IPL 2023 Points Table: ಭರ್ಜರಿ ಜಯದೊಂದಿಗೆ ಅಂಕಪಟ್ಟಿಯಲ್ಲಿ ಮೇಲೇರಿದ RCB

IPL 2023 Points Table: ಐಪಿಎಲ್ ಸೀಸನ್ 16 ರ ದ್ವಿತಿಯಾರ್ಧ ಭರದಿಂದ ಸಾಗುತ್ತಿದೆ. ಈಗಾಗಲೇ ಬಹುತೇಕ ತಂಡಗಳ 2ನೇ ಸುತ್ತಿನ ಮೊದಲ ಪಂದ್ಯ ಮುಗಿದಿದೆ. ಆರ್​ಸಿಬಿ ತಂಡವು ದ್ವಿತಿಯಾರ್ಧದಲ್ಲಿ 2ನೇ ಪಂದ್ಯವಾಡಿದ್ದು, ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿದೆ.ಅತ್ತ ಸಿಎಸ್​ಕೆ, ರಾಜಸ್ಥಾನ್ ರಾಯಲ್ಸ್​ ತಂಡಗಳು ಕಳೆದ ಪಂದ್ಯದಲ್ಲಿ ಸೋತಿದ್ದು, ಇತ್ತ ಆರ್​ಸಿಬಿ ಹಾಗೂ ಮುಂಬೈ ಇಂಡಿಯನ್ಸ್​ ತಂಡಗಳು ಗೆಲುವು ಸಾಧಿಸಿದೆ. ಇದರೊಂದಿಗೆ ಪಾಯಿಂಟ್ಸ್​ ಟೇಬಲ್​ನಲ್ಲೂ ಮಹತ್ವದ ಬದಲಾವಣೆಯಾಗಿದೆ. ಅದರಂತೆ 43 ಪಂದ್ಯಗಳ ಮುಕ್ತಾಯದ ಬಳಿಕ ಐಪಿಎಲ್​ ಪಾಯಿಂಟ್ಸ್​​ ಟೇಬಲ್​ನ ವಿವರ ಈ ಕೆಳಗಿನಂತಿದೆ...1- ಗುಜರಾತ್ ಟೈಟಾನ್ಸ್ (12 ಅಂಕಗಳು): ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡವು ಆಡಿರುವ 8 ಪಂದ್ಯಗಳಲ್ಲಿ 2 ಸೋಲು ಹಾಗೂ 6 ಗೆಲುವು ದಾಖಲಿಸಿದೆ. ಈ ಮೂಲಕ +0.638 ನೆಟ್​ ರನ್​ ರೇಟ್​ನೊಂದಿಗೆ ಅಗ್ರಸ್ಥಾನ ಅಲಂಕರಿಸಿದೆ.2- ರಾಜಸ್ಥಾನ್ ರಾಯಲ್ಸ್ (10 ಅಂಕಗಳು): 8 ಪಂದ್ಯಗಳನ್ನಾಡಿರುವ ರಾಜಸ್ಥಾನ್ ರಾಯಲ್ಸ್ ತಂಡವು 5 ಗೆಲುವು ಹಾಗೂ 3 ಸೋಲಿನೊಂದಿಗೆ ಪಾಯಿಂಟ್ಸ್​ ಟೇಬಲ್​ನಲ್ಲಿ 2ನೇ ಸ್ಥಾನ ಅಲಂಕರಿಸಿದೆ. ಆರ್​ಆರ್​ ತಂಡದ ಪ್ರಸ್ತುತ ನೆಟ್​ ರನ್​ ರೇಟ್ ನೆಟ್​​ +0.939.3- ಲಕ್ನೋ ಸೂಪರ್ ಜೈಂಟ್ಸ್ (10 ಅಂಕಗಳು)​: 9 ಪಂದ್ಯಗಳಲ್ಲಿ 4 ಸೋಲು ಹಾಗೂ 5 ಗೆಲುವು ದಾಖಲಿಸಿರುವ ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡವು +0.639 ನೆಟ್​ ರನ್​ ರೇಟ್​ನೊಂದಿಗೆ ಮೂರನೇ ಸ್ಥಾನ ಅಲಂಕರಿಸಿದೆ.4- ಚೆನ್ನೈ ಸೂಪರ್ ಕಿಂಗ್ಸ್ (10 ಅಂಕಗಳು)​: 8 ಪಂದ್ಯಗಳನ್ನಾಡಿರುವ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಸಿಎಸ್​ಕೆ ತಂಡವು 3 ಸೋಲು ಮತ್ತು 5 ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ. ತಂಡದ ಪ್ರಸ್ತುತ ಪಾಯಿಂಟ್ಸ್ ಟೇಬಲ್​ ನೆಟ್​ ರನ್​ ರೇಟ್​ +0.376.5- ರಾಯಲ್ ಚಾಲೆಂಜರ್ಸ್ ಬೆಂಗಳೂರು (10 ಅಂಕಗಳು): ಫಾಫ್ ಡುಪ್ಲೆಸಿಸ್ ನೇತೃತ್ವದ ಆರ್​ಸಿಬಿ ತಂಡವು 9 