Skip to content
  • Thursday, March 26, 2026
  • ABOUT US
  • CONTACT US
  • Privacy Policy

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • Privacy Policy
  • Horoscope
  • Home
  • Sports
  • IPL 2023: SRH ವಿರುದ್ಧ RCB ತಂಡವೇ ಬಲಿಷ್ಠ…ಆದರೆ
Sports

IPL 2023: SRH ವಿರುದ್ಧ RCB ತಂಡವೇ ಬಲಿಷ್ಠ…ಆದರೆ

May 17, 2023
samagrasuddi

IPL 2023 RCB vs SRH: ಐಪಿಎಲ್​ನ 65ನೇ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಎಸ್​ಆರ್​ಹೆಚ್ ತಂಡಗಳು ಮುಖಾಮುಖಿಯಾಗಲಿದೆ. ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಪ್ಲೇಆಫ್ ಕನಸನ್ನು ಜೀವಂತವಿರಿಸಿಕೊಳ್ಳುವ ಇರಾದೆಯಲ್ಲಿದೆ ಆರ್​ಸಿಬಿ.
ಆದರೆ ಅದು ಅಂದುಕೊಂಡಷ್ಟು ಸುಲಭವಲ್ಲ ಎಂಬುದಕ್ಕೆ ಈ ಅಂಕಿ ಅಂಶಗಳೇ ಸಾಕ್ಷಿ. ಏಕೆಂದರೆ ಸನ್​ರೈಸರ್ಸ್ ಹೈದರಾಬಾದ್ ತಂಡವು ಇತರೆ ತಂಡಗಳ ವಿರುದ್ಧ ಮುಗ್ಗರಿಸಿದರೂ ಆರ್​ಸಿಬಿ ವಿರುದ್ಧ ಅತ್ಯುತ್ತಮ ಪ್ರದರ್ಶನ ನೀಡುತ್ತಾ ಬಂದಿದೆ. ಉಭಯ ತಂಡಗಳ ಮುಖಾಮುಖಿಯ ಅಂಶಗಳು ಇದನ್ನೇ ಪುಷ್ಠೀಕರಿಸುತ್ತದೆ.ಅಂದರೆ ಆರ್​ಸಿಬಿ-ಎಸ್​ಆರ್​ಹೆಚ್ ಇದುವರೆಗೆ 22 ಪಂದ್ಯಗಳಲ್ಲಿ ಮುಖಾಮುಖಿಯಾಗಿದೆ. ಈ ವೇಳೆ ಅತ್ಯಧಿಕ ಬಾರಿ ಗೆದ್ದಿರುವುದು ಸನ್​ರೈಸರ್ಸ್​ ಹೈದರಾಬಾದ್. ಎಸ್​ಆರ್​ಹೆಚ್ 12 ಬಾರಿ ಜಯ ಸಾಧಿಸಿದರೆ, ಆರ್​ಸಿಬಿ 9 ಬಾರಿ ಗೆಲುವು ದಾಖಲಿಸಿದೆ. ಇನ್ನು ಒಂದು ಪಂದ್ಯವು ರದ್ದಾಗಿತ್ತು.
