IPL 2023: ‘ಹೋಗೋ ಲೇ’; ಹಾರ್ದಿಕ್​ಗೆ ಅವಾಜ್ ಹಾಕಿದ ಜಡೇಜಾ! ಐಪಿಎಲ್ ಪ್ರೋಮೋ ಸಖತ್ ವೈರಲ್

Star Sports released promo for the Gujarat Titans vs Chennai Super Kings 1st ipl 2023 match

ಐಪಿಎಲ್ (IPL) ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಈ ಬಾರಿಯ ಐಪಿಎಲ್ ಮಾರ್ಚ್ 31 ರಿಂದ ಪ್ರಾರಂಭವಾಗಲಿದ್ದು, ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಮತ್ತು 4 ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (Gujarat Titans and Chennai Super Kings) ತಂಡಗಳು ಮುಖಾಮುಖಿಯಾಗಲಿವೆ. ಹೀಗಾಗಿ ಮೊದಲ ಪಂದ್ಯದ ಬಗ್ಗೆ ಕುತೂಹಲ ಹೆಚ್ಚಿಸುವ ಸಲುವಾಗಿ ಸ್ಟಾರ್ ಸ್ಪೋರ್ಟ್ಸ್ (Star Sports) ಈ ಪಂದ್ಯದ ಪ್ರೋಮೋ ಬಿಡುಗಡೆ ಮಾಡಿದೆ. ಇದರಲ್ಲಿ ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜಾ (Hardik Pandya and Ravindra Jadeja) ಕಾಣಿಸಿಕೊಂಡಿದ್ದಾರೆ. ಈ ಇಬ್ಬರು ತಮ್ಮ ತಮ್ಮ ತಂಡಗಳ ಬಗ್ಗೆ ಹೊಗಳಿಕೊಳ್ಳುತ್ತಾ, ಪರಸ್ಪರ ಕಾಲೆಳೆದುಕೊಂಡಿದ್ದಾರೆ. ಇದೀಗ ಸ್ಟಾರ್ ಸ್ಪೋರ್ಟ್ಸ್ ಬಿಡುಗಡೆ ಮಾಡಿರುವ ಪ್ರೋಮೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ಚೆನ್ನೈ ನಾಲ್ಕು ಬಾರಿ ಐಪಿಎಲ್ ಪ್ರಶಸ್ತಿ ಗೆದ್ದಿದೆ

ಇತ್ತೀಚೆಗೆ ಸ್ಟಾರ್ ಸ್ಪೋರ್ಟ್ಸ್ ತನ್ನ ಟ್ವಿಟರ್‌ನಲ್ಲಿ ಐಪಿಎಲ್ 2023ರ ಮೊದಲ ಪಂದ್ಯದ ಅಂದರೆ ಗುಜರಾತ್ ಹಾಗೂ ಚೆನ್ನೈ ಪಂದ್ಯದ ಪ್ರೋಮೋವನ್ನು ಬಿಡುಗಡೆ ಮಾಡಿದೆ. ಗುಜರಾತ್ ತಂಡದ ನಾಯಕ ಹಾರ್ದಿಕ್ ಮತ್ತು ಚೆನ್ನೈನ ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ ಈ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಗುಜರಾತ್​ ನಾಯಕ ಹಾರ್ದಿಕ್ ಪಾಂಡ್ಯ ನಮ್ಮ ತಂಡ ಹಾಲಿ ಚಾಂಪಿಯನ್ ಎಂದು ಚೆನ್ನೈ ತಂಡದ ಆಟಗಾರರ ಬಳಿ ಬಡಾಯಿ ಕೊಚ್ಚಿಕೊಂಡಿದ್ದಾರೆ. ಇದಕ್ಕೆ ಟಕ್ಕರ್ ನೀಡಿರುವ ರವೀಂದ್ರ ಜಡೇಜಾ, ಚೆನ್ನೈ ನಾಲ್ಕು ಬಾರಿ ಐಪಿಎಲ್ ಪ್ರಶಸ್ತಿ ಗೆದ್ದಿದೆ ಎಂದಿದ್ದಾರೆ. ಹಾಗಿದ್ರೆ ಬಾ ನೋಡೋಣ ಎಂದು ಪಾಂಡ್ಯ ಸವಾಲು ಹಾಕಿದ್ದಾರೆ. ಇದಕ್ಕೆ ಖಡಕ್ ರೀಪ್ಲೆ ನೀಡಿರುವ ಜಡೇಜಾ ಹೋಗೋ ಲೇ ಎಂದಿದ್ದಾರೆ. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.

