Skip to content
  • Saturday, July 5, 2025
  • About us
  • Contact us
ಸಮಗ್ರ ಸುದ್ದಿ

ಸಮಗ್ರ ಸುದ್ದಿ

ನಿಖರತೆಗೆ ಮತ್ತೊಂದು ಹೆಸರು

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • Horoscope
  • Home
  • Sports
  • IPL 2023: CSK ವಿರುದ್ಧ ಗುಜರಾತ್ ಟೈಟಾನ್ಸ್​ ಬಲಿಷ್ಠ…ಆದರೆ
Sports

IPL 2023: CSK ವಿರುದ್ಧ ಗುಜರಾತ್ ಟೈಟಾನ್ಸ್​ ಬಲಿಷ್ಠ…ಆದರೆ

May 27, 2023
samagrasuddi

IPL 2023 Final CSK vs GT: ಐಪಿಎಲ್ ಸೀಸನ್ 16 ಫೈನಲ್ ಫೈಟ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಭಾನುವಾರ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಯಾರು ಗೆಲ್ತಾರೆ ಎಂಬುದೇ ಈಗ ಕುತೂಹಲ.ಏಕೆಂದರೆ ಉಭಯ ತಂಡಗಳು ಬಲಿಷ್ಠವಾಗಿದ್ದು, ಹೀಗಾಗಿ ಎರಡೂ ತಂಡಗಳಿಂದ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು. ಏಕೆಂದರೆ ಈ ಬಾರಿ ಸಿಎಸ್​ಕೆ ಹಾಗೂ ಜಿಟಿ 2 ಪಂದ್ಯಗಳಲ್ಲಿ ಮುಖಾಮುಖಿಯಾಗಿದೆ. ವಿಶೇಷ ಎಂದರೆ ಮೊದಲ ಮುಖಾಮುಖಿಯಲ್ಲಿ ಗುಜರಾತ್ ಟೈಟಾನ್ಸ್ ಗೆದ್ದರೆ, ಕೊನೆಯ ಮುಖಾಮುಖಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಜಯ ಸಾಧಿಸಿದೆ.ಆದರೆ ಇಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗೆದ್ದಿರುವುದು ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಎಂಬುದು ಉಲ್ಲೇಖಾರ್ಹ. ಏಕೆಂದರೆ ಈ ಪಂದ್ಯವು ನಡೆದಿದ್ದು ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ. ಅದೇ ಗುಜರಾತ್ ಟೈಟಾನ್ಸ್ ಸಿಎಸ್​ಕೆ ವಿರುದ್ಧ ಗೆದ್ದಿದ್ದು ಅಹಮದಾಬಾದ್​ನಲ್ಲಿ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಎಂಬುದು ವಿಶೇಷ.