Skip to content
  • Monday, March 23, 2026
  • ABOUT US
  • CONTACT US
  • PRIVACY POLICY

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • PRIVACY POLICY
  • Horoscope
  • Home
  • Sports
  • IPL 2023: KKR ತಂಡಕ್ಕೆ ವೆಸ್ಟ್ ಇಂಡೀಸ್​ನ ಸ್ಪೋಟಕ ದಾಂಡಿಗ ಎಂಟ್ರಿ
Sports

IPL 2023: KKR ತಂಡಕ್ಕೆ ವೆಸ್ಟ್ ಇಂಡೀಸ್​ನ ಸ್ಪೋಟಕ ದಾಂಡಿಗ ಎಂಟ್ರಿ

May 4, 2023
samagrasuddi

IPL 2023: ಸತತ ಸೋಲುಗಳಿಂದ ಕಂಗೆಟ್ಟಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಇದೀಗ ವೆಸ್ಟ್ ಇಂಡೀಸ್​ನ ಸ್ಪೋಟಕ ದಾಂಡಿಗನ ಜಾನ್ಸನ್ ಚಾರ್ಲ್ಸ್​ ಅನ್ನು ತಂಡಕ್ಕೆ ಸೇರಿಸಿಕೊಂಡಿದೆ. ಕೆಕೆಆರ್ ತಂಡದಲ್ಲಿದ್ದ ಬಾಂಗ್ಲಾದೇಶ್ ಆಟಗಾರ ಲಿಟ್ಟನ್ ದಾಸ್ ಅವರ ಬದಲಿ ಆಟಗಾರನಾಗಿ ಚಾರ್ಲ್ಸ್​ರನ್ನು ಆಯ್ಕೆ ಮಾಡಲಾಗಿದೆ.ಈ ಬಾರಿಯ ಐಪಿಎಲ್​ನಲ್ಲಿ ಲಿಟ್ಟನ್ ದಾಸ್ ಅವರನ್ನು ಕೆಕೆಆರ್ 50 ಲಕ್ಷ ರೂ.ಗೆ ಖರೀದಿಸಿತ್ತು. ಆದರೆ ಕೆಕೆಆರ್ ಪರ ಒಂದು ಪಂದ್ಯವಾಡಿದ್ದ ದಾಸ್ ವೈಯುಕ್ತಿಕ ಕಾರಣಗಳಿಂದಾಗಿ ಅರ್ಧದಲ್ಲೇ ಐಪಿಎಲ್ ತೊರೆದಿದ್ದಾರೆ.ಇದೀಗ ಅವರ ಬದಲಿ ಆಟಗಾರನಾಗಿ ವಿಂಡೀಸ್ ಆಟಗಾರ ಜಾನ್ಸನ್ ಚಾರ್ಲ್ಸ್​ ಅವರಿಗೆ ಕೆಕೆಆರ್ ಅವಕಾಶ ನೀಡಿದೆ. ವೆಸ್ಟ್ ಇಂಡೀಸ್ ತಂಡದ ವಿಕೆಟ್ ಕೀಪರ್ ಬ್ಯಾಟರ್ ಆಗಿರುವ ಚಾರ್ಲ್ಸ್ ಇದುವರೆಗೆ 41 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಒಟ್ಟು 