IPL 2023: RCB ಬೌಲರ್​ಗಳ ಬೆಂಡೆತ್ತಿ ಭರ್ಜರಿ ದಾಖಲೆ ನಿರ್ಮಿಸಿದ ಶಾರ್ದೂಲ್ ಠಾಕೂರ್

IPL 2023: ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ಶಾರ್ದೂಲ್ ಠಾಕೂರ್ ಹೊಸ ದಾಖಲೆ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ತಂಡವು 89 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.ಈ ಹಂತದಲ್ಲಿ 7ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶಾರ್ದೂಲ್ ಠಾಕೂರ್ ಆಕ್ರಮಣಕಾರಿ ಬ್ಯಾಟಿಂಗ್ ಮೂಲಕ ಇಡೀ ಪಂದ್ಯದ ಚಿತ್ರಣವನ್ನೇ ಬದಲಿಸಿದರು. 12ನೇ ಓವರ್​ವರೆಗೆ ಮೇಲುಗೈ ಸಾಧಿಸಿದ್ದ ಆರ್​ಸಿಬಿ ಬೌಲರ್​ಗಳು ಶಾರ್ದೂಲ್ ಆಗಮನದೊಂದಿಗೆ ಮಂಕಾದರು.ಅತ್ತ ಹೊಡಿಬಡಿ ಆಟದೊಂದಿಗೆ ಮೈದಾನದ ಮೂಲೆ ಮೂಲೆಗೂ ಸಿಕ್ಸ್​-ಫೋರ್​ಗಳ ಸುರಿಮಳೆಗೈದ ಶಾರ್ದೂಲ್ ಠಾಕೂರ್ ಕೇವಲ 20 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಲ್ಲದೆ 29 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ನೊಂದಿಗೆ 68 ರನ್​ಗಳಿಸಿ ಸಿರಾಜ್​ಗೆ ವಿಕೆಟ್ ಒಪ್ಪಿಸಿದರು.ವಿಶೇಷ ಎಂದರೆ ಈ 68 ರನ್​ಗಳೊಂದಿಗೆ ಐಪಿಎಲ್​ ಇತಿಹಾಸದಲ್ಲೇ ಆರ್​ಸಿಬಿ ವಿರುದ್ಧ 7ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಅತ್ಯಧಿಕ ರನ್​ ಕಲೆಹಾಕಿದ ದಾಖಲೆ ಶಾರ್ದೂಲ್ ಠಾಕೂರ್ ಪಾಲಾಗಿದೆ. ಅಲ್ಲದೆ 6 ಕ್ಕಿಂತ ಕೆಳ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ಆರ್​ಸಿಬಿ ವಿರುದ್ಧ ಅತೀ ಹೆಚ್ಚು ರನ್ ಬಾರಿಸಿದ ವಿಶೇಷ ದಾಖಲೆಯನ್ನು ಕೂಡ ನಿರ್ಮಿಸಿದ್ದಾರೆ.ಇಲ್ಲದೆ ರಿಂಕು ಸಿಂಗ್ ಜೊತೆಗೂಡಿ 103 ರನ್​ಗಳ ಜೊತೆಯಾಟವಾಡುವ ಮೂಲಕ ಆರ್​ಸಿಬಿ ವಿರುದ್ಧ 6 ವಿಕೆಟ್​ಗೆ ಅತ್ಯಧಿಕ ರನ್​ಗಳಿಸಿ 2ನೇ ಜೋಡಿ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ 2012 ರಲ್ಲಿ ಅಜೇಯ 122 ರನ್​ ಬಾರಿಸಿದ ಅಂಬಾಟಿ ರಾಯುಡು-ಕೀರನ್ ಪೊಲಾರ್ಡ್ ಅಗ್ರಸ್ಥಾನದಲ್ಲಿದ್ದಾರೆ.ಇದೀಗ ಶಾರ್ದೂಲ್ ಠಾಕೂರ್ ಹಾಗೂ ರಿಂಕು ಸಿಂಗ್ 103 ರನ್​ಗಳ ಭರ್ಜರಿ ಜೊತೆಯಾಟದೊಂದಿಗೆ ಈ ವಿಶೇಷ ದಾಖಲೆ ಪಟ್ಟಿಯಲ್ಲಿ 2ನೇ ಸ್ಥಾನ ಅಲಂಕರಿಸಿದ್ದಾರೆ. ಒಟ್ಟಿನಲ್ಲಿ ಆರ್​ಸಿಬಿ ವಿರುದ್ಧ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಶಾರ್ದೂಲ್ ಠಾಕೂರ್ 2 ದಾಖಲೆಗಳನ್ನು ತಮ್ಮದಾಗಿಸಿಕೊಂಡಿರುವುದು ವಿಶೇಷ.

source https://tv9kannada.com/photo-gallery/cricket-photos/ipl-2023-shardul-thakur-creates-new-record-vs-rcb-kannada-news-zp-au50-550712.html

Views: 0

Leave a Reply

Your email address will not be published. Required fields are marked *