
IPL 2023 Schedule: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಮುಂದಿನ ಆವೃತ್ತಿಯ ವೇಳಾಪಟ್ಟಿ ಬಿಡುಗಡೆಯಾಗಿದೆ. ಈ ಲೀಗ್ ಮಾರ್ಚ್ 31 ರಿಂದ ಆರಂಭವಾಗಲಿದ್ದು, ಮೊದಲ ಪಂದ್ಯವು ಅಹಮದಾಬಾದ್‌ನಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ (Gujarat Titans and Chennai Super Kings) ನಡುವೆ ನಡೆಯಲಿದೆ. ಎಂದಿನಂತೆ 10 ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದ್ದು, ಐದು ಬಾರಿ ವಿಜೇತ ಮುಂಬೈ ಇಂಡಿಯನ್ಸ್, ಪ್ರಸ್ತುತ ರನ್ನರ್ ಅಪ್ ರಾಜಸ್ಥಾನ ರಾಯಲ್ಸ್, ಕೋಲ್ಕತ್ತಾ ನೈಟ್ ರೈಡರ್ಸ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಲಕ್ನೋ ಸೂಪರ್‌ಜೈಂಟ್ಸ್ ತಂಡಗಳು ಎ ಗುಂಪಿನಲ್ಲಿ ಸ್ಥಾನ ಪಡೆದಿವೆ. ಮತ್ತೊಂದೆಡೆ, ಚೆನ್ನೈ ಸೂಪರ್ ಕಿಂಗ್ಸ್, ಪಂಜಾಬ್ ಕಿಂಗ್ಸ್, ಸನ್ ರೈಸರ್ಸ್ ಹೈದರಾಬಾದ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಬಿ ಗುಂಪಿನಲ್ಲಿ ಸ್ಥಾನ ಪಡೆದಿವೆ.
ಐಪಿಎಲ್-2023ರ ಲೀಗ್ ಹಂತದಲ್ಲಿ ಒಟ್ಟು 70 ಪಂದ್ಯಗಳು ನಡೆಯಲಿವೆ. ಇದಾದ ಬಳಿಕ ಮೂರು ಪ್ಲೇಆಫ್ ಪಂದ್ಯಗಳು ನಡೆಯಲಿದ್ದು, ನಂತರ ಫೈನಲ್ ಪಂದ್ಯ ನಡೆಯಲಿದೆ. ಲೀಗ್ ಸುತ್ತಿನಲ್ಲಿ ಒಟ್ಟು 18 ಡಬಲ್ ಹೆಡರ್ ಪಂದ್ಯಗಳು ಇರುತ್ತವೆ. ಮೇ 28 ರಂದು ಫೈನಲ್ ಪಂದ್ಯ ನಡೆಯಲಿದೆ. ಈಗ ಬಿಡುಗಡೆಯಾಗಿರುವ ವೇಳಾಪಟ್ಟಿ ಪ್ರಕಾರ ಪ್ರತಿ ತಂಡ ಯಾವ ದಿನ ಯಾವ ತಂಡವನ್ನು ಎದುರಿಸಲಿದೆ ಎಂಬುದರ ಪೂರ್ಣ ವಿವರ ಇಲ್ಲಿದೆ.
IPL 2023 Schedule: 16ನೇ ಆವೃತ್ತಿಯ ಐಪಿಎಲ್ ವೇಳಾಪಟ್ಟಿ ಪ್ರಕಟ; ಮೊದಲ ಪಂದ್ಯ ಯಾವಾಗ ಗೊತ್ತಾ?
ರಾಯಲ್ ಚಾಲೆಂಜರ್ಸ್ ಬೆಂಗಳೂರು
ಫಾಫ್ ಡು ಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಮೊದಲ ಪಂದ್ಯವನ್ನು ಮುಂಬೈ ಇಂಡಿಯನ್ಸ್ ವಿರುದ್ಧ ಏಪ್ರಿಲ್ 2 ರಂದು ಆಡಲಿದೆ.
