IPL 2023: ಐಪಿಎಲ್ ಇತಿಹಾಸದಲ್ಲೇ ಅನಗತ್ಯ ದಾಖಲೆ ಬರೆದ ದಿನೇಶ್ ಕಾರ್ತಿಕ್

IPL 2023 RCB vs GT: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗುವ ಮೂಲಕ ದಿನೇಶ್ ಕಾರ್ತಿಕ್ ಅನಗತ್ಯ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.ಈ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ದಿನೇಶ್ ಕಾರ್ತಿಕ್ ಮೊದಲ ಎಸೆತದಲ್ಲೇ ವಿಕೆಟ್​ ಒಪ್ಪಿಸಿದ್ದರು. ಈ ಗೋಲ್ಡನ್​ ಡಕ್​ನೊಂದಿಗೆ ಡಿಕೆ ಐಪಿಎಲ್​ ಇತಿಹಾಸದಲ್ಲೇ ಅತ್ಯಧಿಕ ಬಾರಿ ಶೂನ್ಯಕ್ಕೆ ಔಟಾದ ಅಪಕೀರ್ತಿಗೆ ಒಳಗಾಗಿದ್ದಾರೆ. ಅಚ್ಚರಿ ಎಂದರೆ ಇದು ಈ ಬಾರಿಯ ಐಪಿಎಲ್​ನಲ್ಲಿ ದಿನೇಶ್ ಕಾರ್ತಿಕ್ ಅವರ 4ನೇ ಡಕ್ ಔಟ್. ಇನ್ನು ಐಪಿಎಲ್​ನಲ್ಲಿ ಅತೀ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಟಾಪ್-5 ಬ್ಯಾಟರ್​ಗಳ ಪಟ್ಟಿ ಈ ಕೆಳಗಿನಂತಿದೆ.1- ದಿನೇಶ್ ಕಾರ್ತಿಕ್: 221 ಐಪಿಎಲ್​ ಇನಿಂಗ್ಸ್ ಆಡಿರುವ ದಿನೇಶ್ ಕಾರ್ತಿಕ್ ಒಟ್ಟು 17 ಬಾರಿ ಸೊನ್ನೆಗೆ ವಿಕೆಟ್ ಒಪ್ಪಿಸಿದ್ದಾರೆ. ಇದರೊಂದಿಗೆ ಐಪಿಎಲ್​​ನಲ್ಲಿ ಸೊನ್ನೆ ಸುತ್ತುವುದರಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.2- ರೋಹಿತ್ ಶರ್ಮಾ: ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ 236 ಇನಿಂಗ್ಸ್​ಗಳಲ್ಲಿ ಒಟ್ಟು 16 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ.3- ಸುನಿಲ್ ನರೈನ್: ಕೆಕೆಆರ್ ತಂಡದ ಆಟಗಾರ ಸುನಿಲ್ ನರೈನ್ 96 ಇನಿಂಗ್ಸ್​ಗಳಲ್ಲಿ 15 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ.4- ಮಂದೀಪ್ ಸಿಂಗ್: ಕೆಕೆಆರ್ ತಂಡದ ಆಟಗಾರ ಮಂದೀಪ್ ಸಿಂಗ್ 98 ಇನಿಂಗ್ಸ್​ಗಳಲ್ಲಿ ಒಟ್ಟು 15 ಬಾರಿ ಯಾವುದೇ ರನ್​ಗಳಿಸದೇ ವಿಕೆಟ್ ಒಪ್ಪಿಸಿದ್ದಾರೆ.5- ಅಂಬಾಟಿ ರಾಯುಡು: ಸಿಎಸ್​ಕೆ ತಂಡದ ಬ್ಯಾಟರ್ ಅಂಬಾಟಿ ರಾಯುಡು 185 ಇನಿಂಗ್ಸ್​ಗಳಲ್ಲಿ ಒಟ್ಟು 14 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ.

source https://tv9kannada.com/photo-gallery/cricket-photos/ipl-2023-dinesh-karthik-most-ducks-in-ipl-kannada-news-zp-584105.html

Leave a Reply

Your email address will not be published. Required fields are marked *