IPL 2023: ಈ ವಿಚಾರದಲ್ಲಿ ಎಚ್ಚರವಿರಲಿ; ಐಪಿಎಲ್ ಫ್ರಾಂಚೈಸಿಗಳಿಗೆ ಖಡಕ್ ವಾರ್ನಿಂಗ್ ನೀಡಿದ ಬಿಸಿಸಿಐ!

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 16ನೇ ಸೀಸನ್ ಪ್ರಾರಂಭವಾಗಲು 2 ದಿನ ಮಾತ್ರ ಉಳಿದಿದೆ. ಈಗಿನಿಂದಲೇ ಅಭಿಮಾನಿಗಳ ಝೇಂಕಾರ ಶುರುವಾಗಿದೆ. ಏತನ್ಮಧ್ಯೆ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸೀಸನ್ ಆರಂಭಕ್ಕೂ ಮುನ್ನ ಎಲ್ಲಾ ಫ್ರಾಂಚೈಸಿಗಳಿಗೆ ಒಂದು ವಿಚಾರದಲ್ಲಿ ಖಡಕ್ ಎಚ್ಚರಿಕೆ ನೀಡಿದೆ.ಮುಂಬರುವ ಐಸಿಸಿ ಟೂರ್ನಿಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರಕ್ಕೆ ಬಂದಿರುವ ಬಿಸಿಸಿಐ, ಐಪಿಎಲ್​ನಲ್ಲಿ ಆಡುತ್ತಿರುವ ಟೀಂ ಇಂಡಿಯಾ ಬೌಲರ್‌ಗಳು (ಬಿಸಿಸಿಐನ ವಾರ್ಷಿಕ ಒಪ್ಪಂದಕ್ಕೊಳಪಟ್ಟವರು) ನೆಟ್ಸ್‌ನಲ್ಲಿ ಅಭ್ಯಾಸದ ಸಮಯದಲ್ಲಿ ಹೆಚ್ಚು ಬೌಲ್ ಮಾಡದಂತೆ ಆದೇಶ ಹೊರಡಿಸಿದೆ.ಈ ಬಾರಿಯ ಐಪಿಎಲ್ ಅಂತ್ಯದ ನಂತರ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂತಿಮ ಪಂದ್ಯವನ್ನು ಆಡಲು ಭಾರತ ತಂಡವು ಇಂಗ್ಲೆಂಡ್‌ಗೆ ತೆರಳಲಿದೆ. ಹೀಗಾಗಿ ಆ ಸಮಯದಲ್ಲಿ ಭಾರತೀಯ ಬೌಲರ್‌ಗಳ ಸಂಪೂರ್ಣ ಫಿಟ್‌ನೆಸ್ ಬಹಳ ಮುಖ್ಯ. ಇದನ್ನು ಗಮನದಲ್ಲಿಟ್ಟುಕೊಂಡು ಬಿಸಿಸಿಐ ಎಲ್ಲಾ ಫ್ರಾಂಚೈಸಿಗಳಿಗೆ ಈ ಸೂಚನೆ ನೀಡಿದೆ.ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ) ಫಿಸಿಯೋ ನಿತಿನ್ ಪಟೇಲ್ ಮತ್ತು ಭಾರತದ ಕಂಡೀಷನಿಂಗ್ ಕೋಚ್ ಸೋಹಮ್ ದೇಸಾಯಿ ಅವರು ಮೀಟಿಂಗ್​ನಲ್ಲಿ ಈ ಸೂಚನೆಗಳ ಬಗ್ಗೆ ಎಲ್ಲಾ ಫ್ರಾಂಚೈಸಿಗಳ ಕೋಚ್‌ಗಳು ಮತ್ತು ಫಿಸಿಯೋಥೆರಪಿಸ್ಟ್‌ಗಳಿಗೆ ತಿಳಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.ಅಲ್ಲದೆ ಈ ವರ್ಷಾಂತ್ಯದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ಗೆ ಈಗಾಗಲೇ 20 ಆಟಗಾರರನ್ನು ಶಾರ್ಟ್‌ಲಿಸ್ಟ್ ಮಾಡಲಾಗಿದೆ. ಅವರ ಕೆಲಸದ ಹೊರೆಗೆ ಸಂಬಂಧಿಸಿದಂತೆ ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಳ್ಳಲಾಗಿದ್ದು, ಐಪಿಎಲ್ ಸಮಯದಲ್ಲಿ ವೇಗಿಗಳು ಯಾವುದೇ ಗಂಭೀರ ಗಾಯಕ್ಕೆ ಒಳಗಾಗಬಾರದು ಎಂದು ಬಿಸಿಸಿಐ ಆಶಿಸಿದೆ.ಈ ಸೂಚನೆಗಳಿಗೆ ಸಂಬಂಧಿಸಿದಂತೆ, ಫ್ರಾಂಚೈಸಿಗಳಿಗೆ ಎಲ್ಲವನ್ನೂ ಈಗಾಗಲೇ ವಿವರಿಸಲಾಗಿದೆ ಎಂದು ಮಂಡಳಿಯ ಅಧಿಕಾರಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

source https://tv9kannada.com/photo-gallery/cricket-photos/ipl-2023-bcci-instructs-franchises-not-to-over-bowl-contracted-players-psr-au14-545093.html

Leave a Reply

Your email address will not be published. Required fields are marked *