IPL 2023: ಐಪಿಎಲ್​ನಿಂದ 8 ಆಟಗಾರರು ಔಟ್: ನಾಲ್ವರು ಇನ್..!

IPL 2023: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಆರಂಭವಾಗಲು ಇನ್ನು ದಿನಗಳು ಮಾತ್ರ ಉಳಿದಿವೆ. ಈಗಾಗಲೇ  ಗಾಯದ ಹಿನ್ನಲೆ ಟೂರ್ನಿಯಿಂದ 8 ಆಟಗಾರರು ಹಿಂದೆ ಸರಿದಿದ್ದಾರೆ. ಆದರೆ ಇವರ ಬದಲಿಗೆ ನಾಲ್ವರು ಆಟಗಾರರು ಮಾತ್ರ ಐಪಿಎಲ್​ನಲ್ಲಿ ಸ್ಥಾನ ಪಡೆದಿದ್ದಾರೆ.ಅಂದರೆ ಒಟ್ಟು 8 ಆಟಗಾರರಲ್ಲಿ ನಾಲ್ವರ ಬದಲಿ ಆಟಗಾರರ ಆಯ್ಕೆ ನಡೆಯಬೇಕಿದೆ. ಇತ್ತ ಐಪಿಎಲ್​ ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ಫ್ರಾಂಚೈಸಿಗಳ ನಡೆ ಕೂಡ ಅಚ್ಚರಿ ಮೂಡಿಸಿದೆ. ಇನ್ನು ಈ ಬಾರಿಯ ಐಪಿಎಲ್​ಗೆ ಬದಲಿ ಆಟಗಾರರಾಗಿ ಆಯ್ಕೆಯಾಗಿರುವ ಪ್ಲೇಯರ್ಸ್ ಯಾರೆಲ್ಲಾ ಎಂಬುದರ ಮಾಹಿತಿ ಈ ಕೆಳಗಿನಂತಿದೆ.ಮೈಕೆಲ್ ಬ್ರೇಸ್​ವೆಲ್ (ನ್ಯೂಜಿಲೆಂಡ್): ಆರ್​ಸಿಬಿ ತಂಡದಲ್ಲಿದ್ದ ಇಂಗ್ಲೆಂಡ್ ಆಲ್​ರೌಂಡರ್ ವಿಲ್ ಜಾಕ್ಸ್ ಗಾಯದ ಕಾರಣ ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ. ಇದೀಗ ಅವರ ಬದಲಿಗೆ ನ್ಯೂಜಿಲೆಂಡ್​ನ ಎಡಗೈ ದಾಂಡಿಗ ಮೈಕೆಲ್ ಬ್ರೇಸ್​ವೆಲ್ ಅವರನ್ನು ಆಯ್ಕೆ ಮಾಡಲಾಗಿದೆ.ಮ್ಯಾಥ್ಯೂ ಶಾರ್ಟ್​ (ಆಸ್ಟ್ರೇಲಿಯಾ): ಪಂಜಾಬ್ ಕಿಂಗ್ಸ್ ತಂಡದಲ್ಲಿದ್ದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಜಾನಿ ಬೈರ್​ಸ್ಟೋವ್ ಕೂಡ ಫಿಟ್​ನೆಸ್ ಸಮಸ್ಯೆಯ ಕಾರಣ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ಇದೀಗ ಅವರ ಬದಲಿಗೆ ಆಸ್ಟ್ರೇಲಿಯಾ ಆಲ್​ರೌಂಡರ್ ಮ್ಯಾಥ್ಯೂ ಶಾರ್ಟ್ ಪಂಜಾಬ್ ಕಿಂಗ್ಸ್ ತಂಡಕ್ಕೆ ಆಯ್ಕೆಯಾಗಿದ್ದಾರೆ.ಸಿಸಂದ ಮಗಲಾ (ಸೌತ್ ಆಫ್ರಿಕಾ): ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿದ್ದ ನ್ಯೂಜಿಲೆಂಡ್ ವೇಗಿ ಕೈಲ್ ಜೇಮಿಸನ್ ಕೂಡ ಗಾಯದ ಕಾರಣ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ಅವರ ಬದಲಿಗೆ ಇದೀಗ ಸೌತ್ ಆಫ್ರಿಕಾದ ವೇಗದ ಬೌಲರ್ ಸಿಸಂದ ಮಗಲಾ ಸಿಎಸ್​ಕೆ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.ಸಂದೀಪ್ ಶರ್ಮಾ: ರಾಜಸ್ಥಾನ್ ರಾಯಲ್ಸ್ ತಂಡದಿಂದ ಪ್ರಸಿದ್ಧ್ ಕೃಷ್ಣ ಗಾಯದ ಕಾರಣ ಹೊರಗುಳಿದಿದ್ದಾರೆ. ಇದೀಗ ಇವರ ಬದಲಿಗೆ ಸಂದೀಪ್ ಶರ್ಮಾ ಆಯ್ಕೆಯಾಗಿದ್ದಾರೆ.