Skip to content
  • Sunday, July 6, 2025
  • About us
  • Contact us
ಸಮಗ್ರ ಸುದ್ದಿ

ಸಮಗ್ರ ಸುದ್ದಿ

ನಿಖರತೆಗೆ ಮತ್ತೊಂದು ಹೆಸರು

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • Horoscope
  • Home
  • Sports
  • IPL 2023 Playoffs: ಪ್ಲೇಆಫ್​ಗೆ LSG ಲಗ್ಗೆ: ಇನ್ನು RCB ಮತ್ತು MI ನಡುವೆ ಪೈಪೋಟಿ
Sports

IPL 2023 Playoffs: ಪ್ಲೇಆಫ್​ಗೆ LSG ಲಗ್ಗೆ: ಇನ್ನು RCB ಮತ್ತು MI ನಡುವೆ ಪೈಪೋಟಿ

May 20, 2023
samagrasuddi

IPL 2023: ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಐಪಿಎಲ್​ನ 68ನೇ ಪಂದ್ಯದಲ್ಲಿ ಕೆಕೆಆರ್​ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ರೋಚಕ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಲಕ್ನೋ ಸೂಪರ್ ಜೈಂಟ್ಸ್​ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ.ಈ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ತಂಡವು ಲಕ್ನೋ ಸೂಪರ್ ಜೈಂಟ್ಸ್​ ಅನ್ನು ಮೊದಲು ಬ್ಯಾಟಿಂಗ್​ಗೆ ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಎಲ್​​ಎಸ್​ಜಿ ನಿಕೋಲಸ್ ಪೂರನ್ (58) ಅವರ ಅರ್ಧಶತಕದ ನೆರವಿನೊಂದಿಗೆ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 176 ರನ್ ಕಲೆಹಾಕಿತು.177 ರನ್​ಗಳ ಸ್ಪರ್ಧಾತ್ಮಕ ಗುರಿ ಪಡೆದ ಕೆಕೆಆರ್ ತಂಡಕ್ಕೆ ಜೇಸನ್ ರಾಯ್ (44) ಉತ್ತಮ ಆರಂಭ ಒದಗಿಸಿದ್ದರು. ಇದರ ನಡುವೆ ಮಧ್ಯಮ ಕ್ರಮಾಂಕದಲ್ಲಿ ಕುಸಿತ ಕಂಡಿತು. ಇದಾಗ್ಯೂ ಕೊನೆಯ 5 ಓವರ್​ಗಳಲ್ಲಿ ಗೆಲ್ಲಲು ಕೆಕೆಆರ್​ಗೆ 63 ರನ್​ಗಳ ಅವಶ್ಯಕೆಯಿತ್ತು.ಈ ಹಂತದಲ್ಲಿ ರಿಂಕು ಸಿಂಗ್ ಜೊತೆಗಿದ್ದ  ಆ್ಯಂಡ್ರೆ ರಸೆಲ್ (7) ರವಿ ಬಿಷ್ಣೋಯ್ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು. ಇದಾಗ್ಯೂ ರಿಂಕು ಸಿಂಗ್ ಏಕಾಂಗಿ ಹೋರಾಟ ಮುಂದುವರೆಸಿದ್ದರು.ಅದರಲ್ಲೂ ನವೀನ್ ಉಲ್ ಹಕ್ ಎಸೆದ 19ನೇ ಓವರ್​ನಲ್ಲಿ 3 ಫೋರ್​ ಹಾಗೂ 1 ಸಿಕ್ಸ್​ನೊಂದಿಗೆ ರಿಂಕು ಸಿಂಗ್ 20 ರನ್ ಚಚ್ಚಿ ಅರ್ಧಶತಕ ಪೂರೈಸಿದರು. ಪರಿಣಾಮ ಕೊನೆಯ ಓವರ್​ನಲ್ಲಿ 21 ರನ್​ಗಳ ಟಾರ್ಗೆಟ್ ಪಡೆಯಿತು.