
India vs Sri Lanka, 2nd T20 Live Score: ಶ್ರೀಲಂಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದಾರೆ. ಮೂರು ಪಂದ್ಯಗಳ ಈ ಸರಣಿಯ ಮೊದಲ ಪಂದ್ಯದಲ್ಲಿ ಗೆದ್ದು ಬೀಗಿರುವ ಟೀಮ್ ಇಂಡಿಯಾ ಈ ಪಂದ್ಯದಲ್ಲಿ ಜಯ ಸಾಧಿಸಿದರೆ ಸರಣಿ ವಶಪಡಿಸಿಕೊಳ್ಳಬಹುದು. ಅತ್ತ ಸರಣಿ ಉಳಿಸಿಕೊಳ್ಳಬೇಕಿದ್ದರೆ 2ನೇ ಪಂದ್ಯದಲ್ಲಿ ಶ್ರೀಲಂಕಾ ಗೆಲ್ಲಲೇಬೇಕು. ಹೀಗಾಗಿ ಉಭಯ ತಂಡಗಳಿಂದ ರೋಚಕ ಹೋರಾಟವನ್ನು ನಿರೀಕ್ಷಿಸಬಹುದಾಗಿದೆ.
ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೂ ಭಾರತೀಯ ಬ್ಯಾಟ್ಸ್ಮನ್ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಅದರಲ್ಲೂ ಚೊಚ್ಚಲ ಪಂದ್ಯವಾಡಿದ ಶುಭ್ಮನ್ ಗಿಲ್ ನಿರಾಸೆ ಮೂಡಿಸಿದರೆ, ಸೂರ್ಯಕುಮಾರ್ ಯಾದವ್ ಸಿಡಿಯಲಿಲ್ಲ. ಇನ್ನು ಸಂಜು ಸ್ಯಾಮ್ಸನ್ ಬಂದ ವೇಗದಲ್ಲೇ ಹಿಂತಿರುಗಿದ್ದರು. ಅಲ್ಲದೆ ಮೊದಲ ಪಂದ್ಯದ ಫೀಲ್ಡಿಂಗ್ ವೇಳೆ ಗಾಯಗೊಂಡಿರುವ ಸ್ಯಾಮ್ಸನ್ ಈ ಸರಣಿಯಿಂದ ಹೊರಬಿದ್ದಿದ್ದಾರೆ. ಹೀಗಾಗಿ ಭಾರತ ತಂಡದ ಪ್ಲೇಯಿಂಗ್ ಇಲೆವೆನ್ನಲ್ಲಿ ಪ್ರಮುಖ ಬದಲಾವಣೆ ಕಂಡು ಬರಬಹುದು.
ಶ್ರೀಲಂಕಾ ಟಿ20 ತಂಡ: ಕುಸಾಲ್ ಮೆಂಡಿಸ್, ದಸುನ್ ಶನಕ (ನಾಯಕ) , ಪಾತುಂ ನಿಸ್ಸಂಕ , ಧನಂಜಯ ಡಿ ಸಿಲ್ವ , ಚರಿತ್ ಅಸಲಂಕ , ಭಾನುಕ ರಾಜಪಕ್ಸೆ , ವನಿಂದು ಹಸರಂಗ , ಚಾಮಿಕ ಕರುಣಾರತ್ನೆ , ಮಹೀಶ್ ತೀಕ್ಷಣ , ದಿಲ್ಶನ್ ಮಧುಶಂಕ , ಅಶ್ಮೋದ್ ಕುಮಾರ , ಅವಿಶ್ಕ ಕುಮಾರ , ಅವಿಷ್ಕ ಕುಮಾರ ವೆಲ್ಲಲಾಗೆ , ನುವಾನ್ ತುಷಾರ , ಕಸುನ್ ರಜಿತ , ಸದೀರ ಸಮರವಿಕ್ರಮ.
ಟೀಮ್ ಇಂಡಿಯಾ ಟಿ20 ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್ (ಉಪನಾಯಕ), ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್, ಶಿವಂ ಮಾವಿ, ಮುಖೇಶ್ ಕುಮಾರ್, ಜಿತೇಶ್ ಶರ್ಮಾ.