Skip to content
  • Wednesday, March 25, 2026
  • ABOUT US
  • CONTACT US
  • Privacy Policy

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • Privacy Policy
  • Horoscope
  • Home
  • Sports
  • IPL 2023: ಮೈದಾನದಲ್ಲೇ ಧೋನಿ-ಜಡೇಜಾ ನಡುವೆ ಮಾತಿನ ಚಕಮಕಿ..!
Sports

IPL 2023: ಮೈದಾನದಲ್ಲೇ ಧೋನಿ-ಜಡೇಜಾ ನಡುವೆ ಮಾತಿನ ಚಕಮಕಿ..!

May 22, 2023
samagrasuddi

IPL 2023: ಐಪಿಎಲ್​ ಸೀಸನ್ 16 ರಲ್ಲಿ ಪ್ಲೇಆಫ್ ಪ್ರವೇಶಿಸಿ ಪ್ರಶಸ್ತಿ ಮೇಲೆ ಕಣ್ಣಿಟ್ಟಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಎಲ್ಲವೂ ಸರಿಯಿಲ್ಲವಾ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಇದಕ್ಕೆ ಕಾರಣ ಮಹೇಂದ್ರ ಸಿಂಗ್ ಧೋನಿ ಹಾಗೂ ರವೀಂದ್ರ ಜಡೇಜಾ ನಡುವಣ ವಾಕ್ಸಮರ.ಹೌದು, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಗೆಲುವಿನ ಬಳಿಕ ಸಿಎಸ್​ಕೆ ತಂಡದ ಎಲ್ಲಾ ಆಟಗಾರರು ಸಂಭ್ರಮದಲ್ಲಿದ್ದರೆ, ಇತ್ತ ಮಹೇಂದ್ರ ಸಿಂಗ್ ಧೋನಿ ರವೀಂದ್ರ ಜಡೇಜಾ ಅವರೊಂದಿಗೆ ವಾಗ್ವಾದಕ್ಕಿಳಿದಿದ್ದರು.ಸಿಎಸ್​ಕೆ ತಂಡದ ನಾಯಕನ ಮಾತನ್ನು ಆಲಿಸಿದ್ದ ಜಡೇಜಾ ಅವರ ಮುಖದಲ್ಲಿ ನಿರಾಶಭಾವ ಎದ್ದು ಕಾಣುತ್ತಿತ್ತು. ಅಲ್ಲದೆ ಈ ಮಾತುಕತೆಯೊಂದಿಗೆ ಧೋನಿ ಜಡೇಜಾರನ್ನು ಡಗೌಟ್​ಗೆ ಕರೆದೊಯ್ದಿದ್ದರು. ಇದಾಗ್ಯೂ ಜಡೇಜಾ ಅವರ ಮುಖದಲ್ಲಿ ಯಾವುದೇ ಗೆಲುವಿನ ನಗು ಮಾತ್ರ ಬಂದಿರಲಿಲ್ಲ.ಇದರ ಬೆನ್ನಲ್ಲೇ ಧೋನಿ ಹಾಗೂ ಜಡೇಜಾ ನಡುವಣ ವಾಕ್ಸಮರದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೆ ಇಬ್ಬರ ನಡುವೆ ಬಿರುಕು ಮೂಡಿದ್ಯಾ ಎಂಬ ಅನುಮಾನಗಳು ಕೂಡ ಹುಟ್ಟಿಕೊಂಡಿದೆ.
ಏಕೆಂದರೆ ಕಳೆದ ಸೀಸನ್​ನಲ್ಲಿ ಜಡೇಜಾ ಅವರನ್ನು ನಾಯಕರನ್ನಾಗಿಸಿದ ಸಿಎಸ್​ಕೆ ಕೆಲ ಪಂದ್ಯಗಳ ಬಳಿಕ ಕಪ್ತಾನನ ಸ್ಥಾನದಿಂದ ಕೆಳಗಿಳಿಸಿದ್ದರು. ಅಲ್ಲದೆ ಈ ಬಾರಿ ಜಡೇಜಾ ಸಿಎಸ್​ಕೆ ಪರ ಆಡುವುದಿಲ್ಲ ಎಂಬ ಸುದ್ದಿಗಳು ಕೂಡ ಹರಿದಾಡಿದ್ದವು.ಆದರೆ ಅಂತಿಮ ಕ್ಷಣದಲ್ಲಿ ಎಲ್ಲಾ ಗೊಂದಲಗಳಿಗೆ ತೆರೆ ಎಳೆದ ಜಡೇಜಾ ಸಿಎಸ್​ಕೆ ತಂಡದಲ್ಲೇ ಮುಂದುವರೆಯುವುದಾಗಿ ತಿಳಿಸಿದ್ದರು. ಇದೀಗ ಮೈದಾನದಲ್ಲೇ ಧೋನಿ ಜಡೇಜಾಗೆ ಕ್ಲಾಸ್ ತೆಗೆದುಕೊಂಡಿರುವುದು ಸಿಎಸ್​ಕೆ ತಂಡದ ಸ್ಟಾರ್ ಆಟಗಾರರ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಅನುಮಾನವನ್ನು ಹುಟ್ಟುಹಾಕಿದೆ.

source https://tv9kannada.com/photo-gallery/cricket-photos/ipl-2023-ms-dhoni-heated-conversation-with-ravindra-jadeja-kannada-news-zp-584589.html

Tags: Cricket, IPL, IPL 2023, M S Dhoni, Ravindra jadeja, samagrasuddi, T-20, TATA IPL 2023, ಸಮಗ್ರ ಸುದ್ದಿ

Post navigation

IPL 2023: ಶುಭ್​ಮನ್ ಗಿಲ್ ಬ್ಯಾಟಿಂಗ್ ಬಗ್ಗೆ ವಿಭಿನ್ನ ಕಾಮೆಂಟ್ ಮಾಡಿದ ಸಚಿನ್ ತೆಂಡೂಲ್ಕರ್..!
ಚುನಾವಣೆಯಲ್ಲಿ ಅಕ್ರಮದ ವಿರುದ್ಧ  ನ್ಯಾಯಾಲಯದ ಮೊರೆ : ಪಕ್ಷೇತರ ಅಭ್ಯರ್ಥಿ ಬೂತರಾಜ್

Leave a Reply Cancel reply

Your email address will not be published. Required fields are marked *

CITIES

Cities

ಕರ್ನಾಟಕ ಹವಾಮಾನ ಎಚ್ಚರಿಕೆ Weather Alert Karnataka Today.