ಇದೀಗ ನರೇಂದ್ರ ಮೋದಿ ಸ್ಟೇಡಿಯಂನಲ್ಲೇ ಐಪಿಎಲ್ ಫೈನಲ್ ನಡೆಯುತ್ತಿದೆ. ಇದೇ ಮೈದಾನದಲ್ಲಿ ನಡೆದ ಐಪಿಎಲ್​ 2023 ರ ಮೊದಲ ಪಂದ್ಯದಲ್ಲಿ ಸಿಎಸ್​ಕೆ ವಿರುದ್ಧ ಗುಜರಾತ್ ಟೈಟಾನ್ಸ್ ತಂಡವು 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು.ಇದಲ್ಲದೆ ಸಿಎಸ್​ಕೆ ತಂಡವು ಗುಜರಾತ್ ವಿರುದ್ಧ ಏಕೈಕ ಬಾರಿ ಮಾತ್ರ ಜಯ ಸಾಧಿಸಿದೆ. ಅಂದರೆ ಇದುವರೆಗೆ ಆಡಲಾದ 4 ಪಂದ್ಯಗಳಲ್ಲಿ 3 ಪಂದ್ಯಗಳಲ್ಲೂ ಗುಜರಾತ್ ಟೈಟಾನ್ಸ್​ ಗೆಲುವು ದಾಖಲಿಸಿದೆ. ಅತ್ತ ಗುಜರಾತ್ ಟೈಟಾನ್ಸ್ ತಂಡವು ತವರಿನಲ್ಲಿ ಆಡಿದ 9 ಪಂದ್ಯಗಳಲ್ಲಿ 6 ರಲ್ಲಿ ಜಯ ಸಾಧಿಸಿದ ದಾಖಲೆ ಹೊಂದಿದೆ. ಅಂದರೆ ಇಲ್ಲಿ ಮೇಲ್ನೋಟಕ್ಕೆ ಉಭಯ ತಂಡಗಳು ಸಮಬಲ ಹೊಂದಿದ್ದರೂ ಗುಜರಾತ್ ಟೈಟಾನ್ಸ್​ ತಂಡ ತವರಿನಲ್ಲಿ ಆಡುತ್ತಿರುವುದು ಪ್ಲಸ್ ಪಾಯಿಂಟ್.ಹಾಗೆಯೇ ಸಿಎಸ್​ಕೆ ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ಅಂತಿಮ ಹಂತದಲ್ಲಿ ಮುಗ್ಗರಿಸಿದ ಇತಿಹಾಸವನ್ನೂ ಕೂಡ ಹೊಂದಿದೆ. ಅಂದರೆ ಐಪಿಎಲ್​ನಲ್ಲಿ ಇದುವರೆಗೆ 9 ಫೈನಲ್ ಆಡಿರುವ ಧೋನಿ ಪಡೆ ಗೆದ್ದಿರುವುದು ಕೇವಲ 4 ಪಂದ್ಯಗಳಲ್ಲಿ ಮಾತ್ರ. ಇತ್ತ ಹಾರ್ದಿಕ್ ಪಾಂಡ್ಯ ಮೊದಲ ಫೈನಲ್​ನಲ್ಲೇ ಗೆದ್ದು, ಇದೀಗ 2ನೇ ಬಾರಿಗೆ ಫೈನಲ್​ ಪ್ರವೇಶಿಸಿದೆ.ಅಲ್ಲದೆ ಗುಜರಾತ್ ಟೈಟಾನ್ಸ್​ ತಂಡವು ತವರಿನಲ್ಲಿ ಸಿಎಸ್​ಕೆಯನ್ನು ಮಣಿಸಿದ ಆತ್ಮ ವಿಶ್ವಾಸದಲ್ಲಿ ಪುಟಿದೇಳುತ್ತಿದೆ. ಇದಾಗ್ಯೂ ಕೊನೆಯ ಮುಖಾಮುಖಿಯಲ್ಲಿ ಹಾರ್ದಿಕ್ ಪಾಂಡ್ಯ ಪಡೆಗೆ 15 ರನ್​ಗಳಿಂದ ಸೋಲುಣಿಸಿರುವ ಸಿಎಸ್​ಕೆ ಭರ್ಜರಿ ಪೈಪೋಟಿ ನೀಡುವುದಂತು ನಿಶ್ಚಿತ. ಹೀಗಾಗಿ ಫೈನಲ್ ಫೈಟ್​ನಲ್ಲಿ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

source https://tv9kannada.com/photo-gallery/cricket-photos/ipl-2023-final-csk-vs-gt-head-to-head-records-kannada-news-zp-588372.html

Tags: Chennai, Cricket, CSK, GT, Gujarat, IPL, IPL 2023, samagrasuddi, T-20, TATA IPL 2023, ಸಮಗ್ರ ಸುದ್ದಿ

