“ಒಳ ಮೀಸಲಾತಿಗೆ ಸಂಬಂಧಪಟ್ಟಂತೆ ವಿಶೇಷ ಅಧಿವೇಶನದಲ್ಲಿ ಒಳ ಮೀಸಲಾತಿಯನ್ನು ಜಾರಿ ಮಾಡಬೇಕು”.

ಚಿತ್ರದುರ್ಗ ಆ. 08

ವರದಿ ಮತ್ತು ಪೋಟೋ ಸುರೇಶ್ ಪಟ್ಟಣ್


ರಾಜ್ಯ ಸರ್ಕಾರವೂ ಆಗಸ್ಟ್-16 ರಂದು ಒಳ ಮೀಸಲಾತಿಗೆ ಸಂಬಂಧಪಟ್ಟಂತೆ ವಿಶೇಷ ಅಧಿವೇಶನವನ್ನು ಕರೆದಿದ್ದು ಈ ಅಧಿವೇಶನದಲ್ಲಿ ಒಳ ಮೀಸಲಾತಿಯನ್ನು ಜಾರಿ ಮಾಡಬೇಕು. ಹಾಗೂ ರಾಜ್ಯದಲ್ಲಿ ಮಾದಿಗ ಸಮುದಾಯ ಹೆಚ್ಚಿರುವುದರಿಂದ ಶೇ. 6% ರಿಂದ 8% ರಷ್ಟು ಮೀಸಲಾತಿಯನ್ನು ನೀಡಬೇಕೆಂದು ಚಿತ್ರದುರ್ಗ ಜಿಲ್ಲಾ ಸ್ವಾಭಿಮಾನಿ ಮಾದಿಗ ಮಹಾಸಭಾದ ಮುಖಂಡರುಗಳಾದ ಮೋಹನ್ ಸರ್ಕಾರವನ್ನು ಆಗ್ರಹಿಸಿದ್ದಾರೆ. 

ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಆಗಸ್ಟ್ -01ಕ್ಕೆ ಸುಪ್ರೀಂ ಕೋರ್ಟ್ ಒಳ ಮೀಸಲಾತಿ ಜಾರಿ ವಿಚಾರವಾಗಿ ರಾಜ್ಯ ಸರ್ಕಾರಗಳಿಗೆ ಅಧಿಕಾರವಿದೆ ಎಂದು ಆದೇಶ ನೀಡಿ ಒಂದು ವರ್ಷ ಕಳೆದಿದ್ದರ ಹಿನ್ನೆಲೆಯಲ್ಲಿ ಸ್ವಾಭಿಮಾನಿ ಮಾದಿಗ ಮಹಾಸಭಾ ಹಾಗೂ ಇತರೆ ದಲಿತ ಸಮುದಾಯಗಳು ಪ್ರತಿಭಟನೆ ನಡೆಸಿದ ಪರಿಣಾಮವಾಗಿ ಒಳ ಮೀಸಲಾತಿ ಜಾರಿ ವಿಚಾರವಾಗಿ ಸರ್ಕಾರ ಎಚ್ಚೆತ್ತುಕೊಂಡಿದೆ. ನಿನ್ನೆ ಒಳ ಮೀಸಲಾತಿ ಜಾರಿ ವಿಚಾರವಾಗಿ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ರವರು ನಡೆಸಿದ ಸಮೀಕ್ಷೆಯ ವರದಿಯನ್ನು ಸರ್ಕಾರ ಸ್ವೀಕರಿಸಿದೆ. ಆದರೂ ಸಹ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿ ಮಾಡಲು ಮೀನಾಮೇಷ ಎಣಿಸುತ್ತಿದೆ. ಇನ್ನೂ ಸಹ ಕುಂಟ ನೆಪ ಹೇಳುತ್ತಾ ಹೊರಟಿದೆ ಎಂದು ದೂರಿದರು.

ಒಳ ಮೀಸಲಾತಿ ವಿಚಾರವಾಗಿ ಹಿಂದೆ ರಚನೆಯಾದ ಎಲ್ಲಾ ಆಯೋಗಗಳು ನೀಡಿದ ವರದಿ ಅನ್ವಯ ಮಾದಿಗ ಸಮುದಾಯ ಹೆಚ್ಚಿದೆ.. ಆದ್ದರಿಂದ ಶೇ.6%ರಷ್ಟು ಮೀಸಲಾತಿ ನೀಡಬೇಕೆಂದು ಶಿಫಾರಸ್ಸು ಮಾಡಿವೆ. ರಾಜ್ಯದಲ್ಲಿ ಮಾದಿಗ ಸಮುದಾಯ ಹೆಚ್ಚಿರುವುದರಿಂದ ಶೇ. 6% ರಿಂದ 8% ರಷ್ಟು ಮೀಸಲಾತಿಯನ್ನು ನೀಡಬೇಕೆಂದು ಆಗ್ರಹಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯರವರು ಸಾಮಾಜಿಕ ನ್ಯಾಯದ ಹರಿಕಾರ ಎಂದು ಹೇಳುತ್ತಾರೆ ಆದರೆ ಒಳ ಮೀಸಲಾತಿ ಜಾರಿಯಲ್ಲಿ ವಿಳಂಭ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ನಾಯಕತ್ವದ ಛಾತಿಯನ್ನು ತೋರಿಸುವಲ್ಲಿ ವಿಫಲರಾಗಿದ್ದಾರೆ ಎಂದರು.