March 22, 2026
samagrasuddi

ಇಂದಿನ ಹವಾಮಾನ ಸ್ಥಿತಿಕರ್ನಾಟಕ ರಾಜ್ಯದಲ್ಲಿ ಇಂದಿನ ಹವಾಮಾನವು ಬಿಸಿಲು ಹಾಗೂ ಮೋಡ ಕವಿದ ವಾತಾವರಣದ ಮಿಶ್ರಣವಾಗಿರಲಿದೆ. ಕೆಲವು ಜಿಲ್ಲೆಗಳಲ್ಲಿ ಮಧ್ಯಾಹ್ನದಿಂದ ಸಂಜೆವರೆಗೆ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.ತಾಪಮಾನ: ಸುಮಾರು 34°C ರಿಂದ 37°Cಬೆಳಗ್ಗೆ: ಬಿಸಿಲು ಹೆಚ್ಚಾಗಿರುತ್ತದೆಮಧ್ಯಾಹ್ನ/ಸಂಜೆ: ಮೋಡ ಕವಿದು ಮಳೆಯ ಸಾಧ್ಯತೆಮಳೆ…

Cities

ತುರುವೇಕೆರೆಯ ವಿದ್ಯಾರಣ್ಯ”D Ed College”ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಭರ್ಜರಿ ಯಶಸ್ಸು.

March 18, 2026
samagrasuddi
Cities

Karnataka Weather Today: ರಾಜ್ಯದಲ್ಲಿಂದು ಮಳೆಯ ಮುನ್ಸೂಚನೆ, ಹೇಗಿರಲಿದೆ ಹವಾಮಾನ?

March 18, 2026
samagrasuddi
Cities

LPG Helpline Karnataka: ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಆಹಾರ ಇಲಾಖೆಯ ಟೋಲ್ ಫ್ರೀ ನಂಬರ್.

March 16, 2026
samagrasuddi
Cities

ಯುಗಾದಿ ಮತ್ತು ರಂಜಾನ್ ಹಬ್ಬದ ಸಂಭ್ರಮ: KSRTCಯಿಂದ 2,000 ವಿಶೇಷ ಬಸ್‌ಗಳ ವ್ಯವಸ್ಥೆ, ಮುಂಗಡ ಟಿಕೆಟ್ ಮೇಲೆ ಭರ್ಜರಿ ರಿಯಾಯಿತಿ!

March 15, 2026
samagrasuddi

You may Missed

Spiritual

2026 ಶ್ರೀರಾಮನವಮಿ: ಶುಭ ಮುಹೂರ್ತ, ಪೂಜಾ ವಿಧಿ ಮತ್ತು ಆಧ್ಯಾತ್ಮಿಕ ಮಹತ್ವದ ಸಂಪೂರ್ಣ ಮಾಹಿತಿ

March 25, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80

March 23, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 7 | ದಿನ 79

March 22, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 6 | ದಿನ 78

March 21, 2026
samagrasuddi
  • 2026 ಶ್ರೀರಾಮನವಮಿ: ಶುಭ ಮುಹೂರ್ತ, ಪೂಜಾ ವಿಧಿ ಮತ್ತು ಆಧ್ಯಾತ್ಮಿಕ ಮಹತ್ವದ ಸಂಪೂರ್ಣ ಮಾಹಿತಿ
  • RCB New Era:ಬೃಹತ್ ಮೊತ್ತಕ್ಕೆ ಮಾರಾಟವಾದ ಆರ್‌ಸಿಬಿ; ಹೊಸ ಮಾಲೀಕರು ಯಾರು? ಕೊಹ್ಲಿ ಭವಿಷ್ಯವೇನು? ಸಂಪೂರ್ಣ ವಿವರ.
  • UPSC ನಿಂದ ಮೆಗಾ ನೇಮಕಾತಿ: 1300ಕ್ಕೂ ಅಧಿಕ ವೈದ್ಯಾಧಿಕಾರಿ ಹುದ್ದೆಗಳು ಖಾಲಿ, ಮಾ.31 ಕಡೆ ದಿನ.
  • ಕರ್ನಾಟಕ ಆಯುಷ್ ಇಲಾಖೆ ನೇಮಕಾತಿ 2026:ಬೆಂಗಳೂರಿನಲ್ಲಿ ಖಾತೆ ಸಹಾಯಕ ಹುದ್ದೆಗೆ ನೇರ ಸಂದರ್ಶನ | AYUSH Karnataka Recruitment
  • ಇತಿಹಾಸದಲ್ಲೇ ಮೊದಲ ಬಾರಿಗೆ 94ರ ಗಡಿ ದಾಟಿದ ಡಾಲರ್: ರೂಪಾಯಿ ಮೌಲ್ಯ ತೀವ್ರ ಕುಸಿತಕ್ಕೆ ಕಾರಣಗಳೇನು?
Copyright © 2026
CONTACT US
Theme by: Theme Horse
Proudly Powered by: WordPress