Skip to content
  • Monday, March 23, 2026
  • ABOUT US
  • CONTACT US
  • Privacy Policy

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • Privacy Policy
  • Horoscope
  • Home
  • Sports
  • IPL 2023: ಈ ಬಾರಿಯ ಐಪಿಎಲ್​ನಲ್ಲಿ ದಾಖಲಾದ ಟಾಪ್-10 ದಾಖಲೆಗಳಿವು..!
Sports

IPL 2023: ಈ ಬಾರಿಯ ಐಪಿಎಲ್​ನಲ್ಲಿ ದಾಖಲಾದ ಟಾಪ್-10 ದಾಖಲೆಗಳಿವು..!

May 30, 2023
samagrasuddi

IPL 2023: ವರ್ಣರಂಜಿತ ಕ್ರಿಕೆಟ್ ಟೂರ್ನಿ ಐಪಿಎಲ್ ಸೀಸನ್ 16 ಗೆ ತೆರೆಬಿದ್ದಿದೆ. ಅಹಮದಾಬಾದ್​ನಲ್ಲಿ ನಡೆದ ಫೈನಲ್ ಮುಖಾಮುಖಿಯಲ್ಲಿ ಗುಜರಾತ್ ಟೈಟಾನ್ಸ್ ತಂಡಕ್ಕೆ ಸೋಲುಣಿಸಿ ಚೆನ್ನೈ ಸೂಪರ್ ಕಿಂಗ್ಸ್​ ಪ್ರಶಸ್ತಿ ಗೆದ್ದುಕೊಂಡಿದೆ.ಇದರೊಂದಿಗೆ ಐಪಿಎಲ್ ಇತಿಹಾಸದಲ್ಲಿ 5 ಬಾರಿ ಪ್ರಶಸ್ತಿ ಗೆದ್ದ 2ನೇ ತಂಡ ಎಂಬ ದಾಖಲೆ ಸಿಎಸ್​ಕೆ ಪಾಲಾಯಿತು. ಈ ದಾಖಲೆಯಲ್ಲದೆ ಈ ಬಾರಿ ಹಲವು ಹೊಸ ದಾಖಲೆಗಳು ನಿರ್ಮಾಣವಾಗಿವೆ. ಅವುಗಳಲ್ಲಿನ ಟಾಪ್-10 ದಾಖಲೆಗಳಾವುವು ಎಂದು ನೋಡುವುದಾದರೆ...ಐಪಿಎಲ್ ಸಿಕ್ಸರ್ ದಾಖಲೆ: ಐಪಿಎಲ್ ಇತಿಹಾಸದಲ್ಲಿ ಮೊದಲ ಬಾರಿಗೆ, ಒಂದು ಸೀಸನ್​ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ದಾಖಲೆ ಈ ಬಾರಿಯ ಐಪಿಎಲ್​ ಪಾಲಾಗಿದೆ. ಅಂದರೆ ಐಪಿಎಲ್ 2023 ರಲ್ಲಿ ಒಟ್ಟು 1124 ಸಿಕ್ಸರ್‌ಗಳು ಮೂಡಿಬಂದಿವೆ. ಇದಕ್ಕೂ ಮುನ್ನ  2022 ರಲ್ಲಿ 1062 ಸಿಕ್ಸರ್‌ಗಳನ್ನು ಬಾರಿಸಿದ್ದು ದಾಖಲೆಯಾಗಿತ್ತು.