Skip to content
  • Thursday, March 26, 2026
  • ABOUT US
  • CONTACT US
  • Privacy Policy

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • Privacy Policy
  • Horoscope
  • Home
  • Sports
  • IPL 2023 Final CSK vs GT: ಮಳೆ ಬಂದರೆ ಸೂಪರ್ ಓವರ್​ ಮೂಲಕ ಫಲಿತಾಂಶ ನಿರ್ಧಾರ
Sports

IPL 2023 Final CSK vs GT: ಮಳೆ ಬಂದರೆ ಸೂಪರ್ ಓವರ್​ ಮೂಲಕ ಫಲಿತಾಂಶ ನಿರ್ಧಾರ

May 29, 2023
samagrasuddi

IPL 2023 Final CSK vs GT: ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ನಡೆಯಬೇಕಿದ್ದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ನಡುವಣ ಐಪಿಎಲ್​​ನ ಫೈನಲ್ ಪಂದ್ಯವು ಇಂದು (ಮೆ 29) ಜರುಗಲಿದೆ. ಮಳೆಯ ಕಾರಣ ಮೀಸಲು ದಿನಕ್ಕೆ ಮುಂದೂಡಲ್ಪಟ್ಟ ಪಂದ್ಯಕ್ಕೆ ಮತ್ತೆ ವರುಣನ ಭೀತಿ ಎದುರಾಗಿದೆ.ಏಕೆಂದರೆ ಹವಮಾನ ವರದಿ ಪ್ರಕಾರ ಸೋಮವಾರ ಕೂಡ ಅಹಮದಾಬಾದ್​ನ ಸುತ್ತ ಮುತ್ತ ಮೋಡ ಕವಿದ ವಾತವರಣವಿದ್ದು, ಹೀಗಾಗಿ ಮಳೆಯಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಒಂದು ವೇಳೆ ಇಂದು ಕೂಡ ಮಳೆ ಬಂದರೆ ಫಲಿತಾಂಶ ನಿರ್ಧರಿಸುವುದು ಹೇಗೆ ಎಂಬ ಪ್ರಶ್ನೆ ಮೂಡುವುದು ಸಹಜ. ಇದಕ್ಕಾಗಿ ಬಿಸಿಸಿಐ ಕೆಲ ನಿಯಮಗಳನ್ನು ರೂಪಿಸಿದೆ.ಈ ನಿಯಮಗಳಲ್ಲಿ ಸೂಪರ್ ಓವರ್ ಕೂಡ ಇರುವುದು ವಿಶೇಷ. ಅಂದರೆ ನಿಗದಿತ ಸಮಯದೊಳಗೆ ಪಂದ್ಯವನ್ನು ನಡೆಸಲು ಸಾಧ್ಯವಾಗದಿದ್ದರೆ ಸೂಪರ್ ಓವರ್ ಪಂದ್ಯ ನಡೆಯುವುದು ಖಚಿತ. ಆದರೆ ಅದಕ್ಕೂ ಮುನ್ನ ಇತರೆ ಆಯ್ಕೆಗಳನ್ನು ಪರಿಶೀಲಿಸಲಿದೆ. ಈ ಆಯ್ಕೆಗಳೆಂದರೆ...ಪಂದ್ಯ ಆರಂಭಕ್ಕೂ ಮುನ್ನ ಮಳೆ ಬಂದರೆ ಅಥವಾ ಆರಂಭದ ಬಳಿಕ ಮಳೆ ಬಂದು ವಿಳಂಬವಾದರೆ ಸಂಪೂರ್ಣ ಓವರ್​ಗಳ ಪಂದ್ಯಗಳನ್ನು ನಡೆಸಲಾಗುತ್ತದೆ. ಇಲ್ಲಿ ಓವರ್​ಗಳ ಕಡಿತಕ್ಕೆ ಕಟ್​ ಆಫ್ ಟೈಮ್ ರಾತ್ರಿ 9.40. ಅಂದರೆ ರಾತ್ರಿ 9.40 ರೊಳಗೆ ಶುರುವಾದರೆ ಯಾವುದೇ ಓವರ್​ ಕಡಿತ ಇರುವುದಿಲ್ಲ. 2 ತಂಡಗಳು 20 ಓವರ್​ಗಳನ್ನು ಆಡಲಿದೆ.ಇನ್ನು ರಾತ್ರಿ 9.40 ರ ಬಳಿಕ ಪಂದ್ಯ ಆರಂಭವಾಗುವುದಾರೆ, ಓವರ್​ಗಳನ್ನು ಕಡಿತ ಮಾಡಲಾಗುತ್ತದೆ. ಇನ್ನು ಉಭಯ ತಂಡಗಳ ಇನಿಂಗ್ಸ್​​ ನಡುವೆ ಮಳೆ ಬಂದು ನಿಂತರೆ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರದ ಫಲಿತಾಂಶವನ್ನು ನಿರ್ಧರಿಸಲಾಗುತ್ತದೆ. ಇಲ್ಲಿ ಡಕ್​ವರ್ತ್​ ಲೂಯಿಸ್ ನಿಯಮದ ಪ್ರಕಾರ ಫಲಿತಾಂಶ ನಿರ್ಧರಿಸಬೇಕಿದ್ದರೆ ಉಭಯ ತಂಡಗಳು ಕನಿಷ್ಠ 5 ಓವರ್​ಗಳನ್ನು ಆಡಿರಬೇಕು ಎಂಬ ನಿಯಮ ರೂಪಿಸಲಾಗಿದೆ.