Skip to content
  • Monday, March 23, 2026
  • ABOUT US
  • CONTACT US
  • Privacy Policy

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • Privacy Policy
  • Horoscope
  • Home
  • Sports
  • IPL 2023: 3 ವಿಶೇಷ ಪ್ರಶಸ್ತಿಗಳನ್ನು ಪಡೆದ RCB ಆಟಗಾರರು
Sports

IPL 2023: 3 ವಿಶೇಷ ಪ್ರಶಸ್ತಿಗಳನ್ನು ಪಡೆದ RCB ಆಟಗಾರರು

May 30, 2023
samagrasuddi

IPL 2023: ಐಪಿಎಲ್ ಸೀಸನ್ 16 ರ ಫೈನಲ್​ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರೋಚಕ ಜಯ ಸಾಧಿಸಿ ಸಿಎಸ್​ಕೆ ತಂಡವು 5ನೇ ಬಾರಿ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. ಇನ್ನು ಟೂರ್ನಿಯುದ್ಧಕ್ಕೂ ಅತ್ಯುತ್ತಮ ಪ್ರದರ್ಶನ ನೀಡಿದ ಹಲವು ಆಟಗಾರರು ಕೂಡ ವಿಶೇಷ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದರಲ್ಲಿ ಆರ್​ಸಿಬಿ ಆಟಗಾರರು ಕೂಡ ಇರುವುದು ವಿಶೇಷ.ಈ ಬಾರಿಯ ಟೂರ್ನಿಯಲ್ಲಿ 14 ಪಂದ್ಯಗಳಲ್ಲಿ ಕೇವಲ 7 ರಲ್ಲಿ ಮಾತ್ರ ಜಯ ಸಾಧಿಸಿದ್ದ ಆರ್​ಸಿಬಿ ತಂಡವು ಲೀಗ್ ಹಂತದಿಂದಲೇ ಹೊರಬಿದ್ದಿತ್ತು. ಇದಾಗ್ಯೂ ಫಾಫ್ ಡುಪ್ಲೆಸಿಸ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ ಹಾಗೂ ಮೊಹಮ್ಮದ್ ಸಿರಾಜ್ ಟೂರ್ನಿಯುದ್ಧಕ್ಕೂ ಅದ್ಭುತ ಪ್ರದರ್ಶನ ನೀಡಿದ್ದರು.ಈ ಅದ್ಭುತ ಪ್ರದರ್ಶನದ ಫಲವಾಗಿ ಇದೀಗ ಆರ್​ಸಿಬಿ ತಂಡದ ಇಬ್ಬರು ಆಟಗಾರರಿಗೆ ಒಟ್ಟು 3 ಪ್ರಶಸ್ತಿಗಳು ಒಲಿದಿವೆ. ಈ ಅವಾರ್ಡ್​ಗಳಾವುವು ಎಂಬುದರ ಮಾಹಿತಿ ಈ ಕೆಳಗಿನಂತಿದೆ...ಅತೀ ಹೆಚ್ಚು ಸಿಕ್ಸ್: ಈ ಬಾರಿಯ ಐಪಿಎಲ್​ನಲ್ಲಿ ಅತ್ಯಧಿಕ ಸಿಕ್ಸ್​ ಬಾರಿಸಿದ ಆಟಗಾರನಿಗೆ ನೀಡಲಾಗುವ ಪ್ರಶಸ್ತಿಯು ಆರ್​ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಪಾಲಾಗಿದೆ. ಡುಪ್ಲೆಸಿಸ್ 14 ಪಂದ್ಯಗಳಲ್ಲಿ ಒಟ್ಟು 36 ಸಿಕ್ಸ್​ ಸಿಡಿಸುವ ಮೂಲಕ ಈ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.ಸ್ಟ್ರೈಕರ್​ ಆಫ್ ದಿ ಸೀಸನ್: ಈ ಬಾರಿಯ ಐಪಿಎಲ್​ನಲ್ಲಿ ಸೂಪರ್ ಸ್ಟ್ರೈಕರ್ ಆಗಿ ಹೊರಹೊಮ್ಮಿದ್ದು ಆರ್​ಸಿಬಿ ತಂಡದ ಗ್ಲೆನ್ ಮ್ಯಾಕ್ಸ್​ವೆಲ್ ಎಂಬುದು ವಿಶೇಷ. ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದ ಮ್ಯಾಕ್ಸ್​ವೆಲ್ ಈ ಬಾರಿ 14 ಇನಿಂಗ್ಸ್​ಗಳಲ್ಲಿ 400 ರನ್ ಬಾರಿಸಿದ್ದರು. ಅದು ಕೂಡ 183.48 ರ ಸ್ಟ್ರೈಕ್ ರೇಟ್​ನಲ್ಲಿ ಎಂಬುದು ವಿಶೇಷ. ಈ ಮೂಲಕ ಸೂಪರ್ ಸ್ಟ್ರೈಕರ್ ಅವಾರ್ಡ್​ ಅನ್ನು ತಮ್ಮದಾಗಿಸಿಕೊಂಡಿದ್ದಾರೆ.ಅತೀ ದೂರ ಸಿಕ್ಸ್: ಈ ಬಾರಿಯ ಐಪಿಎಲ್​ನಲ್ಲಿ ಅತೀ ದೂರ ಸಿಕ್ಸ್ ಸಿಡಿಸಿದ ಆಟಗಾರನಿಗೆ ನೀಡಲಾಗುವ ಪ್ರಶಸ್ತಿ ಕೂಡ ಫಾಫ್ ಡುಪ್ಲೆಸಿಸ್ ಪಾಲಾಗಿದೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 115 ಮೀಟರ್ ಸಿಕ್ಸ್ ಸಿಡಿಸಿದ್ದ ಡುಪ್ಲೆಸಿಸ್ ಲಾಂಗೆಸ್ಟ್ ಸಿಕ್ಸ್ ಆಫ್ ದಿ ಸೀಸನ್ ಅವಾರ್ಡ್ ಪಡೆದಿದ್ದಾರೆ.