ಫೋರ್​ಗಳ ದಾಖಲೆ: ಐಪಿಎಲ್ ಇತಿಹಾಸದಲ್ಲೇ ಈ ಬಾರಿ ಅತ್ಯಧಿಕ ಫೋರ್​ಗಳು ಮೂಡಿಬಂದಿವೆ. 2022 ರಲ್ಲಿ 2018 ಫೋರ್​ಗಳನ್ನು ಬಾರಿಸಿದ್ದರೆ, ಈ ಬಾರಿ ಬರೋಬ್ಬರಿ 2174 ಬೌಂಡರಿಗಳನ್ನು ಸಿಡಿಸಿದ್ದಾರೆ.ಶತಕಗಳ ದಾಖಲೆ: ಈ ಬಾರಿಯ ಐಪಿಎಲ್​ನಲ್ಲಿ ಅತ್ಯಧಿಕ ಸೆಂಚುರಿಗಳನ್ನು ಬಾರಿಸಿರುವುದು ವಿಶೇಷ. 2022 ರಲ್ಲಿ 8 ಶತಕಗಳನ್ನು ಬಾರಿಸಿದ್ದು ದಾಖಲೆಯಾಗಿತ್ತು. ಆದರೆ ಈ ಬಾರಿ 12 ಶತಕಗಳು ಮೂಡಿಬಂದಿದ್ದು, ಈ ಮೂಲಕ ಹೊಸ ದಾಖಲೆ ನಿರ್ಮಾಣವಾಗಿದೆ.ಅರ್ಧಶತಕಗಳ ದಾಖಲೆ: ಐಪಿಎಲ್ ಸೀಸನ್​ವೊಂದರಲ್ಲಿ ಅತೀ ಹೆಚ್ಚು ಶತಕ ಬಾರಿಸಿದ್ದು ಕೂಡ ಈ ಬಾರಿ ಎಂಬುದು ವಿಶೇಷ. ಐಪಿಎಲ್ 2023 ರಲ್ಲಿ ಒಟ್ಟು 153 ಅರ್ಧ ಶತಕಗಳನ್ನು ಬಾರಿಸಿದ್ದಾರೆ. ಕಳೆದ ಸೀಸನ್​ನಲ್ಲಿ 118 ಅರ್ಧಶತಕ ಬಾರಿಸಿದ್ದು ಇದುವರೆಗಿನ ದಾಖಲೆಯಾಗಿತ್ತು.ಸರಾಸರಿ ಸ್ಕೋರ್ ದಾಖಲೆ: ಐಪಿಎಲ್‌ನ 16ನೇ ಸೀಸನ್‌ನಲ್ಲಿ ಸರಾಸರಿ ಮೊದಲ ಇನ್ನಿಂಗ್ಸ್ ಸ್ಕೋರ್ 183 ಎಂಬುದು ವಿಶೇಷ. ಇದು ಯಾವುದೇ ಐಪಿಎಲ್ ಸೀಸನ್​ನ ಗರಿಷ್ಠ ಮೊತ್ತವಾಗಿದೆ. 2018ರಲ್ಲಿ ಮೊದಲ ಇನಿಂಗ್ಸ್‌ನಲ್ಲಿ ಸರಾಸರಿ ಸ್ಕೋರ್ 172 ಆಗಿತ್ತು.