ಆದರೆ ಅಂತಿಮ ಓವರ್​ನಲ್ಲಿ ರಿಂಕು ಸಿಂಗ್ (67) 2 ಭರ್ಜರಿ ಸಿಕ್ಸ್ ಹಾಗೂ 1 ಫೋರ್​ನೊಂದಿಗೆ 19 ರನ್ ಬಾರಿಸಲಷ್ಟೇ ಶಕ್ತರಾದರು. ಇದರೊಂದಿಗೆ ಲಕ್ನೋ ಸೂಪರ್ ಜೈಂಟ್ಸ್ ತಂಡವು 1 ರನ್​ನಿಂದ ರೋಚಕ ಜಯ ಸಾಧಿಸಿತು.ಈ ಗೆಲುವಿನೊಂದಿಗೆ ಒಟ್ಟು 17 ಪಾಯಿಂಟ್ಸ್ ಕಲೆಹಾಕಿರುವ ಲಕ್ನೋ ಸೂಪರ್ ಜೈಂಟ್ಸ್ ಪ್ಲೇಆಫ್​ಗೆ ಪ್ರವೇಶಿಸಿದೆ. ಇದರೊಂದಿಗೆ ಪ್ಲೇಆಫ್​ ಆಡಳಿರುವ ಅಗ್ರ ಮೂರು ತಂಡಗಳು ಖಚಿತವಾಗಿದೆ.ಇದಕ್ಕೂ ಮುನ್ನ 13 ಪಂದ್ಯಗಳಲ್ಲಿ 9 ಜಯ ಸಾಧಿಸಿರುವ ಗುಜರಾತ್ ಟೈಟಾನ್ಸ್​ ತಂಡವು ಪಾಯಿಂಟ್ಸ್​ ಟೇಬಲ್​ನಲ್ಲಿ ಅಗ್ರಸ್ಥಾನ ಅಲಂಕರಿಸಿ ಪ್ಲೇಆಫ್ ಪ್ರವೇಶಿಸಿತ್ತು. ಅಲ್ಲದೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆದ್ದು 17 ಪಾಯಿಂಟ್ಸ್​ನೊಂದಿಗೆ ಸಿಎಸ್​ಕೆ ತಂಡವು ಪ್ಲೇಆಫ್ ಪ್ರವೇಶಿಸಿದೆ. ಇದೀಗ 17 ಪಾಯಿಂಟ್ಸ್​ಗಳೊಂದಿಗೆ ಲಕ್ನೋ ಸೂಪರ್ ಜೈಂಟ್ಸ್ ಅಂಕಪಟ್ಟಿಯಲ್ಲಿ 3ನೇ ಸ್ಥಾನ ಅಲಂಕರಿಸಿ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ. ಇನ್ನು ನಾಲ್ಕನೇ ಸ್ಥಾನ ಮಾತ್ರ ಉಳಿದಿದ್ದು, ಈ ಸ್ಥಾನಕ್ಕಾಗಿ ಮುಂಬೈ ಇಂಡಿಯನ್ಸ್ ಹಾಗೂ ಆರ್​​ಸಿಬಿ ನಡುವೆ ಪೈಪೋಟಿ ಇದೆ.
ಅದರಂತೆ ಭಾನುವಾರ ಮಧ್ಯಾಹ್ನ ನಡೆಯಲಿರುವ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆದ್ದರೆ 16 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನ ಅಲಂಕರಿಸಬಹುದು.ಹಾಗೆಯೇ ಭಾನುವಾರ ರಾತ್ರಿ ನಡೆಯಲಿರುವ 2ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗಲಿದ್ದು, ಈ ಪಂದ್ಯದಲ್ಲಿ ಆರ್​ಸಿಬಿ ಗೆದ್ದರೆ ಉತ್ತಮ ನೆಟ್​ ರನ್​ ರೇಟ್​ನೊಂದಿಗೆ ನಾಲ್ಕನೇ ಸ್ಥಾನಕ್ಕೇರಬಹುದು. ಈ ಮೂಲಕ ಪ್ಲೇಆಫ್ ಪ್ರವೇಶಿಸುವ ಅವಕಾಶ ಆರ್​ಸಿಬಿಗಿದೆ.ಅಂದರೆ ನಾಳಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ ಗೆದ್ದರೆ ಉಭಯ ತಂಡಗಳು ಒಟ್ಟು 16 ಅಂಕಗಳನ್ನು ಗಳಿಸಲಿದೆ. ಇಲ್ಲಿ ಯಾವ ತಂಡವು ಹೆಚ್ಚಿನ ರನ್ ರೇಟ್ ಹೊಂದಿರುತ್ತೆ ಆ ತಂಡಕ್ಕೆ ಪ್ಲೇಆಫ್ ಅವಕಾಶ ಸಿಗಲಿದೆ. ಹೀಗಾಗಿಯೇ ಭಾನುವಾರ ನಡೆಯಲಿರುವ ಲೀಗ್ ಹಂತದ ಕೊನೆಯ 2 ಪಂದ್ಯಗಳು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