source https://tv9kannada.com/photo-gallery/cricket-photos/ipl-2023-awards-for-rcb-players-kannada-news-zp-590484.html

Tags: Cricket, IPL, IPL 2023, RCB, samagrasuddi, T-20, TATA IPL 2023, ಸಮಗ್ರ ಸುದ್ದಿ

Post navigation

WFI ಮುಖ್ಯಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ; ಕುಸ್ತಿಪಟುಗಳ ಪ್ರತಿಭಟನೆಯ ಟೈಮ್​​ಲೈನ್
Wrestlers Protest: ಇಂಡಿಯಾ ಗೇಟ್‌ನಲ್ಲಿ ಕುಸ್ತಿಪಟುಗಳ ಪ್ರತಿಭಟನೆಗೆ ಅವಕಾಶವಿಲ್ಲ: ದೆಹಲಿ ಪೊಲೀಸ್

Leave a Reply Cancel reply

Your email address will not be published. Required fields are marked *

CITIES

Cities

ಕರ್ನಾಟಕ ಹವಾಮಾನ ಎಚ್ಚರಿಕೆ Weather Alert Karnataka Today.

March 22, 2026
samagrasuddi

ಇಂದಿನ ಹವಾಮಾನ ಸ್ಥಿತಿಕರ್ನಾಟಕ ರಾಜ್ಯದಲ್ಲಿ ಇಂದಿನ ಹವಾಮಾನವು ಬಿಸಿಲು ಹಾಗೂ ಮೋಡ ಕವಿದ ವಾತಾವರಣದ ಮಿಶ್ರಣವಾಗಿರಲಿದೆ. ಕೆಲವು ಜಿಲ್ಲೆಗಳಲ್ಲಿ ಮಧ್ಯಾಹ್ನದಿಂದ ಸಂಜೆವರೆಗೆ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.ತಾಪಮಾನ: ಸುಮಾರು 34°C ರಿಂದ 37°Cಬೆಳಗ್ಗೆ: ಬಿಸಿಲು ಹೆಚ್ಚಾಗಿರುತ್ತದೆಮಧ್ಯಾಹ್ನ/ಸಂಜೆ: ಮೋಡ ಕವಿದು ಮಳೆಯ ಸಾಧ್ಯತೆಮಳೆ…

Cities

ತುರುವೇಕೆರೆಯ ವಿದ್ಯಾರಣ್ಯ”D Ed College”ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಭರ್ಜರಿ ಯಶಸ್ಸು.

March 18, 2026
samagrasuddi
Cities

Karnataka Weather Today: ರಾಜ್ಯದಲ್ಲಿಂದು ಮಳೆಯ ಮುನ್ಸೂಚನೆ, ಹೇಗಿರಲಿದೆ ಹವಾಮಾನ?

March 18, 2026
samagrasuddi
Cities

LPG Helpline Karnataka: ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಆಹಾರ ಇಲಾಖೆಯ ಟೋಲ್ ಫ್ರೀ ನಂಬರ್.

March 16, 2026
samagrasuddi
Cities

ಯುಗಾದಿ ಮತ್ತು ರಂಜಾನ್ ಹಬ್ಬದ ಸಂಭ್ರಮ: KSRTCಯಿಂದ 2,000 ವಿಶೇಷ ಬಸ್‌ಗಳ ವ್ಯವಸ್ಥೆ, ಮುಂಗಡ ಟಿಕೆಟ್ ಮೇಲೆ ಭರ್ಜರಿ ರಿಯಾಯಿತಿ!

March 15, 2026
samagrasuddi

You may Missed

Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80

March 23, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 7 | ದಿನ 79

March 22, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 6 | ದಿನ 78

March 21, 2026
samagrasuddi
Home Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 4.5 | ದಿನ 77

March 20, 2026
samagrasuddi
  • ಕರ್ನಾಟಕ ಆಯುಷ್ ಇಲಾಖೆ ನೇಮಕಾತಿ 2026:ಬೆಂಗಳೂರಿನಲ್ಲಿ ಖಾತೆ ಸಹಾಯಕ ಹುದ್ದೆಗೆ ನೇರ ಸಂದರ್ಶನ | AYUSH Karnataka Recruitment
  • ಇತಿಹಾಸದಲ್ಲೇ ಮೊದಲ ಬಾರಿಗೆ 94ರ ಗಡಿ ದಾಟಿದ ಡಾಲರ್: ರೂಪಾಯಿ ಮೌಲ್ಯ ತೀವ್ರ ಕುಸಿತಕ್ಕೆ ಕಾರಣಗಳೇನು?
  • ಹವಾಮಾನ ಬದಲಾವಣೆಯಿಂದ ಕಾಡುತ್ತಿರುವ ಒಣ ಕೆಮ್ಮು: ಕಾರಣ, ಲಕ್ಷಣ ಮತ್ತು ಪರಿಹಾರ.
  • ​Day Special, ಮಾರ್ಚ್ 23: ದೇಶಪ್ರೇಮದ ಕಿಚ್ಚು ಮತ್ತು ಜಾಗತಿಕ ಬದಲಾವಣೆಯ ದಿನ – ಒಂದು ಸಮಗ್ರ ನೋಟ
  • Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80
Copyright © 2026
CONTACT US
Theme by: Theme Horse
Proudly Powered by: WordPress