
16ನೇ ಆವೃತ್ತಿಯ ಐಪಿಎಲ್ (IPL 2023) ಮುಕ್ತಾಯದ ಹಂತಕ್ಕೆ ತಲುಪಿದೆ. ಗುಂಪು ಹಂತದಲ್ಲಿ ಇನ್ನು 5 ಪಂದ್ಯಗಳು ಮಾತ್ರ ಬಾಕಿ ಉಳಿದಿವೆ. ಐಪಿಎಲ್ ಡಬಲ್ ಹೆಡರ್ನ ಮೊದಲ ಪಂದ್ಯದಲ್ಲಿ ಡೇವಿಡ್ ವಾರ್ನರ್ (David Warner) ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮಹೇಂದ್ರ ಸಿಂಗ್ ಧೋನಿ (Mahendra Singh Dhoni) ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ (Delhi Capitals vs Chennai Super Kings) ನಾಳೆ ಶನಿವಾರ ನವದೆಹಲಿಯಲ್ಲಿ ಮುಖಾಮುಖಿಯಾಗಲಿವೆ. ಎರಡೂ ತಂಡಗಳು ಗುಂಪು ಹಂತದಲ್ಲಿ ತಮ್ಮ ಕೊನೆಯ ಪಂದ್ಯವನ್ನು ಆಡಲಿವೆ. ಚೆನ್ನೈ ತನ್ನ ಕೊನೆಯ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಚಿಪಾಕ್ನಲ್ಲಿ ಸೋತಿತು. ಮತ್ತೊಂದೆಡೆ ಪಂಜಾಬ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಡೆಲ್ಲಿ ಗೆಲುವು ಸಾಧಿಸಿತ್ತು. ಇನ್ನು ಈ ಬಾರಿ ಐಪಿಎಲ್‌ನ ಮೊದಲ ಮುಖಾಮುಖಿಯಲ್ಲಿ ಸಿಎಸ್‌ಕೆ, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸಿತ್ತು. ಈಗಾಗಲೇ ಟೂರ್ನಿಯಿಂದ ಹೊರಬಿದ್ದಿರುವ ದೆಹಲಿಗೆ ಕಳೆದುಕೊಳ್ಳಲು ಏನೂ ಇಲ್ಲ. ಮತ್ತೊಂದೆಡೆ, ಸಿಎಸ್‌ಕೆ 15 ಅಂಕಗಳೊಂದಿಗೆ ಪ್ಲೇ ಆಫ್‌ಗಿಂತ ಒಂದು ಹೆಜ್ಜೆ ಹಿಂದಿದೆ. ಡೆಲ್ಲಿ ವಿರುದ್ಧ 2 ಅಂಕ ಪಡೆದರೆ ಚೆನ್ನೈ 17 ಅಂಕಗಳೊಂದಿಗೆ ಪ್ಲೇ ಆಫ್ಗೆ ಎಂಟ್ರಿಕೊಡಲಿದೆ.
ಇನ್ನು ಈ ಉಭಯ ತಂಡಗಳ ನಡುವಿನ ಮುಖಾಮುಖಿಯಾಗಿ ನೋಡಿದರೆ, ಐಪಿಎಲ್ ವೇದಿಕೆಯಲ್ಲಿ ಉಭಯ ತಂಡಗಳು 28 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಸಿಎಸ್‌ಕೆ 18 ಬಾರಿ ಗೆದ್ದಿದ್ದರೆ, ಡೆಲ್ಲಿ 10 ಬಾರಿ ಗೆದ್ದಿದೆ.
IPL 2023: ಸವ್ಯಸಾಚಿ ಧೋನಿಗೆ ಯಾರೂ ನಿರೀಕ್ಷಿಸದ ಉಡುಗೊರೆ ನೀಡಿದ ಚೆನ್ನೈ ಫ್ಯಾನ್ಸ್..! ವಿಡಿಯೋ
ಪಂದ್ಯದ ಬಗ್ಗೆಗಿನ ಪೂರ್ಣ ಮಾಹಿತಿ ಇಲ್ಲಿದೆ
ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯ ಯಾವಾಗ ನಡೆಯಲ್ಲಿದೆ?
ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ (ಮೇ 20) ನಡುವಿನ ಪಂದ್ಯ ನಾಳೆ ಶನಿವಾರ ನಡೆಯಲಿದೆ.
ದೆಹಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯ ಎಲ್ಲಿ ನಡೆಯುತ್ತದೆ?
ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯ ನಡೆಯಲಿದೆ.
ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯ ಯಾವಾಗ ಪ್ರಾರಂಭವಾಗುತ್ತದೆ?
ದೆಹಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯವು ಮಧ್ಯಾಹ್ನ 3:30ಕ್ಕೆ ಪ್ರಾರಂಭವಾಗುತ್ತದೆ. ಮಧ್ಯಾಹ್ನ 3 ಗಂಟೆಗೆ ಟಾಸ್ ಇರಲಿದೆ.
ದೆಹಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಎಲ್ಲಿ ವೀಕ್ಷಿಸಬೇಕು?
ದೆಹಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಟಿವಿಯಲ್ಲಿ ನೋಡಬಹುದು. ಇದಲ್ಲದೆ, ವೀಕ್ಷಕರು ಜಿಯೋ ಸಿನಿಮಾ ಅಪ್ಲಿಕೇಶನ್‌ನಲ್ಲಿ ಐಪಿಎಲ್ ಪಂದ್ಯಗಳ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