ಪಂದ್ಯಗಳನ್ನು ಮುಗಿಸಿದ್ದು, ಇದರಲ್ಲಿ 5 ಪಂದ್ಯಗಳಲ್ಲಿ ಗೆದ್ದರೆ, 4 ರಲ್ಲಿ ಸೋತಿದೆ. ಇದೀಗ -0.030 ನೆಟ್​ ಹೊಂದಿರುವ ಕಾರಣ 5ನೇ ಸ್ಥಾನಕ್ಕೇರಿದೆ. ಈ ಹಿಂದೆ ಆರ್​ಸಿಬಿ 6ನೇ ಸ್ಥಾನಕ್ಕೆ ಕುಸಿದಿತ್ತು.6 - ಪಂಜಾಬ್ ಕಿಂಗ್ಸ್ (10 ಅಂಕಗಳು)​: ಶಿಖರ್ ಧವನ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡವು ಆಡಿರುವ 9 ಪಂದ್ಯಗಳಲ್ಲಿ 5 ಜಯ ಸಾಧಿಸಿದ್ದು, ಹಾಗೆಯೇ 4 ರಲ್ಲಿ ಸೋಲು ಕಂಡಿದೆ. ಇದೀಗ -0.447 ನೆಟ್​ ರನ್​ ರೇಟ್​ನೊಂದಿಗೆ 6ನೇ ಸ್ಥಾನ ಅಲಂಕರಿಸಿದೆ.7- ಮುಂಬೈ ಇಂಡಿಯನ್ಸ್ (8 ಅಂಕಗಳು): ಆಡಿರುವ 8 ಪಂದ್ಯಗಳಲ್ಲಿ 4 ಜಯ ಹಾಗೂ 4 ಸೋಲಿನೊಂದಿಗೆ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ -0.502 ನೆಟ್​ ರನ್​ ರೇಟ್ ಪಡೆದು 7ನೇ ಸ್ಥಾನದಲ್ಲಿದೆ.8- ಕೊಲ್ಕತ್ತಾ ನೈಟ್ ರೈಡರ್ಸ್ (6 ಅಂಕಗಳು): ಕೆಕೆಆರ್ ಆಡಿರುವ 9 ಪಂದ್ಯಗಳಲ್ಲಿ 6 ಸೋಲು, 3 ಗೆಲುವು ಸಾಧಿಸಿದೆ. ಇದೀಗ 	-0.147 ನೆಟ್​ ರನ್​ ರೇಟ್ ಹೊಂದಿರುವ ನಿತೀಶ್ ರಾಣಾ ಪಡೆಯು 8ನೇ ಸ್ಥಾನದಲ್ಲಿದೆ.9- ಸನ್​ರೈಸರ್ಸ್ ಹೈದರಾಬಾದ್ (6 ಅಂಕಗಳು): ಆಡಿರುವ 8 ಪಂದ್ಯಗಳಲ್ಲಿ 3 ರಲ್ಲಿ ಜಯ ಸಾಧಿಸಿ, 5 ಮ್ಯಾಚ್​ನಲ್ಲಿ ಸೋತಿರುವ ಸನ್​ರೈಸರ್ಸ್ ಹೈದರಾಬಾದ್ ತಂಡವು -0.577 ನೆಟ್​ ರನ್ ರೇಟ್​ನೊಂದಿಗೆ ಪಾಯಿಂಟ್ಸ್​ ಟೇಬಲ್​ನಲ್ಲಿ 9ನೇ ಸ್ಥಾನದಲ್ಲಿದೆ.10- ಡೆಲ್ಲಿ ಕ್ಯಾಪಿಟಲ್ಸ್ (4 ಅಂಕಗಳು): ಡೇವಿಡ್ ವಾರ್ನರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಆಡಿರುವ 7 ಪಂದ್ಯಗಳಲ್ಲಿ 2 ರಲ್ಲಿ ಜಯ ಸಾಧಿಸಿದೆ. ಈ ಮೂಲಕ ಡೆಲ್ಲಿ ತಂಡವು -0.898 ನೆಟ್​ ರನ್​ ರೇಟ್​ನೊಂದಿಗೆ ಪಾಯಿಂಟ್ಸ್​ ಟೇಬಲ್​ನಲ್ಲಿ ಕೊನೆಯ ಸ್ಥಾನದಲ್ಲಿದೆ.ಸೋಮವಾರದವರೆಗೆ (ಏ.29) ಒಟ್ಟು 43 ಪಂದ್ಯಗಳು ಮುಗಿದಿದ್ದು, ಈ ಪಂದ್ಯಗಳ ಬಳಿಕ ಅಪ್​ಡೇಟ್ ಆಗಿರುವ ಪಾಯಿಂಟ್ಸ್​ ಟೇಬಲ್ ಅನ್ನು ಇಲ್ಲಿ ನೀಡಲಾಗಿದೆ.

source https://tv9kannada.com/photo-gallery/cricket-photos/ipl-2023-points-table-after-rcb-vs-lsg-match-kannada-news-zp-au50-567963.html

Leave a Reply

Your email address will not be published. Required fields are marked *