IPL 2023 RCB vs GT: ಮಳೆ ಬಂದರೆ ಫಲಿತಾಂಶ ನಿರ್ಧರಿಸುವುದು ಹೇಗೆ? ಇಲ್ಲಿದೆ ನಿಯಮಗಳು

IPL 2023 RCB vs GT: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಬೇಕಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ನಡುವಣ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ. ಭಾನುವಾರ ಸಂಜೆ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದ್ದು, ಇದೀಗ ತುಂತುರು ಮಳೆ ಮುಂದುವರೆದಿದೆ. ಇದರ ನಡುವೆ ಆರ್​ಸಿಬಿ-ಗುಜರಾತ್ ಟೈಟಾನ್ಸ್ ನಡುವಣ ಪಂದ್ಯ ನಡೆಯಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.ಏಕೆಂದರೆ ಈ ಪಂದ್ಯವು ಆರ್​ಸಿಬಿ ಪಾಲಿಗೆ ನಿರ್ಣಾಯಕ. ಗುಜರಾತ್ ಟೈಟಾನ್ಸ್ ವಿರುದ್ಧ ಗೆದ್ದರೆ ಮಾತ್ರ ಆರ್​ಸಿಬಿ ತಂಡಕ್ಕೆ ಪ್ಲೇಆಫ್​ ಪ್ರವೇಶಿಸಲು ಅವಕಾಶ ಇರಲಿದೆ. ಒಂದು ವೇಳೆ ಪಂದ್ಯ ರದ್ದಾರೆ ಮುಂಬೈ ಇಂಡಿಯನ್ಸ್ ಪ್ಲೇಆಫ್​ಗೆ ಎಂಟ್ರಿ ಕೊಡಲಿದೆ.ಒಂದು ವೇಳೆ ಮಳೆ ನಿಂತರೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ನಡೆಯುವುದು ಖಚಿತ. ಹಾಗಿದ್ರೆ ಮಳೆ ನಿಂತ ಬಳಿಕ ಪಂದ್ಯ ಹೇಗೆ ನಡೆಯಲಿದೆ ಎಂದು ತಿಳಿಯೋಣ...ಬೆಂಗಳೂರಿನಲ್ಲಿ ಇಂದು ನಡೆಯಬೇಕಿರುವ ಪಂದ್ಯ ಶುರುವಾಗಬೇಕಿರುವ ಸಮಯ 7:30 PM. ಇದಕ್ಕನುಗುಣವಾಗಿ ಪಂದ್ಯದ ಹೆಚ್ಚುವರಿ ಕಟ್ ಆಫ್ ಸಮಯ 11:50 PM. ಅದುವರೆಗೆ ಪಂದ್ಯ ಆಯೋಜಿಸಲು ಸಾಧ್ಯನಾ ಎಂಬುದನ್ನು ಎದುರು ನೋಡಲಿದ್ದಾರೆ. 
ಇದರ ನಡುವೆ ಪಂದ್ಯ ನಡೆಸಲು ಅವಕಾಶವಿದ್ದರೆ ಹೆಚ್ಚುವರಿ ಸಮಯವನ್ನು ಬಳಸಲಿದ್ದಾರೆ. ಅಂದರೆ ವಿಳಂಬವಾದ ಆರಂಭ ಅಥವಾ ಅಡಚಣೆಯ ಸಂದರ್ಭದಲ್ಲಿ, ಅರವತ್ತು ನಿಮಿಷಗಳ ಹೆಚ್ಚುವರಿ ಸಮಯವನ್ನು ತೆಗೆದುಕೊಳ್ಳಲಾಗುತ್ತದೆ. ಅದರಂತೆ ಪೂರ್ಣ 20 ಓವರ್ ಆಡಿಸಲು ಅವಕಾಶ ಇದೆಯಾ ಎಂದು ನೋಡಲಾಗುತ್ತದೆ.ಆದರೆ ನಿಗದಿತ ಸಮಯದೊಳಗೆ 20 ಓವರ್​ಗಳ ಪಂದ್ಯವನ್ನು ಆಯೋಜಿಸಲು ಸಾಧ್ಯವಿಲ್ಲ ಎಂಬುದು ಕಂಡು ಬಂದರೆ ಓವರ್​ಗಳ ಕಡಿತ ಮಾಡಲಾಗುತ್ತದೆ. ಅಂದರೆ ಪ್ರತಿ ಎಂಟು ನಿಮಿಷಗಳ ನಷ್ಟಕ್ಕೆ ಒಂದು ಓವರ್ ಅನ್ನು ಕಡಿತಗೊಳಿಸಲಾಗುತ್ತದೆ. ಇಲ್ಲಿ ಟೈಮ್ ಔಟ್ ಸಮಯ ಹಾಗೂ ಇನ್ನಿಂಗ್ಸ್ ಬ್ರೇಕ್​ಗಳನ್ನು ಸಹ ತೆಗೆದು ಹಾಕಲಾಗುತ್ತದೆ. ಆ ಮೂಲಕ ಓವರ್​ ಕಡಿತದೊಂದಿಗೆ ಪಂದ್ಯ ಆಯೋಜಿಸಲಾಗುತ್ತದೆ.