ಬ್ಯಾಟ್ಸ್​ಮನ್​ಗಳ ಅಬ್ಬರದ ದಾಖಲೆ: ಈ ಬಾರಿಯ ಐಪಿಎಲ್​ನಲ್ಲಿ ಬ್ಯಾಟ್ಸ್​ಮನ್​ಗಳು ಪ್ರತಿ ಓವರ್​ಗೆ 8.99 ಸರಾಸರಿಯಲ್ಲಿ ರನ್​ಗಳಿಸಿದ್ದಾರೆ. 2018 ರಲ್ಲಿ ಪ್ರತಿ ಓವರ್‌ಗೆ 8.65 ಸರಾಸರಿಯಲ್ಲಿ ರನ್‌ ಕಲೆಹಾಕಿದ್ದು ಅತ್ಯುತ್ತಮ ದಾಖಲೆಯಾಗಿತ್ತು. ಇದೀಗ ಈ ದಾಖಲೆಯನ್ನು ಮುರಿಯಲಾಗಿದೆ.
ಡಬಲ್ ಸೆಂಚುರಿ ಚೇಸಿಂಗ್: ಐಪಿಎಲ್ 2023 ರಲ್ಲಿ 8 ಬಾರಿ 200 ಅಥವಾ ಅದಕ್ಕಿಂತ ಹೆಚ್ಚಿನ ರನ್ ಗುರಿ ಬೆನ್ನತ್ತಲಾಗಿದೆ. ಅದು ಐಪಿಎಲ್​ ಇತಿಹಾಸದಲ್ಲೇ ಗರಿಷ್ಠ ಬಾರಿ ಎಂಬುದು ವಿಶೇಷ. ಈ ಹಿಂದೆ 2014 ರಲ್ಲಿ 3 ಬಾರಿ 200+ ಸ್ಕೋರ್​ ಅನ್ನು ಚೇಸ್ ಮಾಡಿದ್ದು ದಾಖಲೆಯಾಗಿತ್ತು.
ಬೌಲರ್​ಗಳ ದಾಖಲೆ: ಐಪಿಎಲ್ ಸೀಸನ್​ವೊಂದರಲ್ಲಿ ಒಂದೇ ತಂಡದ ಮೂವರು ಬೌಲರ್‌ಗಳು 25 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್‌ಗಳನ್ನು ಪಡೆದಿರುವುದು ಇದೇ ಮೊದಲ ಬಾರಿ. ಗುಜರಾತ್ ಟೈಟಾನ್ಸ್ ಬೌಲರ್‌ಗಳಾದ ಮೊಹಮ್ಮದ್ ಶಮಿ, ಮೋಹಿತ್ ಶರ್ಮಾ ಮತ್ತು ರಶೀದ್ ಖಾನ್ ಈ ಸಾಧನೆ ಮಾಡಿದ್ದಾರೆ.
ಅನ್​ಕ್ಯಾಪ್ಡ್ ಆಟಗಾರರ ಸೆಂಚುರಿ: ಐಪಿಎಲ್ ಇತಿಹಾಸದಲ್ಲಿ ಇಬ್ಬರು ಅನ್ ಕ್ಯಾಪ್ಡ್ ಭಾರತೀಯ ಆಟಗಾರರು ಶತಕ ಸಿಡಿಸಿದ್ದು ಇದೇ ಮೊದಲು. ಈ ಸೀಸನ್​ನಲ್ಲಿ ಯಶಸ್ವಿ ಜೈಸ್ವಾಲ್ ಮತ್ತು ಪ್ರಭಾಸಿಮ್ರಾನ್ ಸಿಂಗ್ ಸೆಂಚುರಿ ಸಿಡಿಸಿ ಈ ವಿಶೇಷ ದಾಖಲೆ ನಿರ್ಮಿಸಿದ್ದಾರೆ.