ಇನ್ನು ಕಳೆದ ಮೂರು ಸೀಸನ್​ ಐಪಿಎಲ್​ನಲ್ಲೂ ಉಭಯ ತಂಡಗಳಿಂದಲೂ ಭರ್ಜರಿ ಪೈಪೋಟಿ ಎದುರಾಗಿತ್ತು. 2020 ರಲ್ಲಿ RCB vs SRH ಮೂರು ಬಾರಿ ಮುಖಾಮುಖಿಯಾಗಿತ್ತು. ಈ ವೇಳೆ ಎರಡಲ್ಲಿ ಎಸ್​ಆರ್​ಹೆಚ್ ಗೆಲುವು ದಾಖಲಿಸಿತ್ತು. ಇನ್ನು ಐಪಿಎಲ್​ 2021 ರಲ್ಲಿ 2 ಪಂದ್ಯಗಳಲ್ಲಿ ಉಭಯ ತಂಡಗಳು ಒಂದೊಂದು ಜಯ ಸಾಧಿಸಿತ್ತು. ಹಾಗೆಯೇ 2022 ರಲ್ಲಿ ಮೊದಲ ಪಂದ್ಯ ಎಸ್​ಆರ್​ಹೆಚ್ ಗೆದ್ದರೆ, 2ನೇ ಪಂದ್ಯದಲ್ಲಿ ಆರ್​ಸಿಬಿ ಜಯ ಸಾಧಿಸಿತ್ತು.ಅಂದರೆ ಇಲ್ಲಿ ಮೇಲ್ನೋಟಕ್ಕೆ ಆರ್​ಸಿಬಿ ತಂಡವು ಬಲಿಷ್ಠವಾಗಿ ಕಾಣಿಸಿಕೊಂಡರೂ, ಪ್ರತಿ ಸೀಸನ್​ನಲ್ಲೂ ಎಸ್​ಆರ್​ಹೆಚ್ ತಂಡ ಉತ್ತಮ ಪೈಪೋಟಿ ನೀಡಿದೆ. ಹೀಗಾಗಿಯೇ ರಾಜೀವ್ ಗಾಂಧಿ ಮೈದಾನದಲ್ಲಿ SRH ಪಡೆಯನ್ನು ಸೋಲಿಸುವುದು RCB ಗೆ ಅಂದುಕೊಂಡಷ್ಟು ಸುಲಭವಲ್ಲ. SRH ತಂಡ ಹೀಗಿದೆ: ಅಭಿಷೇಕ್ ಶರ್ಮಾ , ರಾಹುಲ್ ತ್ರಿಪಾಠಿ , ಐಡೆನ್ ಮಾರ್ಕ್ರಾಮ್ (ನಾಯಕ) , ಹೆನ್ರಿಕ್ ಕ್ಲಾಸೆನ್ (ವಿಕೆಟ್ ಕೀಪರ್) , ಅಬ್ದುಲ್ ಸಮದ್ , ಸನ್ವಿರ್ ಸಿಂಗ್ , ಮಯಾಂಕ್ ಮಾರ್ಕಾಂಡೆ , ಮಾರ್ಕೊ ಯಾನ್ಸೆನ್ , ಭುವನೇಶ್ವರ್ ಕುಮಾರ್ , ಫಜಲ್ಹಕ್ ಫಾರೂಕಿ , ಟಿ ನಟರಾಜನ್, ಅನ್ಮೋಲ್ಪ್ರೀತ್ ಸಿಂಗ್ , ಗ್ಲೆನ್ ಫಿಲಿಪ್ಸ್ , ಅಕೇಲ್ ಹೊಸೈನ್ , ಮಯಾಂಕ್ ಡಗರ್ , ನಿತೀಶ್ ರೆಡ್ಡಿ , ವಿವ್ರಾಂತ್ ಶರ್ಮಾ , ಆದಿಲ್ ರಶೀದ್ , ಮಯಾಂಕ್ ಅಗರ್ವಾಲ್ , ಸಮರ್ಥ ವ್ಯಾಸ್ , ಉಪೇಂದ್ರ ಯಾದವ್ , ಹ್ಯಾರಿ ಬ್ರೂಕ್ , ಕಾರ್ತಿಕ್ ತ್ಯಾಗಿ , ಉಮ್ರಾನ್ ಮಲಿಕ್.RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಕೇದಾರ್ ಜಾಧವ್, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್.