Post navigation

IPL 2023: ‘ಇದು ಫ್ಯಾಮಿಲಿ ವಿಚಾರ’; ಪಂದ್ಯದ ವೇಳೆ ಒಟ್ಟಿಗೆ ಕಾಣಿಸಿಕೊಂಡ ಗಿಲ್- ಸಚಿನ್ ಮೇಲೆ ಮೀಮ್ಸ್ ಸುರಿಮಳೆ
IPL 2023: ಕ್ವಾಲಿಫೈಯರ್ 1 ಗೆದ್ದ ತಂಡವೇ ಚಾಂಪಿಯನ್! ಇದು ಅಂಕಿ-ಅಂಶ ನುಡಿದ ಭವಿಷ್ಯ

Leave a Reply Cancel reply

Your email address will not be published. Required fields are marked *

Recent Comments

  1. Kaveri Sonkamble on SBI ನೇಮಕಾತಿ; ಸರ್ಕಲ್​ ಬೇಸ್ಡ್​​ ಆಫೀಸರ್​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನMay 31, 2025

    Kaveri Sonkamble

  2. Vani m on SBI Recruitment 2025: SBI ಬ್ಯಾಂಕಿನಲ್ಲಿ 2964 ಹುದ್ದೆಗಳಿಗೆ ನೇಮಕಾತಿ; ಪದವೀಧರರು ಕೂಡಲೇ ಅರ್ಜಿ ಸಲ್ಲಿಸಿMay 13, 2025

    I am complete b. Com in experience of work

  3. Sushma Basayya Hiremath on ಅಗ್ನಿವೀರ್​ ನೇಮಕಾತಿ: ರಾಜ್ಯದ 14 ಜಿಲ್ಲೆಗಳ ಅಭ್ಯರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ.April 9, 2025

    Sushma Basayya Hiremath

  4. samagrasuddi on ಮೈಸೂರು| ಶಾರದ ವಿಲಾಸ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ವಿಶ್ವ ಜಲ ದಿನ ಕಾರ್ಯಕ್ರಮ.March 24, 2025

    Tq

  5. Darshan K M on ಮೈಸೂರು| ಶಾರದ ವಿಲಾಸ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ವಿಶ್ವ ಜಲ ದಿನ ಕಾರ್ಯಕ್ರಮ.March 24, 2025

    Meaning full program..✨❤️

CITIES

Cities

🏫 ಕರ್ನಾಟಕದ 4,134 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿಗಳಿಗೆ ಅವಕಾಶ

July 4, 2025
samagrasuddi

📅 ದಿನಾಂಕ: 4 ಜುಲೈ 2025✍️ ಸಮಗ್ರ ಸುದ್ದಿ ವಿಶೇಷ ✅ ಮಹತ್ವದ ನಿರ್ಧಾರ: ಕರ್ನಾಟಕ ಸರ್ಕಾರವು 2025–26ನೇ ಶೈಕ್ಷಣಿಕ ವರ್ಷದಿಂದ ರಾಜ್ಯದ 4,134 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿಗಳನ್ನು ಪ್ರಾರಂಭಿಸಲು ಸಿದ್ಧತೆ ಮಾಡಿಕೊಂಡಿದೆ. ವಿದ್ಯಾರ್ಥಿಗಳಿಗೆ ಇಂದಿನ ಸ್ಪರ್ಧಾತ್ಮಕ…

Cities

ಕರ್ನಾಟಕದ ಪ್ರಮುಖ ಐತಿಹಾಸಿಕ ತಾಣಗಳು

July 4, 2025
samagrasuddi
Cities

ದಾವಣಗೆರೆ ಜಿಲ್ಲೆಯ ಮಾರುತಿ ಹೆಚ್ ಗೆ 2025ರ ಇಂಟರ್ ನ್ಯಾಷನಲ್ ಐಕಾನ್ ಪ್ರಶಸ್ತಿ ಪ್ರದಾನ.

July 4, 2025
samagrasuddi
Cities

“ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯ ಮುನ್ಸೂಚನೆ – ರೈತರಿಗೆ ಮುನ್ನೆಚ್ಚರಿಕೆ ಅಗತ್ಯ!”