source https://tv9kannada.com/photo-gallery/cricket-photos/ipl-2023-records-ipl-2023-creates-new-records-kannada-news-zp-590543.html

Tags: Cricket, IPL, IPL 2023, samagrasuddi, T-20, TATA IPL 2023, ಸಮಗ್ರ ಸುದ್ದಿ

Post navigation

ಆದಷ್ಟು ಬೇಗ ಪರಿಹಾರಕ್ಕಾಗಿ ಆಶಿಸುತ್ತೇನೆ: ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ಬೆಂಬಲ ನೀಡಿದ ಅನಿಲ್ ಕುಂಬ್ಳೆ
Wrestlers Protest: ಕುಸ್ತಿಪಟುಗಳ ಪ್ರತಿಭಟನೆಗೆ ಬೆಂಬಲ ಸೂಚಿಸಿದ ಕ್ರಿಕೆಟಿಗರು

Leave a Reply Cancel reply

Your email address will not be published. Required fields are marked *

CITIES

Cities

ಕರ್ನಾಟಕ ಹವಾಮಾನ ಎಚ್ಚರಿಕೆ Weather Alert Karnataka Today.

March 22, 2026
samagrasuddi

ಇಂದಿನ ಹವಾಮಾನ ಸ್ಥಿತಿಕರ್ನಾಟಕ ರಾಜ್ಯದಲ್ಲಿ ಇಂದಿನ ಹವಾಮಾನವು ಬಿಸಿಲು ಹಾಗೂ ಮೋಡ ಕವಿದ ವಾತಾವರಣದ ಮಿಶ್ರಣವಾಗಿರಲಿದೆ. ಕೆಲವು ಜಿಲ್ಲೆಗಳಲ್ಲಿ ಮಧ್ಯಾಹ್ನದಿಂದ ಸಂಜೆವರೆಗೆ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.ತಾಪಮಾನ: ಸುಮಾರು 34°C ರಿಂದ 37°Cಬೆಳಗ್ಗೆ: ಬಿಸಿಲು ಹೆಚ್ಚಾಗಿರುತ್ತದೆಮಧ್ಯಾಹ್ನ/ಸಂಜೆ: ಮೋಡ ಕವಿದು ಮಳೆಯ ಸಾಧ್ಯತೆಮಳೆ…

Cities

ತುರುವೇಕೆರೆಯ ವಿದ್ಯಾರಣ್ಯ”D Ed College”ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಭರ್ಜರಿ ಯಶಸ್ಸು.

March 18, 2026
samagrasuddi
Cities

Karnataka Weather Today: ರಾಜ್ಯದಲ್ಲಿಂದು ಮಳೆಯ ಮುನ್ಸೂಚನೆ, ಹೇಗಿರಲಿದೆ ಹವಾಮಾನ?

March 18, 2026
samagrasuddi
Cities

LPG Helpline Karnataka: ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಆಹಾರ ಇಲಾಖೆಯ ಟೋಲ್ ಫ್ರೀ ನಂಬರ್.

March 16, 2026
samagrasuddi
Cities

ಯುಗಾದಿ ಮತ್ತು ರಂಜಾನ್ ಹಬ್ಬದ ಸಂಭ್ರಮ: KSRTCಯಿಂದ 2,000 ವಿಶೇಷ ಬಸ್‌ಗಳ ವ್ಯವಸ್ಥೆ, ಮುಂಗಡ ಟಿಕೆಟ್ ಮೇಲೆ ಭರ್ಜರಿ ರಿಯಾಯಿತಿ!

March 15, 2026
samagrasuddi

You may Missed

Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80

March 23, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 7 | ದಿನ 79

March 22, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 6 | ದಿನ 78

March 21, 2026
samagrasuddi
Home Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 4.5 | ದಿನ 77

March 20, 2026
samagrasuddi
  • ಕರ್ನಾಟಕ ಆಯುಷ್ ಇಲಾಖೆ ನೇಮಕಾತಿ 2026:ಬೆಂಗಳೂರಿನಲ್ಲಿ ಖಾತೆ ಸಹಾಯಕ ಹುದ್ದೆಗೆ ನೇರ ಸಂದರ್ಶನ | AYUSH Karnataka Recruitment
  • ಇತಿಹಾಸದಲ್ಲೇ ಮೊದಲ ಬಾರಿಗೆ 94ರ ಗಡಿ ದಾಟಿದ ಡಾಲರ್: ರೂಪಾಯಿ ಮೌಲ್ಯ ತೀವ್ರ ಕುಸಿತಕ್ಕೆ ಕಾರಣಗಳೇನು?
  • ಹವಾಮಾನ ಬದಲಾವಣೆಯಿಂದ ಕಾಡುತ್ತಿರುವ ಒಣ ಕೆಮ್ಮು: ಕಾರಣ, ಲಕ್ಷಣ ಮತ್ತು ಪರಿಹಾರ.
  • ​Day Special, ಮಾರ್ಚ್ 23: ದೇಶಪ್ರೇಮದ ಕಿಚ್ಚು ಮತ್ತು ಜಾಗತಿಕ ಬದಲಾವಣೆಯ ದಿನ – ಒಂದು ಸಮಗ್ರ ನೋಟ
  • Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80
Copyright © 2026
CONTACT US
Theme by: Theme Horse
Proudly Powered by: WordPress