IPL 2023: RCB ಗೆ ಬಿಗ್ ಶಾಕ್: ತಂಡದಿಂದ ಪ್ರಮುಖ ಆಟಗಾರ ಔಟ್..!

ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೂ ಮುನ್ನವೇ ಆರ್​ಸಿಬಿ ತಂಡಕ್ಕೆ ಆಘಾತ ಎದುರಾಗಿದೆ. ಟೂರ್ನಿ ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ಆರ್​ಸಿಬಿ ತಂಡದ ಪ್ರಮುಖ ಆಟಗಾರ ತಂಡದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.ಹೌದು, ಆರ್​ಸಿಬಿ ತಂಡದಲ್ಲಿರುವ ಇಂಗ್ಲೆಂಡ್​ನ ಯುವ ಆಲ್​ರೌಂಡರ್ ವಿಲ್ ಜಾಕ್ಸ್ ಗಾಯದ ಕಾರಣ ಐಪಿಎಲ್​ನಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ. ಇತ್ತೀಚೆಗಷ್ಟೇ ನಡೆದ ಬಾಂಗ್ಲಾದೇಶ್ ವಿರುದ್ಧದ ಸರಣಿಯ ವೇಳೆ ಜಾಕ್ಸ್ ಗಾಯಗೊಂಡಿದ್ದರು.ಬಾಂಗ್ಲಾದೇಶ್ ವಿರುದ್ಧದ 2ನೇ ಏಕದಿನ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಅವರ ಎಡತೊಡೆ ಭಾಗಕ್ಕೆ ಗಾಯವಾಗಿತ್ತು. ಈ ಗಾಯವು ಗಂಭೀರವಾಗಿರುವ ಕಾರಣ ಇದೀಗ ಐಪಿಎಲ್​ನಿಂದ ಹೊರಗುಳಿಯಲು ವಿಲ್ ಜಾಕ್ಸ್ ನಿರ್ಧರಿಸಿದ್ದಾರೆ.ಅತ್ಯುತ್ತಮ ಸ್ಪಿನ್ ಆಲ್​ರೌಂಡರ್ ಆಗಿರುವ ವಿಲ್ ಜಾಕ್ಸ್ ಈ ಬಾರಿ ಆರ್​ಸಿಬಿ ತಂಡದ ಬಲಿಷ್ಠತೆಯನ್ನು ಹೆಚ್ಚಿಸುವ ನಿರೀಕ್ಷೆಯಿತ್ತು. ಅದರಲ್ಲೂ ಸ್ಪೋಟಕ ಬ್ಯಾಟಿಂಗ್ ನಡೆಸುವ ಜಾಕ್ಸ್ ಯಾವುದೇ ಕ್ರಮಾಂಕದಲ್ಲೂ ಬ್ಯಾಟ್ ಮಾಡಬಲ್ಲ ಸಾಮರ್ಥ್ಯ ಹೊಂದಿದ್ದರು. ಹೀಗಾಗಿಯೇ ಆರ್​ಸಿಬಿ ಇಂಗ್ಲೆಂಡ್ ಆಲ್​ರೌಂಡರ್​ನನ್ನು ಬರೋಬ್ಬರಿ 3.2 ಕೋಟಿ ನೀಡಿ ಖರೀದಿಸಿತ್ತು. ಇದೀಗ ಗಾಯಗೊಂಡಿರುವುದರಿಂದ ವಿಲ್ ಜಾಕ್ಸ್​ ಐಪಿಎಲ್​ನಿಂದ ಹೊರಗುಳಿಯುವ ನಿರ್ಧಾರ ಮಾಡಿದ್ದಾರೆ.RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್.

source https://tv9kannada.com/photo-gallery/cricket-photos/ipl-2023-rcb-player-will-jacks-ruled-out-of-ipl-zp-au50-537044.html

Leave a Reply

Your email address will not be published. Required fields are marked *