IPL 2023 Orange Cap Winner: ಯುವ ಬ್ಯಾಟರ್​ಗೆ ಒಲಿದ ಐಪಿಎಲ್ ಆರೆಂಜ್ ಕ್ಯಾಪ್

IPL 2023 Orange Cap Winner: ಇಂಡಿಯನ್ ಪ್ರೀಮಿಯರ್ ಲೀಗ್​ನ 16ನೇ ಆವೃತ್ತಿಗೆ ತೆರೆ ಬಿದ್ದಿದೆ. ಅಹಮದಾಬಾದ್​ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಬಗ್ಗು ಬಡಿಯುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಚಾಂಪಿಯನ್ ಪಟ್ಟ ಅಲಂಕರಿಸಿದೆ.
ಇತ್ತ ಟೂರ್ನಿಯುದ್ದಕ್ಕೂ ಅದ್ಭುತ ಪ್ರದರ್ಶನ ನೀಡಿ ಯುವ ದಾಂಡಿಗ ಶುಭ್​ಮನ್ ಗಿಲ್ ಆರೆಂಜ್ ಕ್ಯಾಪ್ ಅನ್ನು ತಮ್ಮದಾಗಿಸಿಕೊಂಡಿದ್ದಾರೆ. ಹಾಗಿದ್ರೆ ಈ ಬಾರಿ ಅತೀ ಹೆಚ್ಚು ರನ್​ ಕಲೆಹಾಕಿದ ಬ್ಯಾಟರ್​ಗಳು ಯಾರೆಲ್ಲಾ ಎಂದು ನೋಡೋಣ...1- ಶುಭ್​ಮನ್ ಗಿಲ್: ಗುಜರಾತ್ ಟೈಟಾನ್ಸ್ ಪರ 17 ಪಂದ್ಯಗಳಲ್ಲಿ ಆರಂಭಿಕರಾಗಿ ಕಣಕ್ಕಿಳಿದ ಶುಭ್​ಮನ್ ಗಿಲ್ 3 ಭರ್ಜರಿ ಶತಕ ಹಾಗೂ 4 ಅರ್ಧಶತಕಗಳೊಂದಿಗೆ ಒಟ್ಟು 890 ರನ್​ ಕಲೆಹಾಕಿದ್ದಾರೆ. ಈ ಮೂಲಕ ಆರೆಂಜ್ ಕ್ಯಾಪ್ ಅನ್ನು ತಮ್ಮದಾಗಿಸಿಕೊಂಡಿದ್ದಾರೆ.2- ಫಾಫ್ ಡುಪ್ಲೆಸಿಸ್: ಆರ್​ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ 14 ಪಂದ್ಯಗಳಲ್ಲಿ 8 ಅರ್ಧಶತಕಗಳೊಂದಿಗೆ ಒಟ್ಟು 730 ರನ್​ ಕಲೆಹಾಕಿದ್ದಾರೆ.3- ಡೆವೊನ್ ಕಾನ್ವೆ: ಸಿಎಸ್​ಕೆ ತಂಡದ ಆರಂಭಿಕ ಆಟಗಾರ ಡೆವೊನ್ ಕಾನ್ವೆ 15 ಇನಿಂಗ್ಸ್​ಗಳಲ್ಲಿ 6 ಅರ್ಧಶತಕಗಳೊಂದಿಗೆ ಒಟ್ಟು 672 ರನ್ ಕಲೆಹಾಕಿದ್ದಾರೆ.4- ವಿರಾಟ್ ಕೊಹ್ಲಿ: ಆರ್​ಸಿಬಿ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ 14 ಇನಿಂಗ್ಸ್​ಗಳಲ್ಲಿ 2 ಭರ್ಜರಿ ಶತಕ ಹಾಗೂ 6 ಅರ್ಧಶತಕಗಳೊಂದಿಗೆ ಒಟ್ಟು 639 ರನ್​ಗಳಿಸಿದ್ದಾರೆ.5- ಯಶಸ್ವಿ ಜೈಸ್ವಾಲ್: ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಆಟಗಾರ 14 ಪಂದ್ಯಗಳಲ್ಲಿ 1 ಶತಕ ಹಾಗೂ 5 ಅರ್ಧಶತಕಗಳೊಂದಿಗೆ ಒಟ್ಟು 625 ರನ್​ ಕಲೆಹಾಕಿದ್ದಾರೆ.

source https://tv9kannada.com/photo-gallery/cricket-photos/ipl-2023-orange-cap-winner-in-kannada-most-runs-scored-player-in-tata-ipl-2023-kannada-news-zp-589104.html

Leave a Reply

Your email address will not be published. Required fields are marked *