![](https://samagrasuddi.co.in/wp-content/uploads/2024/05/image-248.png)
ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್ನ 17ನೇ ಫೈನಲ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಚೊಚ್ಚಲ ಬಾರಿ ಪ್ರಶಸ್ತಿ ಎತ್ತಿಹಿಡಿದ ಅಂಗಣ, ಅಂದಿನ ನಾಯಕನ ಮಾರ್ಗದರ್ಶನದಲ್ಲಿ 10 ವರ್ಷಗಳ ಬಳಿಕ ಮತ್ತೆ ಅದೇ ಅಂಗಣದಲ್ಲಿ ಚಾಂಪಿಯನ್ ಆಗುವ ಹಂಬಲದಲ್ಲಿರುವ ಕೋಲ್ಕತ ನೈಟ್‌ರೈಡರ್ಸ್ ತಂಡ ಐಪಿಎಲ್ 17ನೇ ಆವೃತ್ತಿಯಲ್ಲಿ ಭಾನುವಾರ ಚೆಪಾಕ್ ಅಂಗಣದಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿದೆ.
ಬಹುನಿರೀಕ್ಷಿತ ಪಂದ್ಯಕ್ಕೆ ಚೆನ್ನೈನ ಚೆಪಾಕ್ ಕ್ರೀಡಾಂಗಣ ಆತಿಥ್ಯ ವಹಿಸಲಿದ್ದು, ರಣರೋಚಕ ಪೈಪೋಟಿ ನಿರೀಕ್ಷಿಸಲಾಗಿದೆ.
ಕೋಲ್ಕತಾ ಟೂರ್ನಿಯುದಕ್ಕೂ ಪ್ರಾಬಲ್ಯ ಸಾಧಿಸಿ, ಅಂಕಪಟ್ಟಿಯಲ್ಲಿ ಅಗ್ರಸ್ಥಾನಿಯಾಗಿದ್ದ ತಂಡ. ಕ್ವಾಲಿ ಫೈಯರ್-1ರಲ್ಲಿ ಸನ್ ರೈಸರ್ಸ್ ವಿರುದ್ಧವೇ ಗೆದ್ದು ನೇರ ವಾಗಿ ಫೈನಲ್‌ಗೇರಿತ್ತು. ಮತ್ತೊಂದೆಡೆ ತನ್ನ ಆಕ್ರಮಣಕಾರಿ ಬ್ಯಾಟಿಂಗ್ ಮೂಲಕವೇ ಎದುರಾಳಿಗಳ ನಿದ್ದೆಗೆಡಿಸಿದ್ದ ಸನ್‌ರೈಸರ್ಸ್, ಅಂಕಪಟ್ಟಿಯಲ್ಲಿ 2ನೇ ಸ್ಥಾನಿಯಾಗಿತ್ತು. ಕೆಕೆಆರ್ ವಿರುದ್ಧ ಸೋತರೂ 2ನೇ ಕ್ವಾಲಿಫೈಯರ್‌ನಲ್ಲಿ ರಾಜಸ್ಥಾನವನ್ನು ಮಣಿಸಿ ಪ್ರಶಸ್ತಿ ಸುತ್ತಿಗೇರಿದೆ.
ಇಲ್ಲಿಯವರೆಗೆ ಎರಡೂ ತಂಡಗಳ ಪಯಣ ಅತ್ಯುತ್ತಮವಾಗಿತ್ತು. ಹೀಗಾಗಿ ಉಭಯ ತಂಡಗಳ ನಡುವೆ ಬಿಗ್ ಫೈಟ್ ನಿರೀಕ್ಷೆಯಿದೆ. ಈಗಾಗಗಲೇ ಟಾಸ್ ಆಗಿದ್ದು, ಟಾಸ್ ಗೆದ್ದ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ್ದಾರೆ.
ಸನ್‌ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ 11 : ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ಐಡೆನ್ ಮಾರ್ಕ್ರಾಮ್, ನಿತೀಶ್ ರೆಡ್ಡಿ, ಹೆನ್ರಿಚ್ ಕ್ಲಾಸೆನ್ (WK), ಶಹಬಾಜ್ ಅಹ್ಮದ್, ಪ್ಯಾಟ್ ಕಮಿನ್ಸ್ (c), ಭುವನೇಶ್ವರ್ ಕುಮಾರ್, ಜಯದೇವ್ ಉನಾದ್ಕತ್, ಟಿ ನಟರಾಜನ್
KKR ಪ್ಲೇಯಿಂಗ್ 11: ರಹಮಾನುಲ್ಲಾ ಗುರ್ಬಾಜ್ (WK), ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (c), ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ವೈಭವ್ ಅರೋರಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