರುದ್ಧದ 2 ಪಂದ್ಯಗಳ ಸರಣಿಯನ್ನು 1-1 ಅಂತರದಿಂದ ಡ್ರಾ ಮಾಡಿಕೊಂಡಿತು.
ಹೀಗಾಗಿ ಉಭಯ ತಂಡಗಳು ಮೊದಲ ಪಂದ್ಯವನ್ನು ಗೆದ್ದು ಸರಣಿಯಲ್ಲಿ ಮುನ್ನಡೆ ಸಾಧಿಸುವ ಇರಾದೆಯಲ್ಲಿವೆ. ಆದಾಗ್ಯೂ ಈ ಪಂದ್ಯಕ್ಕೆ ಮಳೆ ಅಡ್ಡಿಪಡಿಸುತ್ತಾ ಎಂಬ ಆತಂಕ ಅಭಿಮಾನಿಗಳಲ್ಲಿ ಮೂಡಿದೆ.
ಕೋಲ್ಕತ್ತಾದ ಹವಾಮಾನ ಹೇಗಿರಲಿದೆ?
ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣವು ಬಹಳ ಸಮಯದ ನಂತರ ಟೆಸ್ಟ್ ಪಂದ್ಯವನ್ನು ಆಯೋಜಿಸುತ್ತಿದೆ. ಹೀಗಾಗಿ ಅಭಿಮಾನಿಗಳು ಕೂಡ ಈ ಪಂದ್ಯಕ್ಕಾಗಿ ಕಾದುಕುಳಿತಿದ್ದಾರೆ. ಆದರೆ ಈ ಪಂದ್ಯಕ್ಕೆ ಮಳೆ ಅಡ್ಡಿಪಡಿಸುತ್ತಾ ಎಂಬ ಆತಂಕ ಅಭಿಮಾನಿಗಳಲ್ಲಿದೆ. ಆದಾಗ್ಯೂ ಈ ಪಂದ್ಯಕ್ಕೆ ಮಳೆಯಿಂದ ಯಾವುದೇ ಅಡೆತಡೆಗಳಿಲ್ಲ ಎಂಬುದು ಸ್ಪಷ್ಟವಾಗಿದೆ. ಮುಂದಿನ ಐದು ದಿನಗಳವರೆಗೆ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಹವಾಮಾನಕ್ಕೆ ಸಂಬಂಧಿಸಿದಂತೆ, ಯಾವುದೇ ದಿನ ಮಳೆಯಾಗುವ ಸಾಧ್ಯತೆಯಿಲ್ಲ. ಇದಲ್ಲದೆ, ಇಡೀ ಪಂದ್ಯಕ್ಕೆ ಬಿಸಿಲಿನ ವಾತಾವರಣವಿರುತ್ತದೆ ಎಂದು ಮುನ್ಸೂಚನೆ ನೀಡಲಾಗಿದೆ. ಮೋಡ ಕವಿದ ವಾತಾವರಣವಿರಲಿದ್ದು, ಇದು ವೇಗದ ಬೌಲರ್‌ಗಳಿಗೆ ಸವಾಲಾಗಿ ಪರಿಣಮಿಸಬಹುದು. ಐದು ದಿನಗಳಲ್ಲಿ ತಾಪಮಾನವು 28 ರಿಂದ 31 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ ಎಂದು ನಿರೀಕ್ಷಿಸಲಾಗಿದೆ.
ಈಡನ್ ಗಾರ್ಡನ್ಸ್ ಪಿಚ್ ವರದಿ
ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಪಿಚ್ ಬಗ್ಗೆ ಹೇಳುವುದಾದರೆ, ಇದನ್ನು ಬ್ಯಾಟಿಂಗ್ ಸ್ನೇಹಿ ಎಂದು ಪರಿಗಣಿಸಲಾಗುತ್ತದೆ. ಈ ಪಿಚ್‌ನಲ್ಲಿ ಚೆಂಡು ಚೆನ್ನಾಗಿ ಪುಟಿಯುತ್ತದೆ, ಇದರಿಂದಾಗಿ ಹೊಡೆತಗಳನ್ನು ಆಡಲು ಸುಲಭವಾಗುತ್ತದೆ. ಮೊದಲ ದಿನದ ಮೊದಲ ಕೆಲವು ಓವರ್‌ಗಳಿಗೆ ಪಿಚ್ ಹೊಸ ಚೆಂಡಿನೊಂದಿಗೆ ಸೀಮ್ ಮತ್ತು ಸ್ವಿಂಗ್ ಅನ್ನು ನೀಡಬಹುದು. ಆದಾಗ್ಯೂ, ಚೆಂಡು ಹಳೆಯದಾಗುತ್ತಿದ್ದಂತೆ, ಸ್ಪಿನ್ನರ್‌ಗಳು ಪ್ರಾಬಲ್ಯ ಸಾಧಿಸಬಹುದು, ವಿಶೇಷವಾಗಿ ಮೂರನೇ ಮತ್ತು ನಾಲ್ಕನೇ ದಿನಗಳಲ್ಲಿ.
ಈಡನ್ ಗಾರ್ಡನ್ಸ್‌ನಲ್ಲಿ ಭಾರತದ ದಾಖಲೆ ಹೇಗಿದೆ?
ಭಾರತವು 1934 ರಲ್ಲಿ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ತನ್ನ ಮೊದಲ ಟೆಸ್ಟ್ ಪಂದ್ಯವನ್ನು ಆಡಿತು. ಅಂದಿನಿಂದ, ಭಾರತವು ಐತಿಹಾಸಿಕ ಮೈದಾನದಲ್ಲಿ 42 ಟೆಸ್ಟ್ ಪಂದ್ಯಗಳನ್ನು ಆಡಿದೆ. ಇದರಲ್ಲಿ 13 ಪಂದ್ಯಗಳಲ್ಲಿ ಗೆದ್ದಿದ್ದರೆ, 9 ಪಂದ್ಯಗಳಲ್ಲಿ ಸೋತಿದೆ. ಉಳಿದಂತೆ 20 ಪಂದ್ಯಗಳು ಡ್ರಾದಲ್ಲಿ ಕೊನೆಗೊಂಡಿವೆ.
Views: 18