RCB matches in IPL 2023. pic.twitter.com/FjN1fIUfWa
— Mufaddal Vohra (@mufaddal_vohra) February 17, 2023
ಸನ್‌ರೈಸರ್ಸ್ ಹೈದರಾಬಾದ್
ಸನ್‌ರೈಸರ್ಸ್ ಹೈದರಾಬಾದ್ ತಂಡವು ತಮ್ಮ ಮೊದಲ ಪಂದ್ಯವನ್ನು ರಾಜಸ್ಥಾನ್ ರಾಯಲ್ಸ್ ವಿರುದ್ಧ ತನ್ನ ತವರು ನೆಲದಲ್ಲಿ ಏಪ್ರಿಲ್ 2ರಂದು ಆಡಲಿದೆ.
SRH schedule for IPL 2023. pic.twitter.com/5pqyucSM6g
— Johns. (@CricCrazyJohns) February 17, 2023
ಮುಂಬೈ ಇಂಡಿಯನ್ಸ್
ಮುಂಬೈ ತನ್ನ ಮೊದಲ ಪಂದ್ಯವನ್ನು ಆರ್‌ಸಿಬಿ ವಿರುದ್ಧ ಏಪ್ರಿಲ್ 2 ರಂದು ಆಡಬೇಕಿದೆ.
Schedule for Mumbai Indians in IPL 2023. pic.twitter.com/BJroJ3XtUd
— Johns. (@CricCrazyJohns) February 17, 2023
ಲಕ್ನೋ ಸೂಪರ್‌ಜೈಂಟ್ಸ್
ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ತವರಿನಲ್ಲಿ ತನ್ನ ಮೊದಲ ಪಂದ್ಯವನ್ನು ಆಡಲಿದೆ.
Our #IPL2023 Playlist, curated for all our DC fans
Which game are you looking forward to the most?
#YehHaiNayiDilli #IPL2023Schedule pic.twitter.com/iK1Sa5uMC3
— Delhi Capitals (@DelhiCapitals) February 17, 2023
ಗುಜರಾತ್ ಟೈಟಾನ್ಸ್
ಪ್ರಸ್ತುತ ವಿಜೇತ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್, ನಾಲ್ಕು ಬಾರಿ ವಿಜೇತ ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ತನ್ನ ಮೊದಲ ಪಂದ್ಯವನ್ನು ತನ್ನ ತವರಿನಲ್ಲಿ ಆಡಲಿದೆ.
Mark your calendars, #TitansFAM! We’re coming to defend the
#TATAIPL2023
Which fixture are you looking forward to the most? #AavaDe
pic.twitter.com/8rG760nRHW
— Gujarat Titans (@gujarat_titans) February 17, 2023
ಪಂಜಾಬ್ ಕಿಂಗ್ಸ್
ನೂತನ ನಾಯಕ ಶಿಖರ್ ಧವನ್ ನಾಯಕತ್ವದ ಪಂಜಾಬ್ ಕಿಂಗ್ಸ್ ಕೂಡ ತಮ್ಮ ಮೊದಲ ಪಂದ್ಯವನ್ನು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಏಪ್ರಿಲ್ 1 ರಂದು ತಮ್ಮ ತವರಿನಲ್ಲಿ ಆಡಲಿದೆ.
𝑻𝒆𝒍𝒍 𝒕𝒉𝒆 𝒘𝒐𝒓𝒍𝒅 𝒘𝒆 𝒂𝒓𝒆 𝒄𝒐𝒎𝒊𝒏𝒈 𝒉𝒐𝒎𝒆
#SherSquad, we are back in Mohali where we belong!
