ಜನವರಿ 26 ರಂದು ಭಾರತದ 74ನೇ ಗಣರಾಜ್ಯೋತ್ಸವ ಕಾರ್ಯಕ್ರಮ

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ(ಜನವರಿ.25): ಜಿಲ್ಲಾಡಳಿತ ವತಿಯಿಂದ ಜನವರಿ 26ರಂದು ಬೆಳಿಗ್ಗೆ 9 ಗಂಟೆಗೆ ಚಿತ್ರದುರ್ಗ ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ಶ್ರೀ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ಭಾರತದ 74ನೇ ಗಣರಾಜ್ಯೋತ್ಸವ ದಿನಾಚರಣೆ ಆಯೋಜಿಸಲಾಗಿದೆ.

ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ. ನಾರಾಯಣಸ್ವಾಮಿ ಹಾಗೂ ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ಘನ ಉಪಸ್ಥಿತಿ ವಹಿಸುವವರು.

ಕೃಷಿ ಸಚಿವರು ಮತ್ತು  ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಅವರು ರಾಷ್ಟ್ರ ಧ್ವಜಾರೋಹಣ ಮತ್ತು  ಗಣರಾಜ್ಯೋತ್ಸವದ ಸಂದೇಶ ನೀಡುವರು.

ವಿಶೇಷ ಅಹ್ವಾನಿತರಾಗಿ ವಿಧಾನ ಪರಿಷತ್ ಮುಖ್ಯ ಸಚೇತಕರು ಹಾಗೂ ಸದಸ್ಯರಾದ ಡಾ. ವೈ.ಎ ನಾರಾಯಣಸ್ವಾಮಿ ಆಗಮಿಸುವರು. ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಹೊಳಲ್ಕೆರೆ ಶಾಸಕರು ಹಾಗೂ ರಾಜ್ಯ ಸಾರಿಗೆ ನಿಗಮ ಅಧ್ಯಕ್ಷ ಎಂ. ಚಂದ್ರಪ್ಪ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಅಧ್ಯಕ್ಷ ಹಾಗೂ ಹೊಸದುರ್ಗ ಶಾಸಕ ಗೂಳಿಹಟ್ಟಿ ಡಿ ಶೇಖರ್, ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ, ಹಿರಿಯೂರು ಶಾಸಕಿ ಪೂರ್ಣಿಮಾ ಕೆ ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಎಂ ಗೌಡ, ಕೆ.ಎಸ್. ನವೀನ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಜಿ.ಟಿ. ಸುರೇಶ್, ನಗರಸಭೆ ಅಧ್ಯಕ್ಷೆ ಬಿ. ತಿಪ್ಪಮ್ಮ ಭಾಗವಹಿಸುವರು.

ಜಿಲ್ಲಾ ಅಡಳಿತ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ನಗರಸಭೆ ಮತ್ತು ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಇವರ ಸಹಯೋಗದಲ್ಲಿ ಸಂಜೆ 5 ಗಂಟೆಗೆ ಚಿತ್ರದುರ್ಗ ತ.ರಾ.ಸು ರಂಗಮಂದಿರದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

The post ಜನವರಿ 26 ರಂದು ಭಾರತದ 74ನೇ ಗಣರಾಜ್ಯೋತ್ಸವ ಕಾರ್ಯಕ್ರಮ first appeared on Kannada News | suddione.

from ಚಿತ್ರದುರ್ಗ – Kannada News | suddione https://ift.tt/CABPWJc
via IFTTT

Leave a Reply

Your email address will not be published. Required fields are marked *