IPL 2023 Playoffs: ಪ್ಲೇಆಫ್ ಚಾನ್ಸ್​: ಮಧ್ಯಾಹ್ನ ಮುಂಬೈ ಇಂಡಿಯನ್ಸ್​ಗೆ, ರಾತ್ರಿ RCBಗೆ..!

IPL 2023: ಐಪಿಎಲ್​ನ ಲೀಗ್ ಹಂತದ ಮುಕ್ತಾಯವು ರೋಚಕಘಟ್ಟದತ್ತ ಬಂದು ನಿಂತಿದೆ. ಇದುವರೆಗಿನ 66 ಪಂದ್ಯಗಳ ಪ್ಲೇಆಫ್ ಪ್ರವೇಶವನ್ನು ಖಚಿತಪಡಿಸಿಕೊಂಡಿರುವುದು ಗುಜರಾತ್ ಟೈಟಾನ್ಸ್ ಮಾತ್ರ.ಇನ್ನುಳಿದ 3 ಸ್ಥಾನಗಳಿಗಾಗಿ ಒಟ್ಟು 6 ತಂಡಗಳ ನಡುವೆ ಪೈಪೋಟಿ ಏರ್ಪಟ್ಟಿದೆ. ಪ್ರಸ್ತುತ ಪಾಯಿಂಟ್ಸ್ ಟೇಬಲ್​ನಲ್ಲಿ 2ನೇ ಸ್ಥಾನದಲ್ಲಿರುವ ಸಿಎಸ್​ಕೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆದ್ದರೆ ಪ್ಲೇಆಫ್ ಪ್ರವೇಶ ಖಚಿತವಾಗಲಿದೆ. ಹಾಗೆಯೇ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡವು ಕೆಕೆಆರ್ ವಿರುದ್ಧ ಜಯ ಸಾಧಿಸಿದರೆ ಪ್ಲೇಆಫ್​ಗೆ ಪ್ರವೇಶಿಸಲಿದೆ.
ಈ ಎರಡು ಫಲಿತಾಂಶಗಳ ಬಳಿಕ ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ ನಡುವೆ ಪೈಪೋಟಿ ಏರ್ಪಡಲಿದೆ. ಅಂದರೆ 14 ಪಾಯಿಂಟ್ಸ್ ಹೊಂದಿರುವ ಉಭಯ ತಂಡಗಳಿಗೂ ಪ್ಲೇಆಫ್ ಪ್ರವೇಶಿಸುವ ಉತ್ತಮ ಅವಕಾಶವಿದೆ.ಇಲ್ಲಿ ಮುಂಬೈ ಇಂಡಿಯನ್ಸ್ ತಂಡವು ಎಸ್​ಆರ್​ಹೆಚ್ ವಿರುದ್ಧ ಗೆದ್ದರೆ 16 ಪಾಯಿಂಟ್ಸ್​ನೊಂದಿಗೆ 4ನೇ ಸ್ಥಾನಕ್ಕೇರಲಿದೆ. ಹಾಗೆಯೇ ಆರ್​ಸಿಬಿ ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ ಜಯ ಸಾಧಿಸಿದರೆ 16 ಅಂಕ ಕಲೆಹಾಕಿ ಮುಂಬೈ ಇಂಡಿಯನ್ಸ್ ತಂಡವನ್ನು ಹಿಂದಿಕ್ಕಬಹುದು.ವಿಶೇಷ ಎಂದರೆ ಈ ಎರಡು ಪಂದ್ಯಗಳು ನಡೆಯುತ್ತಿರುವುದು ಭಾನುವಾರ. ಅಂದರೆ ಮೇ 21 ರಂದು ಮಧ್ಯಾಹ್ನ ನಡೆಯಲಿರುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗಲಿದೆ. ಇದರಲ್ಲಿ ಮುಂಬೈ ಗೆದ್ದರೆ ಅಂಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಬಹುದು.ಇನ್ನು ಭಾನುವಾರ ಸಂಜೆ ಶುರುವಾಗಲಿರುವ 2ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದರೆ ಮುಂಬೈ ಇಂಡಿಯನ್ಸ್ ತಂಡವನ್ನು ಹಿಂದಿಕ್ಕಿ ಆರ್​ಸಿಬಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನ ಪಡೆಯಬಹುದು.ಅಂದರೆ ಇಲ್ಲಿ ಮಧ್ಯಾಹ್ನದ ಪಂದ್ಯದಲ್ಲಿ ಗೆದ್ದು ಮುಂಬೈ ಇಂಡಿಯನ್ಸ್​ಗೆ ನಾಲ್ಕನೇ ಸ್ಥಾನ ಅಲಂಕರಿಸುವ ಅವಕಾಶವಿದ್ದರೆ, ರಾತ್ರಿಯ ಪಂದ್ಯದಲ್ಲಿ ಗೆದ್ದು ಬೀಗುವ ಮೂಲಕ 4ನೇ ಸ್ಥಾನಕ್ಕೇರುವ ಉತ್ತಮ ಅವಕಾಶ ಆರ್​ಸಿಬಿ ಮುಂದಿದೆ. ಹೀಗಾಗಿಯೇ ಐಪಿಎಲ್​ನ ಲೀಗ್ ಹಂತದ ಕೊನೆಯ 2 ಪಂದ್ಯಗಳಲ್ಲಿ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದು.ಒಂದು ವೇಳೆ 15 ಅಂಕಗಳನ್ನು ಹೊಂದಿರುವ ಸಿಎಸ್​ಕೆ ಹಾಗೂ ಲಕ್ನೋ ಸೂಪರ್ ಜೈಂಟ್ಸ್​ ತಂಡಗಳಲ್ಲಿ ಒಂದು ತಂಡವು ಮುಂದಿನ ಪಂದ್ಯದಲ್ಲಿ ಸೋತರೆ, ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ ಮುಂದಿನ ಪಂದ್ಯಗಳಲ್ಲಿ ಗೆದ್ದು ಒಟ್ಟು 16 ಪಾಯಿಂಟ್ಸ್​ನೊಂದಿಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಇರಲಿದೆ.

source https://tv9kannada.com/photo-gallery/cricket-photos/ipl-2023-rcb-and-mi-playoffs-chances-kannada-news-zp-583190.html

Leave a Reply

Your email address will not be published. Required fields are marked *