ಇನ್ನು 7.30 ರಿಂದ 11.56 ರೊಳಗೆ ಪಂದ್ಯವನ್ನು ನಡೆಸಲು ಸಾಧ್ಯವಾಗದಿದ್ದರೆ ಹೆಚ್ಚುವರಿ ಸಮಯ ತೆಗೆದುಕೊಳ್ಳಲಾಗುತ್ತದೆ. ಈ ಮೂಲಕ 5 ಓವರ್​ಗಳ ಪಂದ್ಯವನ್ನು ಆಯೋಜಿಸಲು ಮುಂದಾಗಲಿದೆ. ಈ 5 ಓವರ್​ಗಳ ಪಂದ್ಯವು ರಾತ್ರಿ 12.06 ರಿಂದ ಶುರುವಾಗಲಿದೆ.ಒಂದು ವೇಳೆ ರಾತ್ರಿ 12.06 ರಿಂದ 12.50 ರೊಳಗೆ 5 ಓವರ್​ಗಳ ಪಂದ್ಯ ಆಯೋಜಿಸಲು ಕೂಡ ಸಾಧ್ಯವಾಗದಿದ್ದರೆ ಸೂಪರ್ ಓವರ್ ಮೊರೆ ಹೋಗಲಾಗುತ್ತದೆ. ಇಲ್ಲಿ ಸೂಪರ್ ಓವರ್ ನಡೆಸಲು ಪಿಚ್ ಸಿದ್ಧವಿದೆಯಾ ಎಂಬುದನ್ನು ಮುಖ್ಯವಾಗಿ ಪರಿಗಣನೆ ತೆಗೆದುಕೊಳ್ಳಲಾಗುತ್ತದೆ.ಈ ಬಗ್ಗೆ ಉಭಯ ತಂಡಗಳ ನಾಯಕರುಗಳೊಂದಿಗೆ ಚರ್ಚಿಸಿದ ಬಳಿಕ ಅಂಪೈರ್ ಸೂಪರ್ ಓವರ್​ ನಡೆಸಲು ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಒಂದು ವೇಳೆ ಸೂಪರ್ ಓವರ್ ನಡೆಸಲು ಕೂಡ ಸಾಧ್ಯವಾಗದಿದ್ದರೆ ಗುಜರಾತ್ ಟೈಟಾನ್ಸ್ ತಂಡ ಚಾಂಪಿಯನ್ ಆಗಲಿದೆ.
ಏಕೆಂದರೆ ಮೀಸಲು ದಿನದಂದು ಕನಿಷ್ಠ ಸೂಪರ್ ಓವರ್ ಪಂದ್ಯ ನಡೆಸಲು ಸಾಧ್ಯವಾಗದಿದ್ದರೆ, ಲೀಗ್ ಹಂತದ 70 ಪಂದ್ಯಗಳ ಬಳಿಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದ ತಂಡವನ್ನು ಚಾಂಪಿಯನ್ ಎಂದು ಘೋಷಿಸಲಾಗುತ್ತದೆ. ಲೀಗ್ ಹಂತದ ಪಂದ್ಯಗಳ ಮುಕ್ತಾಯದ ವೇಳೆಗೆ ಅಂಕಪಟ್ಟಿಯಲ್ಲಿ ಗುಜರಾತ್ ಟೈಟಾನ್ಸ್ ಅಗ್ರಸ್ಥಾನ ಅಲಂಕರಿಸಿದರೆ, ಚೆನ್ನೈ ಸೂಪರ್ ಕಿಂಗ್ಸ್ ದ್ವಿತೀಯ ಸ್ಥಾನ ಅಲಂಕರಿಸಿತ್ತು. ಹೀಗಾಗಿ ಇಂದು ಕೂಡ ಪಂದ್ಯ ನಡೆದಿದ್ದರೆ ಹಾರ್ದಿಕ್ ಪಾಂಡ್ಯ ಪಡೆಯನ್ನು ಚಾಂಪಿಯನ್ಸ್ ಎಂದು ಪರಿಗಣಿಸಲಾಗುತ್ತದೆ.

source https://tv9kannada.com/photo-gallery/cricket-photos/ipl-2023-final-what-is-the-super-over-rule-for-csk-vs-gt-ipl-2023-final-kannada-news-zp-589514.html

Tags: Chennai, Cricket, CSK, GT, Gujarat, IPL, IPL 2023, samagrasuddi, T-20, TATA IPL 2023, ಸಮಗ್ರ ಸುದ್ದಿ

Post navigation

WTC Final 2023: ಡಬ್ಲ್ಯುಟಿಸಿ ಫೈನಲ್​ಗೆ 15 ಆಟಗಾರರ ಅಂತಿಮ ತಂಡ ಪ್ರಕಟಿಸಿದ ಆಸೀಸ್..!
IPL 2023: ಸಂಬಳದ ವಿಚಾರದಲ್ಲಿ ತಮ್ಮ ತಂಡದ ನಾಯಕರನ್ನೇ ಮೀರಿಸಿದ ಕ್ರಿಕೆಟಿಗರಿವರು..!

