IPL 2024: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್) ತನ್ನ 2ನೇ ಪಂದ್ಯದಲ್ಲೂ ಚೆನ್ನೈ ಸೂಪರ್ ಕಿಂಗ್ಸ್ ಜಯ ಸಾಧಿಸಿದೆ. ಉದ್ಘಾಟನಾ ಪಂದ್ಯದಲ್ಲಿ ಆರ್ಸಿಬಿ ವಿರುದ್ಧ ಭರ್ಜರಿ ಜಯ ಸಾಧಿಸಿ ಶುಭಾರಂಭ ಮಾಡಿದ್ದ ಸಿಎಸ್ಕೆ ತಂಡವು ಇದೀಗ ಗುಜರಾತ್ ಟೈಟಾನ್ಸ್ ವಿರುದ್ಧ ಗೆಲುವು ದಾಖಲಿಸಿದೆ. ಈ ಮೂಲಕ ಬ್ಯಾಕ್ ಟು ಬ್ಯಾಕ್ ಎರಡು ಪಂದ್ಯಗಳನ್ನು ಗೆದ್ದುಕೊಂಡಿದೆ.

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸಿಎಸ್ಕೆ ತಂಡಕ್ಕೆ ರಚಿನ್ ರವೀಂದ್ರ ಹಾಗೂ ರುತುರಾಜ್ ಗಾಯಕ್ವಾಡ್ ಭರ್ಜರಿ ಆರಂಭ ಒದಗಿಸಿದ್ದರು. ಮೊದಲ ವಿಕೆಟ್ಗೆ 62 ರನ್ ಪೇರಿಸಿದ ಬಳಿಕ ರಚಿನ್ (46 ರನ್ಸ್, 20ಎಸೆತ) ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಅಜಿಂಕ್ಯ ರಹಾನೆ (12) ಕೂಡ ಔಟಾದರು.
ಈ ಹಂತದಲ್ಲಿ ಶಿವಂ ದುಬೆ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಕೇವಲ 23 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 2 ಫೋರ್ಗಳೊಂದಿಗೆ 51 ರನ್ ಚಚ್ಚಿದರು. ಮತ್ತೊಂದೆಡೆ ರುತುರಾಜ್ ಗಾಯಕ್ವಾಡ್ 46 ರನ್ಗಳ ಕೊಡುಗೆ ನೀಡಿದರು. ಈ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಸಿಎಸ್ಕೆ ತಂಡವು 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 206 ರನ್ ಕಲೆಹಾಕಿತು.
207 ರನ್ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ನಾಯಕ ಶುಭ್ಮನ್ ಗಿಲ್ ಕೇವಲ 8 ರನ್ಗಳಿಸಿ ಔಟಾದರೆ, ವೃದ್ದಿಮಾನ್ ಸಾಹ 21 ರನ್ಗಳಿಸಿ ವಿಕೆಟ್ ಒಪ್ಪಿಸಿದರು.
ಇನ್ನು ವಿಜಯ್ ಶಂಕರ್ 12 ರನ್ಗಳಿಸಿ ನಿರ್ಗಮಿಸಿದರೆ, ಡೇವಿಡ್ ಮಿಲ್ಲರ್ 21 ರನ್ಗಳಿಸಿ ಹೊರ ನಡೆದರು. ಪರಿಣಾಮ ಕೊನೆಯ 6 ಓವರ್ಗಳಲ್ಲಿ ಗುಜರಾತ್ ಟೈಟಾನ್ಸ್ ತಂಡಕ್ಕೆ 97 ರನ್ಗಳ ಅವಶ್ಯಕತೆಯಿತ್ತು.
ಈ ಹಂತದಲ್ಲಿ ಸಾಯಿ ಸುದರ್ಶನ್ (31) ಹಾಗೂ ಒಮರ್ಝಾಹಿ (11) ವಿಕೆಟ್ ಒಪ್ಪಿಸಿದರು. ಆ ಬಳಿಕ ಬಂದ ರಶೀದ್ ಖಾನ್ 1 ರನ್ಗಳಿಸಿ ಬಂದ ವೇಗದಲ್ಲೇ ಪೆವಿಲಿಯನ್ಗೆ ಹಿಂತಿರುಗಿದರು.
ಅಂತಿಮವಾಗಿ ಗುಜರಾತ್ ಟೈಟಾನ್ಸ್ ತಂಡವು 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 143 ರನ್ ಕಲೆಹಾಕಲಷ್ಟೇ ಶಕ್ತರಾದರು. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡವು 63 ರನ್ಗಳ ಭರ್ಜರಿ ಜಯ ಸಾಧಿಸಿತು. ಸಿಎಸ್ಕೆ ಪರ ತುಷಾರ್ ದೇಶಪಾಂಡೆ, ಮುಸ್ತಫಿಜುರ್ ರೆಹಮಾನ್ ಹಾಗೂ ದೀಪಕ್ ಚಹರ್ ತಲಾ 2 ವಿಕೆಟ್ ಕಬಳಿಸಿ ಮಿಂಚಿದರು.
- ಗುಜರಾತ್ ಟೈಟಾನ್ಸ್ ಪ್ಲೇಯಿಂಗ್ 11: ಶುಭ್ಮನ್ ಗಿಲ್ (ನಾಯಕ), ವೃದ್ಧಿಮಾನ್ ಸಾಹ (ವಿಕೆಟ್ ಕೀಪರ್), ಅಜ್ಮತುಲ್ಲಾ ಒಮರ್ಜಾಯ್, ಡೇವಿಡ್ ಮಿಲ್ಲರ್, ವಿಜಯ್ ಶಂಕರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಸಾಯಿ ಕಿಶೋರ್, ಉಮೇಶ್ ಯಾದವ್, ಮೋಹಿತ್ ಶರ್ಮಾ, ಸ್ಪೆನ್ಸರ್ ಜಾನ್ಸನ್.
- ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್ 11: ರುತುರಾಜ್ ಗಾಯಕ್ವಾಡ್ (ನಾಯಕ), ರಚಿನ್ ರವೀಂದ್ರ, ಅಜಿಂಕ್ಯ ರಹಾನೆ, ಡೇರಿಲ್ ಮಿಚೆಲ್, ಶಿವಂ ದುಬೆ, ರವೀಂದ್ರ ಜಡೇಜಾ, ಸಮೀರ್ ರಿಝ್ವಿ, ಎಂಎಸ್ ಧೋನಿ (ವಿಕೆಟ್ ಕೀಪರ್), ದೀಪಕ್ ಚಹರ್, ತುಷಾರ್ ದೇಶಪಾಂಡೆ, ಮುಸ್ತಾಫಿಜುರ್ ರೆಹಮಾನ್. ಮತೀಶ ಪತಿರಾಣ (ಇಂಪ್ಯಾಕ್ಟ್ ಪ್ಲೇಯರ್).
Source: https://tv9kannada.com/sports/cricket-news/ipl-2024-csk-vs-gt-highlights-zp-806362.html
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1
Views: 0