We’re also happy to announce that we’ll be playing our last 2⃣ games in Dharamsala. We know we have your support everywhere!#PunjabKings #SaddaPunjab #IPL pic.twitter.com/P6olnS2PF3
— Punjab Kings (@PunjabKingsIPL) February 17, 2023
ದೆಹಲಿ ಕ್ಯಾಪಿಟಲ್ಸ್
ದೆಹಲಿ ತಂಡವು ತನ್ನ ಮೊದಲ ಪಂದ್ಯವನ್ನು ಲಕ್ನೋ ಸೂಪರ್‌ಜೈಂಟ್ಸ್ ವಿರುದ್ಧ ಏಪ್ರಿಲ್ 1 ರಂದು ಆಡಲಿದೆ. ಈ ಪಂದ್ಯ ಲಕ್ನೋದಲ್ಲಿ ನಡೆಯಲಿದೆ.
Our #IPL2023 Playlist, curated for all our DC fans
Which game are you looking forward to the most?
#YehHaiNayiDilli #IPL2023Schedule pic.twitter.com/iK1Sa5uMC3
— Delhi Capitals (@DelhiCapitals) February 17, 2023
ರಾಜಸ್ಥಾನ್ ರಾಯಲ್ಸ್
ಕಳೆದ ಸೀಸನ್ನಲ್ಲಿ ಫೈನಲ್‌ಗೆ ತಲುಪಿದ್ದ ರಾಜಸ್ಥಾನ್ ರಾಯಲ್ಸ್ ತಂಡವು ಏಪ್ರಿಲ್ 2 ರಂದು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಬೇಕಾಗಿದೆ.
Home again, after 4 long years!
#HallaBol pic.twitter.com/cRPX1hiBNh
— Rajasthan Royals (@rajasthanroyals) February 17, 2023
ಕೋಲ್ಕತ್ತಾ ನೈಟ್ ರೈಡರ್ಸ್
ಶ್ರೇಯಸ್ ಅಯ್ಯರ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಏಪ್ರಿಲ್ 1 ರಂದು ಪಂಜಾಬ್ ಕಿಂಗ್ಸ್ ವಿರುದ್ಧ ಆಡಲಿದೆ.
Schedule for Kolkata in IPL 2023. pic.twitter.com/1zz5nR4gaE
— Johns. (@CricCrazyJohns) February 17, 2023
ಒಟ್ಟು 70 ಲೀಗ್ ಪಂದ್ಯಗಳು
ಈ ಬಾರಿಯ ಐಪಿಎಲ್, ಅಹಮದಾಬಾದ್, ಮೊಹಾಲಿ, ಲಕ್ನೋ, ಹೈದರಾಬಾದ್, ಬೆಂಗಳೂರು, ಚೆನ್ನೈ, ದೆಹಲಿ, ಕೋಲ್ಕತ್ತಾ, ಜೈಪುರ, ಮುಂಬೈ, ಗುವಾಹಟಿ ಮತ್ತು ಧರ್ಮಶಾಲಾ ಸೇರಿದಂತೆ ಒಟ್ಟು 12 ನಗರಗಳಲ್ಲಿ ನಡೆಯಲಿದೆ. ಟೂರ್ನಿಯ ಮೊದಲ ಹಾಗೂ ಅಂತಿಮ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಮೇ 21ರಂದು ಕೊನೆಯ ಲೀಗ್ ಪಂದ್ಯ ನಡೆಯಲಿದ್ದು, 18 ಡಬಲ್ ಹೆಡರ್ ಸೇರಿದಂತೆ ಒಟ್ಟು 70 ಲೀಗ್ ಪಂದ್ಯಗಳು ನಡೆಯಲಿವೆ. ಪ್ರತಿ ತಂಡ ತಲಾ 7 ಪಂದ್ಯಗಳನ್ನು ತವರು ನೆಲದಲ್ಲಿ ಮತ್ತು 7 ಪಂದ್ಯಗಳನ್ನು ಬೇರೆ ನೆಲದಲ್ಲಿ ಆಡಲಿದೆ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Views: 0



Mark your calendars, 