Leave a Reply Cancel reply

Your email address will not be published. Required fields are marked *

CITIES

Cities

ಕರ್ನಾಟಕ ಹವಾಮಾನ ಎಚ್ಚರಿಕೆ Weather Alert Karnataka Today.

March 22, 2026
samagrasuddi

ಇಂದಿನ ಹವಾಮಾನ ಸ್ಥಿತಿಕರ್ನಾಟಕ ರಾಜ್ಯದಲ್ಲಿ ಇಂದಿನ ಹವಾಮಾನವು ಬಿಸಿಲು ಹಾಗೂ ಮೋಡ ಕವಿದ ವಾತಾವರಣದ ಮಿಶ್ರಣವಾಗಿರಲಿದೆ. ಕೆಲವು ಜಿಲ್ಲೆಗಳಲ್ಲಿ ಮಧ್ಯಾಹ್ನದಿಂದ ಸಂಜೆವರೆಗೆ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.ತಾಪಮಾನ: ಸುಮಾರು 34°C ರಿಂದ 37°Cಬೆಳಗ್ಗೆ: ಬಿಸಿಲು ಹೆಚ್ಚಾಗಿರುತ್ತದೆಮಧ್ಯಾಹ್ನ/ಸಂಜೆ: ಮೋಡ ಕವಿದು ಮಳೆಯ ಸಾಧ್ಯತೆಮಳೆ…

Cities

ತುರುವೇಕೆರೆಯ ವಿದ್ಯಾರಣ್ಯ”D Ed College”ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಭರ್ಜರಿ ಯಶಸ್ಸು.

March 18, 2026
samagrasuddi
Cities

Karnataka Weather Today: ರಾಜ್ಯದಲ್ಲಿಂದು ಮಳೆಯ ಮುನ್ಸೂಚನೆ, ಹೇಗಿರಲಿದೆ ಹವಾಮಾನ?

March 18, 2026
samagrasuddi
Cities

LPG Helpline Karnataka: ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಆಹಾರ ಇಲಾಖೆಯ ಟೋಲ್ ಫ್ರೀ ನಂಬರ್.

March 16, 2026
samagrasuddi
Cities

ಯುಗಾದಿ ಮತ್ತು ರಂಜಾನ್ ಹಬ್ಬದ ಸಂಭ್ರಮ: KSRTCಯಿಂದ 2,000 ವಿಶೇಷ ಬಸ್‌ಗಳ ವ್ಯವಸ್ಥೆ, ಮುಂಗಡ ಟಿಕೆಟ್ ಮೇಲೆ ಭರ್ಜರಿ ರಿಯಾಯಿತಿ!

March 15, 2026
samagrasuddi

You may Missed

Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 9 | ದಿನ 81

March 26, 2026
samagrasuddi
Spiritual

2026 ಶ್ರೀರಾಮನವಮಿ: ಶುಭ ಮುಹೂರ್ತ, ಪೂಜಾ ವಿಧಿ ಮತ್ತು ಆಧ್ಯಾತ್ಮಿಕ ಮಹತ್ವದ ಸಂಪೂರ್ಣ ಮಾಹಿತಿ

March 25, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80

March 23, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 7 | ದಿನ 79

March 22, 2026
samagrasuddi
  • Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 9 | ದಿನ 81
  • 1ನೇ ತರಗತಿ ದಾಖಲಾತಿ: 6 ವರ್ಷದ ಕಡ್ಡಾಯ ನಿಯಮ ಸಡಿಲಿಸಿದ ರಾಜ್ಯ ಸರ್ಕಾರ, ಪೋಷಕರಿಗೆ ಭರ್ಜರಿ ರಿಲೀಫ್!
  • ಕರ್ನಾಟಕ ಹೈಕೋರ್ಟ್ ನೇಮಕಾತಿ 2026: 70 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನ.”
  • SSLC 2026 : ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮುಂದೂಡಿಕೆ; ಹೊಸ ದಿನಾಂಕದ ವಿವರ.
  • Horoscope Today, 26 March: ಈ ರಾಶಿಯವರಿಗೆ ಇಂದು ಮಾನಸಿಕವಾಗಿ ಸ್ವಲ್ಪ ಗೊಂದಲದ ದಿನ.
Copyright © 2026
CONTACT US
Theme by: Theme Horse
Proudly Powered by: WordPress