Skip to content
  • Monday, March 23, 2026
  • ABOUT US
  • CONTACT US
  • Privacy Policy

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • Privacy Policy
  • Horoscope
  • Home
  • Sports
  • IPL 2023: LSG vs MI ಪಂದ್ಯದಲ್ಲಿ RCB ಪಾಲಿಗೆ ಯಾರು ಗೆಲ್ಲಬೇಕು? ಇಲ್ಲಿದೆ ಮಾಹಿತಿ
Sports

IPL 2023: LSG vs MI ಪಂದ್ಯದಲ್ಲಿ RCB ಪಾಲಿಗೆ ಯಾರು ಗೆಲ್ಲಬೇಕು? ಇಲ್ಲಿದೆ ಮಾಹಿತಿ

May 16, 2023
samagrasuddi

IPL 2023: ಐಪಿಎಲ್​ನ 63ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಅಂಕ ಪಟ್ಟಿಯಲ್ಲಿ 3ನೇ ಹಾಗೂ 4ನೇ ಸ್ಥಾನಗಳಲ್ಲಿರುವ ಈ ತಂಡಗಳ ಮುಖಾಮುಖಿಯನ್ನು ಆರ್​ಸಿಬಿ ಕೂಡ ಎದುರು ನೋಡುತ್ತಿದೆ.ಏಕೆಂದರೆ ಈ ಪಂದ್ಯದಲ್ಲಿ ಸೋಲುವ ತಂಡವೇ ಆರ್​ಸಿಬಿ ಪಾಲಿಗೆ ಪ್ಲೇಆಫ್ ರೇಸ್​ನಲ್ಲಿನ ಎದುರಾಳಿ. ಅಂದರೆ ಇಲ್ಲಿ 14 ಪಾಯಿಂಟ್ಸ್ ಹೊಂದಿರುವ ಮುಂಬೈ ಇಂಡಿಯನ್ಸ್ ಇಂದು ಗೆದ್ದರೆ 16 ಪಾಯಿಂಟ್ಸ್​ನೊಂದಿಗೆ ಪ್ಲೇಆಫ್ ಪ್ರವೇಶವನ್ನು ಬಹುತೇಕ ಖಚಿತಪಡಿಸಿಕೊಳ್ಳಲಿದೆ.ಒಂದು ವೇಳೆ ಲಕ್ನೋ ಸೂಪರ್ ಜೈಂಟ್ಸ್ ಗೆದ್ದರೆ 15 ಪಾಯಿಂಟ್ಸ್​ನೊಂದಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನ ಅಲಂಕರಿಸಲಿದೆ. ಅಲ್ಲದೆ ತನ್ನ ಕೊನೆಯ ಪಂದ್ಯವನ್ನು ಗೆದ್ದು 17 ಪಾಯಿಂಟ್ಸ್​ನೊಂದಿಗೆ ಪ್ಲೇಆಫ್ ಪ್ರವೇಶಿಸಬಹುದು.ಆದರೆ ಇಂದು ಮುಂಬೈ ಇಂಡಿಯನ್ಸ್ ಗೆದ್ದರೆ ಆರ್​ಸಿಬಿಗೆ ಲಾಭವೇ ಹೆಚ್ಚು. ಏಕೆಂದರೆ ಮುಂಬೈ ಇಂಡಿಯನ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ಸೋತು, ಮುಂದಿನ ಪಂದ್ಯವನ್ನು ಗೆದ್ದರೂ ಒಟ್ಟು 15 ಅಂಕಗಳನ್ನು ಮಾತ್ರ ಪಡೆಯಲಿದೆ.ಇತ್ತ ಆರ್​ಸಿಬಿ ತನ್ನ ಕೊನೆಯ ಎರಡು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿ ಒಟ್ಟು 16 ಅಂಕಗಳೊಂದಿಗೆ ಲಕ್ನೋ ತಂಡವನ್ನು ಹಿಂದಿಕ್ಕಿ ಪ್ಲೇಆಫ್ ಪ್ರವೇಶಿಸಲು ಉತ್ತಮ ಅವಕಾಶ ದೊರೆಯಲಿದೆ. ಹೀಗಾಗಿಯೇ ಆರ್​ಸಿಬಿ ಪಾಲಿಗೆ ಇಂದು ಮುಂಬೈ ಇಂಡಿಯನ್ಸ್ ಗೆಲ್ಲಬೇಕು.ಒಂದು ವೇಳೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಸೋತು, ಕೊನೆಯ ಪಂದ್ಯದಲ್ಲಿ ಗೆದ್ದರೆ ರೋಹಿತ್ ಶರ್ಮಾ ಪಡೆ ಒಟ್ಟು 16 ಅಂಕಗಳನ್ನು ಪಡೆಯಲಿದೆ. ಇದರಿಂದ ಆರ್​ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ನೆಟ್ ರನ್​ ರೇಟ್ ಪೈಪೋಟಿ ಎದುರಾಗಲಿದೆ.ಹೀಗಾಗಿ ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆಯಲಿರುವ ಇಂದಿನ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆದ್ದರೆ, ಆರ್​ಸಿಬಿ ತಂಡದ ಪ್ಲೇಆಫ್ ಹಾದಿ ಮತ್ತಷ್ಟು ಸುಗಮವಾಗಲಿದೆ.