971 ರನ್​ಗಳಿಸಿದ್ದಾರೆ. ಅಲ್ಲದೆ 2012 ಮತ್ತು 2016 ಐಸಿಸಿ ವಿಶ್ವ ಟಿ20 ವಿಶ್ವಕಪ್​ ಗೆದ್ದ ವೆಸ್ಟ್ ಇಂಡೀಸ್​ ತಂಡದ ಭಾಗವಾಗಿದ್ದರು. ಇದಲ್ಲದೆ, ವಿವಿಧ ಲೀಗ್​ಗಳು ಸೇರಿ ಒಟ್ಟು 224 ಟಿ20 ಪಂದ್ಯಗಳನ್ನಾಡಿರುವ ಚಾನ್ಸನ್ ಚಾರ್ಲ್ಸ್​ ಒಟ್ಟು  5600 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಇದೀಗ ಅನುಭವಿ ದಾಂಡಿಗನಿಗೆ ಮಣೆಹಾಕಿರುವ ಕೆಕೆಆರ್ ಮುಂದಿನ ಪಂದ್ಯಗಳಲ್ಲಿ ಚಾರ್ಲ್ಸ್​ಗೆ ಅವಕಾಶ ನೀಡಲಿದೆಯಾ ಕಾದು ನೋಡಬೇಕಿದೆ.ಸದ್ಯ ಕೆಕೆಆರ್ ತಂಡವು 9 ಪಂದ್ಯಗಳನ್ನು ಆಡಿದ್ದು, ಇದರಲ್ಲಿ ಕೇವಲ ಮೂರು ಪಂದ್ಯಗಳನ್ನು ಮಾತ್ರ ಗೆದ್ದುಕೊಂಡಿದೆ. ಅಲ್ಲದೆ ಗುರುವಾರ SRH ವಿರುದ್ಧ ತನ್ನ 10ನೇ ಪಂದ್ಯವನ್ನು ಆಡಲಿದೆ. ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಗೆಲುವಿನ ಲಯಕ್ಕೆ ಮರಳುವ ಇರಾದೆಯಲ್ಲಿದೆ ಕೆಕೆಆರ್.KKR ತಂಡ: ರಹಮಾನುಲ್ಲಾ ಗುರ್ಬಾಝ್ (ವಿಕೆಟ್ ಕೀಪರ್) , ನಿತೀಶ್ ರಾಣಾ (ನಾಯಕ) , ಎನ್ ಜಗದೀಸನ್ , ವೆಂಕಟೇಶ್ ಅಯ್ಯರ್ , ರಿಂಕು ಸಿಂಗ್ , ಆಂಡ್ರೆ ರಸೆಲ್ , ಡೇವಿಡ್ ವೀಸ್ಸಾ, ಸುನಿಲ್ ನರೈನ್ , ಶಾರ್ದೂಲ್ ಠಾಕೂರ್ , ಹರ್ಷಿತ್ ರಾಣಾ , ವರುಣ್ ಚಕ್ರವರ್ತಿ , ಜೇಸನ್ ರಾಯ್, ಸುಯಶ್ ಸಿಂಗ್ ಶರ್ಮಾ , ಟಿಮ್ ಸೌಥಿ , ಉಮೇಶ್ ಯಾದವ್ , ಲಾಕಿ ಫರ್ಗುಸನ್ , ಕುಲ್ವಂತ್ ಖೆಜ್ರೋಲಿಯಾ , ವೈಭವ್ ಅರೋರಾ , ​​ಆರ್ಯ ದೇಸಾಯಿ, ಜಾನ್ಸನ್ ಚಾರ್ಲ್ಸ್​.