source https://tv9kannada.com/photo-gallery/cricket-photos/ipl-2023-rcb-vs-srh-head-to-head-stats-kannada-news-zp-580999.html

Tags: Bengaluru, Cricket, Hyderabad, IPL, IPL 2023, RCB, SRH, T-20, TATA IPL 2023

Post navigation

IPL 2023: ಈ ಐಪಿಎಲ್​ನಲ್ಲಿ ಒಂದೇ ಓವರ್‌ನಲ್ಲಿ ಅತಿ ಹೆಚ್ಚು ರನ್ ನೀಡಿದ ಐವರು ಬೌಲರ್​ಗಳಿವರು..!
IPL 2023: ಹರಾಜಿನಲ್ಲಿ ಕೋಟಿ ಕೋಟಿ ಪಡೆದು ಆಟದಲ್ಲಿ ಮಂಕಾದ ಕೋಟಿ ವೀರರಿವರು

Leave a Reply Cancel reply

Your email address will not be published. Required fields are marked *

CITIES

Cities

ಕರ್ನಾಟಕ ಹವಾಮಾನ ಎಚ್ಚರಿಕೆ Weather Alert Karnataka Today.

March 22, 2026
samagrasuddi

ಇಂದಿನ ಹವಾಮಾನ ಸ್ಥಿತಿಕರ್ನಾಟಕ ರಾಜ್ಯದಲ್ಲಿ ಇಂದಿನ ಹವಾಮಾನವು ಬಿಸಿಲು ಹಾಗೂ ಮೋಡ ಕವಿದ ವಾತಾವರಣದ ಮಿಶ್ರಣವಾಗಿರಲಿದೆ. ಕೆಲವು ಜಿಲ್ಲೆಗಳಲ್ಲಿ ಮಧ್ಯಾಹ್ನದಿಂದ ಸಂಜೆವರೆಗೆ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.ತಾಪಮಾನ: ಸುಮಾರು 34°C ರಿಂದ 37°Cಬೆಳಗ್ಗೆ: ಬಿಸಿಲು ಹೆಚ್ಚಾಗಿರುತ್ತದೆಮಧ್ಯಾಹ್ನ/ಸಂಜೆ: ಮೋಡ ಕವಿದು ಮಳೆಯ ಸಾಧ್ಯತೆಮಳೆ…

Cities

ತುರುವೇಕೆರೆಯ ವಿದ್ಯಾರಣ್ಯ”D Ed College”ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಭರ್ಜರಿ ಯಶಸ್ಸು.

March 18, 2026
samagrasuddi
Cities

Karnataka Weather Today: ರಾಜ್ಯದಲ್ಲಿಂದು ಮಳೆಯ ಮುನ್ಸೂಚನೆ, ಹೇಗಿರಲಿದೆ ಹವಾಮಾನ?

March 18, 2026
samagrasuddi
Cities

LPG Helpline Karnataka: ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಆಹಾರ ಇಲಾಖೆಯ ಟೋಲ್ ಫ್ರೀ ನಂಬರ್.

March 16, 2026
samagrasuddi
Cities

ಯುಗಾದಿ ಮತ್ತು ರಂಜಾನ್ ಹಬ್ಬದ ಸಂಭ್ರಮ: KSRTCಯಿಂದ 2,000 ವಿಶೇಷ ಬಸ್‌ಗಳ ವ್ಯವಸ್ಥೆ, ಮುಂಗಡ ಟಿಕೆಟ್ ಮೇಲೆ ಭರ್ಜರಿ ರಿಯಾಯಿತಿ!

March 15, 2026
samagrasuddi

You may Missed

Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 9 | ದಿನ 81

March 26, 2026
samagrasuddi
Spiritual

2026 ಶ್ರೀರಾಮನವಮಿ: ಶುಭ ಮುಹೂರ್ತ, ಪೂಜಾ ವಿಧಿ ಮತ್ತು ಆಧ್ಯಾತ್ಮಿಕ ಮಹತ್ವದ ಸಂಪೂರ್ಣ ಮಾಹಿತಿ

March 25, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80

March 23, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 7 | ದಿನ 79

March 22, 2026
samagrasuddi
  • Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 9 | ದಿನ 81
  • 1ನೇ ತರಗತಿ ದಾಖಲಾತಿ: 6 ವರ್ಷದ ಕಡ್ಡಾಯ ನಿಯಮ ಸಡಿಲಿಸಿದ ರಾಜ್ಯ ಸರ್ಕಾರ, ಪೋಷಕರಿಗೆ ಭರ್ಜರಿ ರಿಲೀಫ್!
  • ಕರ್ನಾಟಕ ಹೈಕೋರ್ಟ್ ನೇಮಕಾತಿ 2026: 70 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನ.”
  • SSLC 2026 : ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮುಂದೂಡಿಕೆ; ಹೊಸ ದಿನಾಂಕದ ವಿವರ.
  • Horoscope Today, 26 March: ಈ ರಾಶಿಯವರಿಗೆ ಇಂದು ಮಾನಸಿಕವಾಗಿ ಸ್ವಲ್ಪ ಗೊಂದಲದ ದಿನ.
Copyright © 2026
CONTACT US
Theme by: Theme Horse
Proudly Powered by: WordPress