ರಾಜ್ಯದಲ್ಲಿ ನ್ಯಾ.ಸದಾಶಿವ ಆಯೋಗ, ಮಾಧುಸ್ವಾಮಿ ಆಯೋಗ ಹಾಗೂ ನ್ಯಾ.ನಾಗಮೋಹನ್ ದಾಸ್ ಆಯೋಗ ಎಲ್ಲವೂ ಸಹಾ ಕರ್ನಾಟಕದಲ್ಲಿ ಮಾದಿಗ ಮತ್ತು ಅದರ ಉಪ ಜಾತಿಗಳು ಪರಿಶಿಷ್ಟ ಜಾತಿಗಳಲ್ಲಿ ಅತ್ಯಂತ ದೊಡ್ಡ ಸಮೂಹ ಎಂದು ಸ್ವಷ್ಟವಾಗಿ ಹೇಳಿವೆ. ಎಲ್ಲಾ ಆಯೋಗಗಳು ಸಹಾ ಮಾದಿಗ ಉಪ ಜಾತಿಗಳ ಗುಂಪಿಗೆ ಶೇ, 6 ರಷ್ಟು ಮೀಸಲಾತಿಯನ್ನು ನಿಗಧಿ ಮಾಡಿವೆ. ಹೀಗಾಗಿ ಸಿದ್ದರಾಮಯ್ಯ ರವರು ಮಾದಿಗ ಪಾಲಿನ ಶೇ.6 ರಷ್ಟು ಮೀಸಲಾತಿಯನ್ನು ಪ್ರತ್ಯೇಕವಾಗಿ ಘೊಷಿಸಲಿ ಎಂದು ಒತ್ತಾಯಿಸಿದ್ದಾರೆ. 

ಆಗಸ್ಟ್ -16 ರೊಳಗೆ ಒಳ ಮೀಸಲಾತಿಯನ್ನು ಜಾರಿ ಮಾಡಿ ಸಾಮಾಜಿಕ ನ್ಯಾಯ ಒದಗಿಸಲಿ ಆಗಸ್ಟ್-16 ರಂದು ಒಳ ಮೀಸಲಾತಿಯನ್ನು ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಸ್ವಾಭಿಮಾನಿ ಮಾದಿಗ ಮಹಾಸಭಾ ಹಾಗೂ ದಲಿತ ಸಂಘಟನೆಗಳು ಸೇರಿ ಉಗ್ರವಾದ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಿದ್ದಾರೆ.

ಗೋಷ್ಟಿಯಲ್ಲಿ ಭಾಗವಹಿಸಿದ್ದ ಶ್ರೀನಿವಾಸ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ದಲಿತರ ಪರ ಎಂದು ಬಾಯಿಯಲ್ಲಿ ಹೇಳುತ್ತಾರೆ ಹೋರೆತು ಕಾರ್ಯ ರೂಪಕ್ಕೆ ಬರುತ್ತಿಲ್ಲ, ಇಲ್ಲಿಯವರೆಗೆ ಒಳ ಮೀಸಲಾತಿ ನಮಗೆ ಮಾಡಲು ಅಧಿಕಾರ ಇಲ್ಲ ಎನ್ನುತ್ತಿದ್ದವರಿಗೆ ನ್ಯಾಯಾಲಯ ಆಧೇಶವನ್ನು ನೀಡಿ ನೀವು ಮಾಡಿ ಎಂದು ಹೇಳಿತ್ತು ಇದಾದ ನಂತರ ಮುಖ್ಯಮಂತ್ರಿಗಳು ಆಯೋಗವನ್ನು ನೇಮಕ ಮಾಡಿ ವರದಿ ಬರಲಿ ಎಂದರು ಈಗ ವರದಿಯೂ ಸಹಾ ಬಂದಿದೆ ಅದರೂಈ ಸಹಾ ಇದನ್ನು ಜಾರಿ ಮಾಡಲು ವಿಳಂಭ ಮಾಡುತ್ತಿದ್ದಾರೆ ಈ ಸರ್ಕಾರಕ್ಕೆ ಮಾದಿಗ ಜನಾಂಗದ ಮೇಲೆ ನಿಜವಾದ ಪ್ರೀತಿ ಇಲ್ಲವಾಗಿದೆ ಬರೀ ತೋರಿಕೆಯ ಪ್ರೀತಿಯಾಗಿದೆ ಎಂದು ದೂರಿದರು.

ಗೋಷ್ಟಿಯಲ್ಲಿ ತಾ.ಪಂ.ಮಾಜಿ ಸದಸ್ಯ ಜಯ್ಯಪ್ಪ, ಪ್ರಹ್ಲಾದ್, ಪರಶುರಾಮ್, ನಾಗರಾಜ್ ಸಿದ್ಧಾರ್ಥ ಉಪಸ್ಥಿತರಿದ್ದರು. 

Views: 4

Leave a Reply

Your email address will not be published. Required fields are marked *