source https://tv9kannada.com/photo-gallery/cricket-photos/ipl-2023-lsg-qualified-for-playoffs-kannada-news-zp-583546.html

Tags: Cricket, Indian premier league, IPL, KKR, Kolkata, LSG, Lucknow, samagrasuddi, T-20, TATA IPL 2023, ಸಮಗ್ರ ಸುದ್ದಿ

Post navigation

IPL 2023: RCB vs GT ಪಂದ್ಯಕ್ಕೆ ಮಳೆ ಭೀತಿ: ಮ್ಯಾಚ್ ರದ್ದಾದರೆ ಯಾರಿಗೆ ಲಾಭ?
RCB vs GT, IPL 2023: ಐಪಿಎಲ್​ನಲ್ಲಿಂದು ಎರಡು ರೋಚಕ ಪಂದ್ಯ: ಆರ್​ಸಿಬಿ-ಗುಜರಾತ್ ಮ್ಯಾಚ್ ಮೇಲೆ ಎಲ್ಲರ ಕಣ್ಣು

Leave a Reply Cancel reply

Your email address will not be published. Required fields are marked *

Recent Comments

  1. Kaveri Sonkamble on SBI ನೇಮಕಾತಿ; ಸರ್ಕಲ್​ ಬೇಸ್ಡ್​​ ಆಫೀಸರ್​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನMay 31, 2025

    Kaveri Sonkamble

  2. Vani m on SBI Recruitment 2025: SBI ಬ್ಯಾಂಕಿನಲ್ಲಿ 2964 ಹುದ್ದೆಗಳಿಗೆ ನೇಮಕಾತಿ; ಪದವೀಧರರು ಕೂಡಲೇ ಅರ್ಜಿ ಸಲ್ಲಿಸಿMay 13, 2025

    I am complete b. Com in experience of work

  3. Sushma Basayya Hiremath on ಅಗ್ನಿವೀರ್​ ನೇಮಕಾತಿ: ರಾಜ್ಯದ 14 ಜಿಲ್ಲೆಗಳ ಅಭ್ಯರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ.April 9, 2025

    Sushma Basayya Hiremath

  4. samagrasuddi on ಮೈಸೂರು| ಶಾರದ ವಿಲಾಸ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ವಿಶ್ವ ಜಲ ದಿನ ಕಾರ್ಯಕ್ರಮ.March 24, 2025

    Tq

  5. Darshan K M on ಮೈಸೂರು| ಶಾರದ ವಿಲಾಸ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ವಿಶ್ವ ಜಲ ದಿನ ಕಾರ್ಯಕ್ರಮ.March 24, 2025

    Meaning full program..✨❤️

CITIES

Cities

🏫 ಕರ್ನಾಟಕದ 4,134 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿಗಳಿಗೆ ಅವಕಾಶ

July 4, 2025
samagrasuddi

📅 ದಿನಾಂಕ: 4 ಜುಲೈ 2025✍️ ಸಮಗ್ರ ಸುದ್ದಿ ವಿಶೇಷ ✅ ಮಹತ್ವದ ನಿರ್ಧಾರ: ಕರ್ನಾಟಕ ಸರ್ಕಾರವು 2025–26ನೇ ಶೈಕ್ಷಣಿಕ ವರ್ಷದಿಂದ ರಾಜ್ಯದ 4,134 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿಗಳನ್ನು ಪ್ರಾರಂಭಿಸಲು ಸಿದ್ಧತೆ ಮಾಡಿಕೊಂಡಿದೆ. ವಿದ್ಯಾರ್ಥಿಗಳಿಗೆ ಇಂದಿನ ಸ್ಪರ್ಧಾತ್ಮಕ…

