
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಏಪ್ರಿಲ್ 2, 10, 17, 26 ಮೇ 21 ರಂದು ಐಪಿಎಲ್ (IPL match) ಪಂದ್ಯಾವಳಿ ನಡೆಯಲಿದ್ದು, ಅಂದು ಮಧ್ಯರಾತ್ರಿ 1 ಗಂಟೆಯ ತನಕ ಮೆಟ್ರೋ ಸೇವೆ (Metro services) ಇರಲಿದೆ ಎಂದು ಮೆಟ್ರೋ ಸಂಸ್ಥೆ ತಿಳಿಸಿದೆ. ಐಪಿಎಲ್ ಪಂದ್ಯ ನಡೆಯುವ ದಿನ ರಾತ್ರಿ 1ರವರೆಗೆ ಮೆಟ್ರೋ ವಿಸ್ತರಣೆ ಮಾಡಿ ಬಿಎಂಆರ್ಸಿಎಲ್ ಪ್ರಕಟಣೆ ಹೊರಡಿಸಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಏಪ್ರಿಲ್ 2, 10, 17, 26 ಮೇ 21 ರಂದು ಐಪಿಎಲ್ ಪಂದ್ಯಗಳು ನಡೆಯಲಿದ್ದು, ಈ ಹಿನ್ನೆಲೆ ಮೆಟ್ರೋ ರೈಲುಗಳಲ್ಲಿ ಭಾರೀ ಜನಸಂದಣಿ ಆಗುವ ನಿರೀಕ್ಷೆಯಿದೆ ಎನ್ನಲಾಗುತ್ತಿದೆ. ರಾತ್ರಿ ಮ್ಯಾಚ್ ಹಿನ್ನೆಲೆ ಬೈಯ್ಯಪ್ಪನಹಳ್ಳಿ, ಕೆಂಗೇರಿ ಮತ್ತು ನಾಗಸಂದ್ರ, ಸಿಲ್ಕ್ ಇನ್ಸ್ಟಿಟ್ಯೂಟ್ಗಳಲ್ಲಿ ರೈಲು ಸೇವೆಗಳನ್ನು ರಾತ್ರಿ 1 ಗಂಟೆಯವರೆಗೆ ಮೆಟ್ರೋ ಸೇವೆ ವಿಸ್ತರಿಸಲಾಗುತ್ತಿದ್ದು, ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಿಂದ ಕೊನೆಯ ರೈಲು 1:30ಕ್ಕೆ ಹೊರಡಲಿದೆ ತಿಳಿಸಲಾಗಿದೆ.
Views: 0