source https://tv9kannada.com/photo-gallery/cricket-photos/ipl-2023-kkr-signed-johnson-charles-as-replacement-for-litton-das-kannada-news-zp-569897.html

Tags: samagrasuddi, ಸಮಗ್ರ ಸುದ್ದಿ

Post navigation

ಅಗತ್ಯ ವಸ್ತುಗಳ ಬೆಲೆ ತ್ರಿಬಲ್ ಏರಿಕೆ, ಡಬಲ್ ಇಂಜಿನ್ ಸರ್ಕಾರದ ಸಾಧನೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಎನ್.ಚಂದ್ರಪ್ಪ ಆರೋಪ
IPL 2023: ಈ ಐಪಿಎಲ್​​ನಲ್ಲಿ ಅತಿ ಹೆಚ್ಚು ಡಾಟ್ ಬಾಲ್ ಎಸೆದಿರುವ ಬೌಲರ್ ಯಾರು ಗೊತ್ತಾ?

Leave a Reply Cancel reply

Your email address will not be published. Required fields are marked *

CITIES

Cities

ಕರ್ನಾಟಕ ಹವಾಮಾನ ಎಚ್ಚರಿಕೆ Weather Alert Karnataka Today.

March 22, 2026
samagrasuddi

ಇಂದಿನ ಹವಾಮಾನ ಸ್ಥಿತಿಕರ್ನಾಟಕ ರಾಜ್ಯದಲ್ಲಿ ಇಂದಿನ ಹವಾಮಾನವು ಬಿಸಿಲು ಹಾಗೂ ಮೋಡ ಕವಿದ ವಾತಾವರಣದ ಮಿಶ್ರಣವಾಗಿರಲಿದೆ. ಕೆಲವು ಜಿಲ್ಲೆಗಳಲ್ಲಿ ಮಧ್ಯಾಹ್ನದಿಂದ ಸಂಜೆವರೆಗೆ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.ತಾಪಮಾನ: ಸುಮಾರು 34°C ರಿಂದ 37°Cಬೆಳಗ್ಗೆ: ಬಿಸಿಲು ಹೆಚ್ಚಾಗಿರುತ್ತದೆಮಧ್ಯಾಹ್ನ/ಸಂಜೆ: ಮೋಡ ಕವಿದು ಮಳೆಯ ಸಾಧ್ಯತೆಮಳೆ…

Cities

ತುರುವೇಕೆರೆಯ ವಿದ್ಯಾರಣ್ಯ”D Ed College”ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಭರ್ಜರಿ ಯಶಸ್ಸು.

March 18, 2026
samagrasuddi
Cities

Karnataka Weather Today: ರಾಜ್ಯದಲ್ಲಿಂದು ಮಳೆಯ ಮುನ್ಸೂಚನೆ, ಹೇಗಿರಲಿದೆ ಹವಾಮಾನ?

March 18, 2026
samagrasuddi
Cities

LPG Helpline Karnataka: ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಆಹಾರ ಇಲಾಖೆಯ ಟೋಲ್ ಫ್ರೀ ನಂಬರ್.

March 16, 2026
samagrasuddi
Cities

ಯುಗಾದಿ ಮತ್ತು ರಂಜಾನ್ ಹಬ್ಬದ ಸಂಭ್ರಮ: KSRTCಯಿಂದ 2,000 ವಿಶೇಷ ಬಸ್‌ಗಳ ವ್ಯವಸ್ಥೆ, ಮುಂಗಡ ಟಿಕೆಟ್ ಮೇಲೆ ಭರ್ಜರಿ ರಿಯಾಯಿತಿ!

March 15, 2026
samagrasuddi

You may Missed

Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80

March 23, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 7 | ದಿನ 79

March 22, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 6 | ದಿನ 78

March 21, 2026
samagrasuddi
Home Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 4.5 | ದಿನ 77

March 20, 2026
samagrasuddi
  • ಕರ್ನಾಟಕ ಆಯುಷ್ ಇಲಾಖೆ ನೇಮಕಾತಿ 2026:ಬೆಂಗಳೂರಿನಲ್ಲಿ ಖಾತೆ ಸಹಾಯಕ ಹುದ್ದೆಗೆ ನೇರ ಸಂದರ್ಶನ | AYUSH Karnataka Recruitment
  • ಇತಿಹಾಸದಲ್ಲೇ ಮೊದಲ ಬಾರಿಗೆ 94ರ ಗಡಿ ದಾಟಿದ ಡಾಲರ್: ರೂಪಾಯಿ ಮೌಲ್ಯ ತೀವ್ರ ಕುಸಿತಕ್ಕೆ ಕಾರಣಗಳೇನು?
  • ಹವಾಮಾನ ಬದಲಾವಣೆಯಿಂದ ಕಾಡುತ್ತಿರುವ ಒಣ ಕೆಮ್ಮು: ಕಾರಣ, ಲಕ್ಷಣ ಮತ್ತು ಪರಿಹಾರ.
  • ​Day Special, ಮಾರ್ಚ್ 23: ದೇಶಪ್ರೇಮದ ಕಿಚ್ಚು ಮತ್ತು ಜಾಗತಿಕ ಬದಲಾವಣೆಯ ದಿನ – ಒಂದು ಸಮಗ್ರ ನೋಟ
  • Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80
Copyright © 2026
CONTACT US
Theme by: Theme Horse
Proudly Powered by: WordPress