ಇನ್ನು ಪಂದ್ಯ ಶುರುವಾದ ಬಳಿಕ ಮಳೆ ಬಂದರೆ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ ಓವರ್ ಕಡಿತದೊಂದಿಗೆ ಟಾರ್ಗೆಟ್ ನೀಡಲಾಗುತ್ತದೆ. ಈ ಮೂಲಕ ಪಂದ್ಯವನ್ನು ಪೂರ್ಣಗೊಳಿಸಲಾಗುತ್ತದೆ.ಆದರೆ ಇಲ್ಲಿ ಗಮನಿಸಬೇಕಾದ ಪ್ರಮುಖ ಅಂಶವೆಂದರೆ ಫಲಿತಾಂಶ ನಿರ್ಧರಿಸಲು ಕನಿಷ್ಠ 5 ಓವರ್​ಗಳ ಪಂದ್ಯಗಳನ್ನು ಆಡಲೇಬೇಕು. ಇದಕ್ಕಿಂತ ಕಡಿಮೆ ಓವರ್​ಗಳ ಪಂದ್ಯಗಳನ್ನು ಆಯೋಜಿಸಲಾಗುವುದಿಲ್ಲ. ಅದರಂತೆ ಎರಡೂ ತಂಡಗಳು ಕನಿಷ್ಠ 5 ಓವರ್​ಗಳನ್ನು ಬೌಲಿಂಗ್ ಮಾಡಿದ್ರೆ ಮಾತ್ರ ಫಲಿತಾಂಶವನ್ನು ನಿರ್ಧರಿಸಲಾಗುತ್ತದೆ. ಒಂದು ವೇಳೆ ಮೊದಲ ಇನಿಂಗ್ಸ್ ಆಡಿದ ತಂಡ 10 ಓವರ್ ಆಡಿದ್ರೆ, 2ನೇ ಇನಿಂಗ್ಸ್​ನಲ್ಲಿ 5 ಓವರ್​ಗಳನ್ನು ಪೂರ್ಣಗೊಳಿಸಬೇಕು. ಅಂದರೆ ಮಾತ್ರ ಇಲ್ಲಿ ಡಕ್​ವರ್ತ್ ಲೂಯಿಸ್ ನಿಯಮವನ್ನು ಅನ್ವಯಿಸಲಾಗುತ್ತದೆ. ಹೀಗಾಗಿಯೇ ಆರ್​ಸಿಬಿ ತಂಡದ ಗೆಲುವು ನಿರ್ಧರಿಸಲು ಕನಿಷ್ಠ 5 ಓವರ್​ಗಳ ಪಂದ್ಯವಾದರೂ ನಡೆಯಲೇಬೇಕು.ಅಂದಹಾಗೆ ಆರ್​ಸಿಬಿ-ಗುಜರಾತ್ ಟೈಟಾನ್ಸ್ ನಡುವಣ ಪಂದ್ಯದ 5 ಓವರ್​ಗಳ ಪಂದ್ಯದ ಆಯೋಜನೆಗೆ ಕಟ್ ಆಫ್ ಟೈಮ್ 10:56 PM. ಈ ವೇಳೆಗೆ ಪಂದ್ಯ ಆಯೋಜಿಸುವಂತಹ ಪರಿಸ್ಥಿತಿ ಇರದಿದ್ದರೆ ಮ್ಯಾಚ್​ ಅನ್ನು ರದ್ದುಗೊಳಿಸುವ ಬಗ್ಗೆ ಮ್ಯಾಚ್ ರೆಫರಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ.ಆದರೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅತ್ಯಾಧುನಿಕ ಸಬ್ ಏರ್ ಸಿಸ್ಟಂ ಹೊಂದಿದ್ದು, ಇದು ಶೀಘ್ರವಾಗಿ ಮೈದಾನದಲ್ಲಿನ ನೀರನ್ನು ಹೀರಿಕೊಳ್ಳುತ್ತದೆ. ಹೀಗಾಗಿ ಎಷ್ಟೇ ಮಳೆಯಾದರೂ ಕೆಲವೇ ನಿಮಿಷಗಳಲ್ಲಿ ಮೈದಾನವನ್ನು ಸಜ್ಜುಗೊಳಿಸಬಹುದು. ಹೀಗಾಗಿ ಓವರ್ ಕಡಿತದೊಂದಿಗೆ ಪಂದ್ಯವನ್ನು ನಡೆಯುವ ಸಾಧ್ಯತೆ ಹೆಚ್ಚು.

source https://tv9kannada.com/photo-gallery/cricket-photos/ipl-2023-rain-rules-rcb-vs-gt-match-rain-kannada-news-zp-584049.html

Leave a Reply

Your email address will not be published. Required fields are marked *