ಐಪಿಎಲ್​ನಿಂದ ಹೊರಗುಳಿದಿರುವ ಆಟಗಾರರ ಪಟ್ಟಿ ಹೀಗಿದೆ:1- ಜಸ್​ಪ್ರೀತ್ ಬುಮ್ರಾ: ಮುಂಬೈ ಇಂಡಿಯನ್ಸ್ ವೇಗಿ ಜಸ್​ಪ್ರೀತ್ ಬುಮ್ರಾ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದೀಗ ಶಸ್ತ್ರಚಿಕಿತ್ಸೆಗೆ ಮುಂದಾಗಿರುವ ಅವರು ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ.2- ಜ್ಯೆ ರಿಚರ್ಡ್ಸನ್: ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದ ಆಸ್ಟ್ರೇಲಿಯಾ ವೇಗಿ ಜ್ಯೆ ರಿಚರ್ಡ್ಸನ್ ಅವರ ಕಾಲಿಗೆ ಗಾಯವಾಗಿದ್ದು, ಹೀಗಾಗಿ ಈ ಬಾರಿಯ ಐಪಿಎಲ್​ನಿಂದ ಹೊರಗುಳಿದಿದ್ದಾರೆ.3- ರಿಷಭ್ ಪಂತ್: ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಸದ್ಯ ಚಿಕಿತ್ಸೆಯಲ್ಲಿದ್ದಾರೆ. ಹೀಗಾಗಿ ಅವರು ಕೂಡ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವುದಿಲ್ಲ.4- ಪ್ರಸಿದ್ಧ್ ಕೃಷ್ಣ: ಗಾಯದ ಕಾರಣ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿದ್ದ ಕನ್ನಡಿಗ ಪ್ರಸಿದ್ಧ್ ಕೃಷ್ಣ ಈ ಬಾರಿಯ ಐಪಿಎಲ್ ಆಡುತ್ತಿಲ್ಲ. 5- ಶ್ರೇಯಸ್ ಅಯ್ಯರ್: ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಕೂಡ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರು ಕೂಡ ಐಪಿಎಲ್​ನಿಂದ ಮೊದಲಾರ್ಧದಿಂದ ಹೊರಗುಳಿಯಲಿದ್ದಾರೆ. ಇನ್ನು ಚೇತರಿಸಿಕೊಂಡರೆ ಮಾತ್ರ ದ್ವಿತಿಯಾರ್ಧದಲ್ಲಿ ಕಣಕ್ಕಿಳಿಯಲಿದ್ದಾರೆ.6- ಕೈಲ್ ಜೇಮಿಸನ್: ಸಿಎಸ್​ಕೆ ತಂಡದಲ್ಲಿದ್ದ ನ್ಯೂಜಿಲೆಂಡ್ ವೇಗಿ ಕೈಲ್ ಜೇಮಿಸನ್ ಅವರ ಕಾಲಿಗೆ ಗಾಯವಾಗಿದ್ದು, ಹೀಗಾಗಿ ಐಪಿಎಲ್​ನಿಂದ ಹೊರಗುಳಿದಿದ್ದಾರೆ.7- ಜಾನಿ ಬೈರ್​ಸ್ಟೋವ್: ಪಂಜಾಬ್ ಕಿಂಗ್ಸ್ ತಂಡದಲ್ಲಿದ್ದ ಇಂಗ್ಲೆಂಡ್ ಆಟಗಾರ ಜಾನಿ ಬೈರ್​ಸ್ಟೋವ್ ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಕಾರಣಕ್ಕೆ ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ.8- ವಿಲ್ ಜಾಕ್ಸ್: ಇಂಗ್ಲೆಂಡ್ ಆಟಗಾರ ವಿಲ್ ಜಾಕ್ಸ್ ಈ ಬಾರಿ ಆರ್​ಸಿಬಿ ತಂಡಕ್ಕೆ ಆಯ್ಕೆಯಾಗಿದ್ದರು. ಆದರೆ ಬಾಂಗ್ಲಾದೇಶ್ ವಿರುದ್ಧದ ಸರಣಿಯ ವೇಳೆ ಗಾಯಗೊಂಡಿದ್ದ ಅವರು ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ.

source https://tv9kannada.com/photo-gallery/cricket-photos/ipl-2023-kannada-list-of-injured-players-and-replacement-kannada-news-zp-au50-544049.html

Leave a Reply

Your email address will not be published. Required fields are marked *