ಇನ್ನು ಐಪಿಎಲ್​ನ ಮೊದಲ ಪಂದ್ಯ ಮಾರ್ಚ್ 31 ರಂದು ನಡೆಯಲ್ಲಿದ್ದು, ಇದರಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಈ ಪಂದ್ಯ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸಂಜೆ 7:30ರಿಂದ ಆರಂಭವಾಗಲಿದೆ.

IPL 2023: ಮೊದಲ ಬಾರಿಗೆ ಐಪಿಎಲ್ ಆಡುತ್ತಿರುವ 10 ವಿದೇಶಿ ಆಟಗಾರರು ಇವರೇ..

ಉಭಯ ತಂಡಗಳು

ಚೆನ್ನೈ ಸೂಪರ್ ಕಿಂಗ್ಸ್ ತಂಡ​: ಎಂಎಸ್​ ಧೋನಿ (ನಾಯಕ), ಭಗತ್ ವರ್ಮಾ, ಅಜಯ್ ಮಂಡಲ್, ನಿಶಾಂತ್ ಸಿಂಧು, ಶೇಕ್ ರಶೀದ್, ಬೆನ್ ಸ್ಟೋಕ್ಸ್ , ಅಜಿಂಕ್ಯ ರಹಾನೆ, ಡೆವೊನ್ ಕಾನ್ವೆ, ರುತುರಾಜ್ ಗಾಯಕ್ವಾಡ್, ಅಂಬಟಿ ರಾಯುಡು, ಸುಭ್ರಾಂಶು ಸೇನಾಪತಿ, ಮೊಯಿನ್ ಅಲಿ, ಶಿವಂ ದುಬೆ, ರಾಜವರ್ಧನ್ ಹಂಗರ್ಗೇಕರ್, ಡ್ವೈನ್ ಪ್ರಿಟೋರಿಯಸ್, ಮಿಚೆಲ್ ಸ್ಯಾಂಟ್ನರ್, ತುಷಾರ್ ದೇಶಪಾಂಡೆ, ರವೀಂದ್ರ ಜಡೇಜಾ, , ಸಿಮರ್ಜೀತ್ ಸಿಂಗ್, ದೀಪಕ್ ಚಾಹರ್, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ.

ಗುಜರಾತ್ ಟೈಟಾನ್ಸ್ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ಸಾಯಿ ಸುದರ್ಶನ್, ವೃದ್ಧಿಮಾನ್ ಸಹಾ, ಮ್ಯಾಥ್ಯೂ ವೇಡ್, ರಶೀದ್ ಖಾನ್, ರಾಹುಲ್ ತೆವಾಟಿಯಾ, ವಿಜಯ್ ಶಂಕರ್, ಮೊಹಮ್ಮದ್ ಶಮಿ, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಪ್ರದೀಪ್ ಸಾಂಗ್ವಾನ್ , ದರ್ಶನ್ ನಲ್ಕಂಡೆ, ಜಯಂತ್ ಯಾದವ್, ಆರ್ ಸಾಯಿ ಕಿಶೋರ್, ನೂರ್ ಅಹ್ಮದ್, ಮೋಹಿತ್ ಶರ್ಮಾ, ಜೋಶ್ ಲಿಟಲ್, ಉರ್ವಿಲ್ ಪಟೇಲ್, ಶಿವಂ ಮಾವಿ, ಕೆಎಸ್ ಭರತ್, ಓಡಿಯನ್ ಸ್ಮಿತ್ , ಕೇನ್ ವಿಲಿಯಮ್ಸನ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

source https://tv9kannada.com/sports/cricket-news/star-sports-released-promo-for-the-gujarat-titans-vs-chennai-super-kings-1st-ipl-2023-match-psr-au14-539770.html

Views: 0

Leave a Reply

Your email address will not be published. Required fields are marked *