IPL 2023 Points Table: RCBಗೆ ಭರ್ಜರಿ ಜಯ, CSKಗೆ ಸೋಲು: ಹೊಸ ಪಾಯಿಂಟ್ಸ್​ ಟೇಬಲ್ ಹೀಗಿದೆ

IPL 2023 Points Table: ಐಪಿಎಲ್ ಸೀಸನ್ 16 ರ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಬಹುತೇಕ ತಂಡಗಳು 12 ಪಂದ್ಯಗಳನ್ನು ಆಡಿದ್ದು, ಇದಾಗ್ಯೂ ಪ್ಲೇಆಫ್ ರೇಸ್ ಮುಂದುವರೆದಿದೆ.ಅದರಲ್ಲೂ ಕೆಕೆಆರ್ ವಿರುದ್ಧ ಸೋತಿರುವ ಸಿಎಸ್​ಕೆ ತಂಡವು ಪ್ಲೇಆಫ್ ಪ್ರವೇಶಿಸಲು ಕೊನೆಯ ಪಂದ್ಯದಲ್ಲಿ ಗೆಲ್ಲಲೇಬೇಕಿದೆ. ಒಂದು ವೇಳೆ ಸೋತರೆ ಟಾಪ್-4 ನಿಂದ ಹೊರಬೀಳುವ ಸಾಧ್ಯತೆ ಹೆಚ್ಚಿದೆ.ಅತ್ತ ಗುಜರಾತ್ ಟೈಟಾನ್ಸ್ ತಂಡವು ಮುಂದಿನ 2 ಪಂದ್ಯಗಳಲ್ಲಿ 1 ರಲ್ಲಿ ಜಯ ಸಾಧಿಸಿದರೆ ಪ್ಲೇಆಫ್ ಪ್ರವೇಶಿಸಲಿದೆ. ಹಾಗೆಯೇ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗೆಲ್ಲುವ ಮೂಲಕ ಆರ್​ಸಿಬಿ ತಂಡವು ತನ್ನ ಪ್ಲೇಆಫ್ ಆಸೆಯನ್ನು ಜೀವಂತವಿರಿಸಿಕೊಂಡಿದೆ.​ಅದರಂತೆ 61 ಪಂದ್ಯಗಳ ಮುಕ್ತಾಯದ ಬಳಿಕ ಐಪಿಎಲ್​ ಪಾಯಿಂಟ್ಸ್​​ ಟೇಬಲ್​ನ ವಿವರ ಈ ಕೆಳಗಿನಂತಿದೆ...1- ಗುಜರಾತ್ ಟೈಟಾನ್ಸ್ (16 ಅಂಕಗಳು): ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡವು ಆಡಿರುವ 12 ಪಂದ್ಯಗಳಲ್ಲಿ 4 ಸೋಲು ಹಾಗೂ 8 ಗೆಲುವು ದಾಖಲಿಸಿದೆ. ಈ ಮೂಲಕ +0.761 ನೆಟ್​ ರನ್​ ರೇಟ್​ನೊಂದಿಗೆ ಅಗ್ರಸ್ಥಾನ ಅಲಂಕರಿಸಿದೆ.2- ಚೆನ್ನೈ ಸೂಪರ್ ಕಿಂಗ್ಸ್ (15 ಅಂಕಗಳು)​: 13 ಪಂದ್ಯಗಳನ್ನಾಡಿರುವ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಸಿಎಸ್​ಕೆ ತಂಡವು 5 ಸೋಲು ಮತ್ತು 7 ಗೆಲುವು ದಾಖಲಿಸಿದೆ. ಇನ್ನು ಒಂದು ಪಂದ್ಯವು ರದ್ದಾದ ಕಾರಣ 1 ಅಂಕ ಪಡೆದುಕೊಂಡಿದೆ. ಅದರಂತೆ ಇದೀಗ +0.381​ ನೆಟ್​ ರನ್​ ರೇಟ್​ನೊಂದಿಗೆ ದ್ವಿತೀಯ ಸ್ಥಾನದಲ್ಲಿದೆ.3- ಮುಂಬೈ ಇಂಡಿಯನ್ಸ್ (14 ಅಂಕಗಳು): ಆಡಿರುವ 12 ಪಂದ್ಯಗಳಲ್ಲಿ 7 ಜಯ ಹಾಗೂ 5 ಸೋಲಿನೊಂದಿಗೆ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ -0.117 ನೆಟ್​ ರನ್​ ರೇಟ್ ಪಡೆದು 3ನೇ ಸ್ಥಾನದಲ್ಲಿದೆ.4- ಲಕ್ನೋ ಸೂಪರ್ ಜೈಂಟ್ಸ್ (13 ಅಂಕಗಳು)​: 12 ಪಂದ್ಯಗಳಲ್ಲಿ 5 ಸೋಲು ಹಾಗೂ 6 ಗೆಲುವು ದಾಖಲಿಸಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡದ ಒಂದು ಪಂದ್ಯವು ರದ್ದಾಗಿತ್ತು. ಅದರಂತೆ 1 ಅಂಕ ಪಡೆದಿರುವ ಲಕ್ನೋ ತಂಡವು +0.309 ನೆಟ್​ ರನ್​ ರೇಟ್​ನೊಂದಿಗೆ 4ನೇ ಸ್ಥಾನ ಅಲಂಕರಿಸಿದೆ.5- ರಾಯಲ್ ಚಾಲೆಂಜರ್ಸ್ ಬೆಂಗಳೂರು (12 ಅಂಕಗಳು): ಫಾಫ್ ಡುಪ್ಲೆಸಿಸ್ ನೇತೃತ್ವದ ಆರ್​ಸಿಬಿ ತಂಡವು 12 ಪಂದ್ಯಗಳನ್ನು ಮುಗಿಸಿದ್ದು, ಇದರಲ್ಲಿ 6 ಪಂದ್ಯಗಳಲ್ಲಿ ಗೆದ್ದರೆ, 6 ರಲ್ಲಿ ಸೋತಿದೆ. ಇದೀಗ +0.166 ನೆಟ್​ ರನ್​ ರೇಟ್​ನೊಂದಿಗೆ 5ನೇ ಸ್ಥಾನದಲ್ಲಿದೆ.6- ರಾಜಸ್ಥಾನ್ ರಾಯಲ್ಸ್ (12 ಅಂಕಗಳು): 12 ಪಂದ್ಯಗಳನ್ನಾಡಿರುವ ರಾಜಸ್ಥಾನ್ ರಾಯಲ್ಸ್ ತಂಡವು 6 ಗೆಲುವು ಹಾಗೂ 6 ಸೋಲಿನೊಂದಿಗೆ ಪಾಯಿಂಟ್ಸ್​ ಟೇಬಲ್​ನಲ್ಲಿ 6ನೇ ಸ್ಥಾನ ಅಲಂಕರಿಸಿದೆ. ಆರ್​ಆರ್​ ತಂಡದ ಪ್ರಸ್ತುತ ನೆಟ್​ ರನ್​ ರೇಟ್ ನೆಟ್ +0.140.7- ಕೊಲ್ಕತ್ತಾ ನೈಟ್ ರೈಡರ್ಸ್ (12 ಅಂಕಗಳು): ಕೆಕೆಆರ್ ಆಡಿರುವ 13 ಪಂದ್ಯಗಳಲ್ಲಿ 7 ಸೋಲು, 6 ಗೆಲುವು ದಾಖಲಿಸಿದೆ. ಇದೀಗ -0.256 ನೆಟ್​ ರನ್​ ರೇಟ್ ಹೊಂದಿರುವ ನಿತೀಶ್ ರಾಣಾ ಪಡೆಯು 7ನೇ ಸ್ಥಾನದಲ್ಲಿದೆ.8 - ಪಂಜಾಬ್ ಕಿಂಗ್ಸ್ (12 ಅಂಕಗಳು)​: ಶಿಖರ್ ಧವನ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡವು ಆಡಿರುವ 12 ಪಂದ್ಯಗಳಲ್ಲಿ 6 ರಲ್ಲಿ ಜಯ ಸಾಧಿಸಿದ್ದು, ಹಾಗೆಯೇ 6 ರಲ್ಲಿ ಸೋಲು ಕಂಡಿದೆ. ಇದೀಗ -0.268 ನೆಟ್​ ರನ್​ ರೇಟ್​ನೊಂದಿಗೆ 8ನೇ ಸ್ಥಾನ ಅಲಂಕರಿಸಿದೆ.9- ಸನ್​ರೈಸರ್ಸ್ ಹೈದರಾಬಾದ್ (8 ಅಂಕಗಳು): ಆಡಿರುವ 11 ಪಂದ್ಯಗಳಲ್ಲಿ 4 ರಲ್ಲಿ ಜಯ ಸಾಧಿಸಿ, 7 ಮ್ಯಾಚ್​ನಲ್ಲಿ ಸೋತಿರುವ ಸನ್​ರೈಸರ್ಸ್ ಹೈದರಾಬಾದ್ ತಂಡವು -0.471 ನೆಟ್​ ರನ್ ರೇಟ್​ನೊಂದಿಗೆ ಪಾಯಿಂಟ್ಸ್​ ಟೇಬಲ್​ನಲ್ಲಿ 9ನೇ ಸ್ಥಾನದಲ್ಲಿದೆ.10- ಡೆಲ್ಲಿ ಕ್ಯಾಪಿಟಲ್ಸ್ (8 ಅಂಕಗಳು): ಆಡಿರುವ 12 ಪಂದ್ಯಗಳಲ್ಲಿ 4 ರಲ್ಲಿ ಜಯ ಸಾಧಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ. ಪ್ರಸ್ತುತ ಪಾಯಿಂಟ್ ಟೇಬಲ್​ನಲ್ಲಿ -0.686 ನೆಟ್​ ರನ್​ ರೇಟ್​ನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಕೊನೆಯ ಸ್ಥಾನದಲ್ಲಿದೆ.ಭಾನುವಾರದವರೆಗೆ (ಮೇ 14) ಒಟ್ಟು 61 ಪಂದ್ಯಗಳು ಮುಗಿದಿದ್ದು, ಈ ಪಂದ್ಯಗಳ ಬಳಿಕ ಅಪ್​ಡೇಟ್ ಆಗಿರುವ ಪಾಯಿಂಟ್ಸ್​ ಟೇಬಲ್ ಅನ್ನು ಇಲ್ಲಿ ನೀಡಲಾಗಿದೆ.

source https://tv9kannada.com/photo-gallery/cricket-photos/ipl-2023-points-table-today-ipl-points-table-2023-kannada-news-zp-578816.html

Views: 0

Leave a Reply

Your email address will not be published. Required fields are marked *