source https://tv9kannada.com/photo-gallery/cricket-photos/ipl-2023-lsg-vs-mi-playoffs-race-match-kannada-news-zp-580031.html

Tags: IPL, Ipl2023, LSG, MI, RCB, samagrasuddi, T-20, TATA IPL 2023, ಸಮಗ್ರ ಸುದ್ದಿ

Post navigation

ಇಲ್ಲಿಯವರೆಗೂ ಹೇಗಿತ್ತು ಎನ್ನುವುದು ಬೇಡ. ಇನ್ನು ಮುಂದೆ ಸುಧಾರಣೆಯಾಗಬೇಕು : ಶಾಸಕ ಕೆ.ಸಿ.ವೀರೇಂದ್ರಪಪ್ಪಿ
IPL 2023: ಸಚಿನ್ ತೆಂಡೂಲ್ಕರ್ ದಾಖಲೆ ಮುರಿದ ಶುಭ್​ಮನ್ ಗಿಲ್

Leave a Reply Cancel reply

Your email address will not be published. Required fields are marked *

CITIES

Cities

ಕರ್ನಾಟಕ ಹವಾಮಾನ ಎಚ್ಚರಿಕೆ Weather Alert Karnataka Today.

March 22, 2026
samagrasuddi

ಇಂದಿನ ಹವಾಮಾನ ಸ್ಥಿತಿಕರ್ನಾಟಕ ರಾಜ್ಯದಲ್ಲಿ ಇಂದಿನ ಹವಾಮಾನವು ಬಿಸಿಲು ಹಾಗೂ ಮೋಡ ಕವಿದ ವಾತಾವರಣದ ಮಿಶ್ರಣವಾಗಿರಲಿದೆ. ಕೆಲವು ಜಿಲ್ಲೆಗಳಲ್ಲಿ ಮಧ್ಯಾಹ್ನದಿಂದ ಸಂಜೆವರೆಗೆ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.ತಾಪಮಾನ: ಸುಮಾರು 34°C ರಿಂದ 37°Cಬೆಳಗ್ಗೆ: ಬಿಸಿಲು ಹೆಚ್ಚಾಗಿರುತ್ತದೆಮಧ್ಯಾಹ್ನ/ಸಂಜೆ: ಮೋಡ ಕವಿದು ಮಳೆಯ ಸಾಧ್ಯತೆಮಳೆ…

Cities

ತುರುವೇಕೆರೆಯ ವಿದ್ಯಾರಣ್ಯ”D Ed College”ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಭರ್ಜರಿ ಯಶಸ್ಸು.

March 18, 2026
samagrasuddi
Cities

Karnataka Weather Today: ರಾಜ್ಯದಲ್ಲಿಂದು ಮಳೆಯ ಮುನ್ಸೂಚನೆ, ಹೇಗಿರಲಿದೆ ಹವಾಮಾನ?

March 18, 2026
samagrasuddi
Cities

LPG Helpline Karnataka: ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಆಹಾರ ಇಲಾಖೆಯ ಟೋಲ್ ಫ್ರೀ ನಂಬರ್.

March 16, 2026
samagrasuddi
Cities

ಯುಗಾದಿ ಮತ್ತು ರಂಜಾನ್ ಹಬ್ಬದ ಸಂಭ್ರಮ: KSRTCಯಿಂದ 2,000 ವಿಶೇಷ ಬಸ್‌ಗಳ ವ್ಯವಸ್ಥೆ, ಮುಂಗಡ ಟಿಕೆಟ್ ಮೇಲೆ ಭರ್ಜರಿ ರಿಯಾಯಿತಿ!

March 15, 2026
samagrasuddi

You may Missed

Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80

March 23, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 7 | ದಿನ 79

March 22, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 6 | ದಿನ 78

March 21, 2026
samagrasuddi
Home Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 4.5 | ದಿನ 77

March 20, 2026
samagrasuddi
  • ಕರ್ನಾಟಕ ಆಯುಷ್ ಇಲಾಖೆ ನೇಮಕಾತಿ 2026:ಬೆಂಗಳೂರಿನಲ್ಲಿ ಖಾತೆ ಸಹಾಯಕ ಹುದ್ದೆಗೆ ನೇರ ಸಂದರ್ಶನ | AYUSH Karnataka Recruitment
  • ಇತಿಹಾಸದಲ್ಲೇ ಮೊದಲ ಬಾರಿಗೆ 94ರ ಗಡಿ ದಾಟಿದ ಡಾಲರ್: ರೂಪಾಯಿ ಮೌಲ್ಯ ತೀವ್ರ ಕುಸಿತಕ್ಕೆ ಕಾರಣಗಳೇನು?
  • ಹವಾಮಾನ ಬದಲಾವಣೆಯಿಂದ ಕಾಡುತ್ತಿರುವ ಒಣ ಕೆಮ್ಮು: ಕಾರಣ, ಲಕ್ಷಣ ಮತ್ತು ಪರಿಹಾರ.
  • ​Day Special, ಮಾರ್ಚ್ 23: ದೇಶಪ್ರೇಮದ ಕಿಚ್ಚು ಮತ್ತು ಜಾಗತಿಕ ಬದಲಾವಣೆಯ ದಿನ – ಒಂದು ಸಮಗ್ರ ನೋಟ
  • Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80
Copyright © 2026
CONTACT US
Theme by: Theme Horse
Proudly Powered by: WordPress