Indonesia Open 2023: ಇಡನಷಯ ಓಪನ ಗದದ ಹಸ ಇತಹಸ ನರಮಸದ ಚರಗ-ಸತವಕ

Indonesia Open 2023: ಜಕಾರ್ತಾದಲ್ಲಿ ನಡೆದ ಇಂಡೋನೇಷ್ಯಾ ಓಪನ್‌ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಸಾತ್ವಿಕ್‌ಸಾಯಿರಾಜ್ ರಂಕಿರೆಡ್ಡಿ (Satwiksairaj Rankireddy) ಮತ್ತು ಚಿರಾಗ್ ಶೆಟ್ಟಿ (Chirag Shetty) ಜೋಡಿ ಪುರುಷರ ಡಬಲ್ಸ್ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದ್ದಾರೆ. ಇದು BWF 1000 ಸೂಪರ್ ಸಿರೀಸ್‌ನಲ್ಲಿ ಭಾರತಕ್ಕೆ ಲಭಿಸಿದ ಮೊದಲ ಪ್ರಶಸ್ತಿ ಎಂಬುದು ವಿಶೇಷ. ಫೈನಲ್ ಪಂದ್ಯದಲ್ಲಿ ಭಾರತದ ಜೋಡಿಯು ಮಲೇಷ್ಯಾದ ಆರೋನ್ ಚಿಯಾ ಮತ್ತು ವೂಯಿ ಯಿಕ್ ಯೆಹ್ ಅವರನ್ನು 21-17, 21-17 ಸೆಟ್‌ಗಳಿಂದ ಸೋಲಿಸಿ ಇತಿಹಾಸ ನಿರ್ಮಿಸಿದರು.ಇದರೊಂದಿಗೆ 41 ವರ್ಷಗಳ ಇತಿಹಾಸ ಹೊಂದಿರುವ ಬಿಡಬ್ಲ್ಯುಎಫ್ 1000 ಸೂಪರ್ ಸಿರೀಸ್‌ನಲ್ಲಿ ಭಾರತೀಯ ತಾರೆಗಳು ಚಾಂಪಿಯನ್​ ಪಟ್ಟ ಅಲಂಕರಿಸಿದಂತಾಗಿದೆ. ಇದಕ್ಕೂ ಮುನ್ನ ಏಳನೇ ಶ್ರೇಯಾಂಕದ ಸಾತ್ವಿಕ್ ಮತ್ತು ಚಿರಾಗ್ ಜೋಡಿಯು ಕೊರಿಯಾದ ಶ್ರೇಯಾಂಕ ರಹಿತ ಮಿನ್ ಹ್ಯುಕ್ ಕಾಂಗ್ ಮತ್ತು ಸೆಯುಂಗ್ ಜೇ ಸಿಯೊ ಅವರನ್ನು 17-21 21-19 21-18 ಸೆಟ್‌ಗಳಿಂದ ಸೋಲಿಸಿ ತಮ್ಮ ಚೊಚ್ಚಲ ಸೂಪರ್-1000 ಫೈನಲ್‌ಗೆ ಲಗ್ಗೆ ಇಟ್ಟಿದ್ದರು. ಇದೀಗ ಫೈನಲ್​ನಲ್ಲಿ ಮಲೇಷ್ಯಾದ ಆರೋನ್ ಚಿಯಾ ಮತ್ತು ವೂಯಿ ಯಿಕ್ ಯೆಹ್ ಅವರನ್ನು ಮಣಿಸಿ ಐತಿಹಾಸಿಕ ಸಾಧನೆ ಮಾಡಿರುವುದು ವಿಶೇಷ.ಈ ಐತಿಹಾಸಿಕ ಸಾಧನೆಗೂ ಮುನ್ನ ಏಪ್ರಿಲ್​ನಲ್ಲಿ ನಡೆದ ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲೂ ಸಾತ್ವಿಕ್ ಮತ್ತು ಚಿರಾಗ್ ಶೆಟ್ಟಿ ಜೋಡಿ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದರು. ಮಲೇಷ್ಯಾದ ಓಂಗ್ ಯೂ ಸಿನ್ ಮತ್ತು ಟಿಯೊ ಇಯೊ ಯೀ ಜೋಡಿಯನ್ನು ಸೋಲಿಸಿ ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ ಮೊಟ್ಟ ಮೊದಲ ಚಿನ್ನದ ಪದಕ ತಂದುಕೊಟ್ಟ ಐತಿಹಾಸಿಕ ಸಾಧನೆ ಮಾಡಿದ್ದರು.

source https://tv9kannada.com/photo-gallery/indonesia-open-2023-satwiksairaj-rankireddy-chirag-shetty-clinch-mens-doubles-title-zp-603637.html

Views: 0

Leave a Reply

Your email address will not be published. Required fields are marked *