Cities

ಕರ್ನಾಟಕದ ಪ್ರಮುಖ ಐತಿಹಾಸಿಕ ತಾಣಗಳು

July 4, 2025
samagrasuddi
Cities

ದಾವಣಗೆರೆ ಜಿಲ್ಲೆಯ ಮಾರುತಿ ಹೆಚ್ ಗೆ 2025ರ ಇಂಟರ್ ನ್ಯಾಷನಲ್ ಐಕಾನ್ ಪ್ರಶಸ್ತಿ ಪ್ರದಾನ.

July 4, 2025
samagrasuddi
Cities

“ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯ ಮುನ್ಸೂಚನೆ – ರೈತರಿಗೆ ಮುನ್ನೆಚ್ಚರಿಕೆ ಅಗತ್ಯ!”

July 4, 2025
samagrasuddi
Cities Health

ಚಿಂತೆ ಬೇಡ, ಹೃದಯ ಸೇಫ್! — ಹಾಸನ ಜಿಲ್ಲೆಯಲ್ಲಿನ ಹೃದಯಾಘಾತ ಪ್ರಕರಣಗಳಿಗೆ ತಡೆಗಟ್ಟಲು ಸರ್ಕಾರದಿಂದ ಕ್ರಮ

July 2, 2025
samagrasuddi

You may Missed

Health

“Health Tips”: ವಿಟಮಿನ್‌ ಡಿ: ನಮಗೇಕೆ ಬೇಕು?

July 6, 2025
samagrasuddi
Health

ತಿಂಗಳುಗಟ್ಟಲೆ ಕ್ಯಾರೆಟ್ ತಾಜಾವಾಗಿರಲು ಈ ಸಲಹೆಯನ್ನು ಅನುಸರಿಸಿ! “carrot”

July 5, 2025
samagrasuddi
Health

“ಕರ್ನಾಟಕದಲ್ಲಿ COVID-19 ಪ್ರಕರಣಗಳಲ್ಲಿ ಮತ್ತೆ ಹೆಚ್ಚಳ – ಆರೋಗ್ಯ ಇಲಾಖೆ ಎಚ್ಚರಿಕೆ”

July 4, 2025
samagrasuddi
Health

🌿 ತುಳಸಿಯ ಸೌಂದರ್ಯ ಮತ್ತು ಆರೋಗ್ಯ ಮಹತ್ವ

July 4, 2025
samagrasuddi
July 2025
M T W T F S S
 123456
78910111213
14151617181920
21222324252627
28293031  
« Jun    
  • ನರೇನಹಾಳ್ ಗ್ರಾಮದಲ್ಲಿ ಭಾರತೀಯ ಯೋಗ ಶಿಕ್ಷಣ ಬಾಲಗೋಕುಲ ಕಾರ್ಯಕ್ರಮ:
  • “IND vs ENG”: ಗಿಲ್ ಶತಕ, ಸಿರಾಜ್- ಆಕಾಶ್ ಮಾರಕ ದಾಳಿ; ದಿನದಾಟದಂತ್ಯಕ್ಕೆ ಇಂಗ್ಲೆಂಡ್ 72/3
  • “Health Tips”: ವಿಟಮಿನ್‌ ಡಿ: ನಮಗೇಕೆ ಬೇಕು?
  • “Horoscope Today 06 July”: ಇಂದು ಈ ರಾಶಿಯವರಿಗೆ ಪುಣ್ಯ ಕರ್ಮಗಳನ್ನು ಮಾಡಲು ಅನಿರೀಕ್ಷಿತ ಅವಕಾಶ.
  • ನೀರಜ್ ಚೋಪ್ರಾ ಪ್ರಧಾನದ ಆಕರ್ಷಣೆ: ಬೆಂಗ್ಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇಂದು ಎನ್ ಸಿ ಕ್ಲಾಸಿಕ್ ಸ್ಪರ್ಧೆ
Copyright © 2025 ಸಮಗ್ರ ಸುದ್ದಿ
Contact us
Theme by: Theme Horse
Proudly Powered by: WordPress