July 4, 2025
samagrasuddi
Cities Health

ಚಿಂತೆ ಬೇಡ, ಹೃದಯ ಸೇಫ್! — ಹಾಸನ ಜಿಲ್ಲೆಯಲ್ಲಿನ ಹೃದಯಾಘಾತ ಪ್ರಕರಣಗಳಿಗೆ ತಡೆಗಟ್ಟಲು ಸರ್ಕಾರದಿಂದ ಕ್ರಮ

July 2, 2025
samagrasuddi

You may Missed

Health

ತಿಂಗಳುಗಟ್ಟಲೆ ಕ್ಯಾರೆಟ್ ತಾಜಾವಾಗಿರಲು ಈ ಸಲಹೆಯನ್ನು ಅನುಸರಿಸಿ! “carrot”

July 5, 2025
samagrasuddi
Health

“ಕರ್ನಾಟಕದಲ್ಲಿ COVID-19 ಪ್ರಕರಣಗಳಲ್ಲಿ ಮತ್ತೆ ಹೆಚ್ಚಳ – ಆರೋಗ್ಯ ಇಲಾಖೆ ಎಚ್ಚರಿಕೆ”

July 4, 2025
samagrasuddi
Health

🌿 ತುಳಸಿಯ ಸೌಂದರ್ಯ ಮತ್ತು ಆರೋಗ್ಯ ಮಹತ್ವ

July 4, 2025
samagrasuddi
Health

ಪ್ರತಿನಿತ್ಯ ಈ 3 ಹಣ್ಣುಗಳ ಸೇವನೆಯಿಂದ ಮುಖದ ಸೊಕ್ಕು ಮಾಯ, ಚರ್ಮದ ಹೊಳಪು ಪಳ ಪಳ! | “Facial Wrinkles”

July 3, 2025
samagrasuddi
July 2025
M T W T F S S
 123456
78910111213
14151617181920
21222324252627
28293031  
« Jun    
  • ನೀರಜ್ ಚೋಪ್ರಾ ಪ್ರಧಾನದ ಆಕರ್ಷಣೆ: ಬೆಂಗ್ಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇಂದು ಎನ್ ಸಿ ಕ್ಲಾಸಿಕ್ ಸ್ಪರ್ಧೆ
  • 📝 ಎಸ್‌ಎಸ್‌ಎಲ್‌ಸಿ ಬ್ಲೂಪ್ರಿಂಟ್‌ನಲ್ಲಿ ಎಲ್ಲಾ ಮಾದರಿ ಅಂಕಗಳ ಪ್ರಶ್ನೆ
  • “WCL 2025”: ಯುವರಾಜ್ ಸಿಂಗ್ ನಾಯಕತ್ವದಲ್ಲಿ ಟೀಂ ಇಂಡಿಯಾ ಕಣಕ್ಕೆ; ಮೊದಲ ಎದುರಾಳಿ ಪಾಕಿಸ್ತಾನ.
  • ಭಾರತ – ಇಂಗ್ಲೆಂಡ್ 2ನೇ ಟೆಸ್ಟ್‌: ಆಕಾಶ್‌ – ಸಿರಾಜ್‌ ದಾಳಿಗೆ ಕುಸಿದ ಆಂಗ್ಲರು – ಇಬ್ಬರೂ ವೇಗಿಗಳು ಕಬಳಿಸಿದ ವಿಕೆಟ್ ಎಷ್ಟು?
  • ತಿಂಗಳುಗಟ್ಟಲೆ ಕ್ಯಾರೆಟ್ ತಾಜಾವಾಗಿರಲು ಈ ಸಲಹೆಯನ್ನು ಅನುಸರಿಸಿ! “carrot”
Copyright © 2025 ಸಮಗ್ರ ಸುದ್ದಿ
Contact us
Theme by: Theme Horse
Proudly Powered by: WordPress