IPL 2024, GT vs CSK: ಬೃಹತ್ ಟಾರ್ಗೆಟ್ ಬೆನ್ನಟ್ಟಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ನಿಗದಿತ 20 ಓವರ್‌ಗೆ 8 ವಿಕೆಟ್ ನಷ್ಟಕ್ಕೆ 196 ರನ್ ಗಳಿಸುವ ಮೂಲಕ 35 ರನ್ ಗಳಿಂದ ಸೋಲನ್ನಪ್ಪಿತು.

ಐಪಿಎಲ್ 2024ರ 56ನೇ ಪಂದ್ಯವು ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ (CSK vs GT) ನಡುವೆ ನಡೆಯಿತು. ಚೆನ್ನೈ ಸೂಪರ್ ಕಿಂಗ್ಸ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಆದರೆ ಈ ನಿರ್ಧಾರದ ಪರಿಣಾಮವನ್ನು ಆರಂಭದಿಂದಲೇ ಎದುರಿಸಬೇಕಾಯಿತು. ಗುಜರಾತ್ ಟೈಟಾನ್ಸ್ ಪರ ಓಪನರ್ ಆಗಿ ಕಣಕ್ಕಿಳಿದಿದ್ದ ಸಾಯಿ ಸುದರ್ಶನ್ ಮತ್ತು ಶುಭಮನ್ ಗಿಲ್ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭದಿಂದಲೇ ಬೌಂಡರಿ ಹಾಗೂ ಸಿಕ್ಸರ್ ಗಳ ಸುರಿಮಳೆಗೈದರು. ಇಬ್ಬರೂ ಬ್ಯಾಟ್ಸ್‌ಮನ್‌ಗಳು ಶತಕದ ಇನಿಂಗ್ಸ್ ಆಡಿದರು. ಸಾಯಿ ಸುದರ್ಶನ್ ಅವರ ಬ್ಯಾಟ್‌ನಿಂದ ಪಂದ್ಯದಲ್ಲಿ ಅದ್ಭುತ ಶತಕ ಕಂಡುಬಂದಿತು. ಅದೇ ವೇಳೆ ಗಿಲ್ ಕೂಡ ಶತಕ ಬಾರಿಸಿದರು. ಈ ಐಪಿಎಲ್‌ನಲ್ಲಿ ಆರಂಭಿಕ ಶತಕ ಬಾರಿಸಿದ ಮೊದಲ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಮೂಲಕ ಗುಜರಾತ್ ಟೈಟನ್ಸ್ ತಂಡವು ನಿಗದಿತ 20 ಓವರ್‌ಗೆ 3 ವಿಕೆಟ್ ನಷ್ಟಕ್ಕೆ 231 ರನ್ ಗಳಿಸಿತು. ಈ ಬೃಹತ್ ಟಾರ್ಗೆಟ್ ಬೆನ್ನಟ್ಟಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ನಿಗದಿತ 20 ಓವರ್‌ಗೆ 8 ವಿಕೆಟ್ ನಷ್ಟಕ್ಕೆ 196 ರನ್ ಗಳಿಸುವ ಮೂಲಕ 35 ರನ್ ಗಳಿಂದ ಸೋಲನ್ನಪ್ಪಿತು.
ಬ್ಯಾಟಿಂಗ್‌ನಲ್ಲಿ ಮುಗ್ಗರಿಸಿದ ಚೆನ್ನೈ:
ಈ ಬೃಹತ್ ಟಾರ್ಗೆಟ್ ಬೆನ್ನಟ್ಟಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಆರಂಭದಲ್ಲಿಯೇ ಆಘಾತ ಎದುರಾಯಿತು. ಅಜಿಂಕ್ಯಾ ರಹಾನೆ 1 ರನ್, ರಚಿನ್ ರವೀಂದ್ರ 1 ರನ್, ರುತುರಾಜ್ ಗಾಯಕ್ವಾಡ್ ಶೂನ್ಯಕ್ಕೆ ಔಟ್ ಆದರು. ಡ್ಯಾರೆಲ್ ಮಿಚೆಲ್ 34 ಎಸೆತದಲ್ಲಿ 3 ಸಿಕ್ಸ್ 7 ಫೋರ್ ಮೂಲಕ 63 ರನ್ ಸಿಡಿಸಿ ಅಬ್ಬರಿಸಿದರು. ಇವರಿಗೆ ಉತ್ತಮ ಸಾಥ್ ನೀಡಿದ ಮೋಯಿನ್ ಅಲಿ ಸಹ 36 ಎಸೆತದಲ್ಲಿ 4 ಸಿಕ್ಸ್ ಮತ್ತು4 ಪೋರ್ ಮೂಲಕ 56 ರನ್ ಸಿಡಿಸಿದರು.
ಅಬ್ಬರಿಸಿದ ಗಿಲ್ – ಸುದರ್ಶನ್:
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟನ್ಸ್ ತಂಡವು ನಿಗದಿತ 20 ಓವರ್‌ಗೆ 3 ವಿಕೆಟ್ ನಷ್ಟಕ್ಕೆ 231 ರನ್ ಗಳಿಸಿತು. ಗುಜರಾತ್ ಟೈಟಾನ್ಸ್ ಪರ ಸಾಯಿ ಸುದರ್ಶನ್ ಅಪಾಯಕಾರಿ ಬ್ಯಾಟಿಂಗ್ ಪ್ರದರ್ಶಿಸಿ 51 ಎಸೆತಗಳಲ್ಲಿ 103 ರನ್ ಗಳಿಸಿದರು. ಅವರ ಇನ್ನಿಂಗ್ಸ್‌ನಲ್ಲಿ ಅವರು 5 ಬೌಂಡರಿ ಮತ್ತು 7 ಸಿಕ್ಸರ್‌ಗಳನ್ನು ಹೊಡೆದರು. ದೇಶಿಯ ಕ್ರಿಕೆಟ್‌ನಲ್ಲಿ ತಮಿಳುನಾಡು ಪರ ಆಡುತ್ತಿರುವ ಸಾಯಿ ಸುದರ್ಶನ್ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್ ಆಗಿ ಭರ್ಜರಿಯಾಗಿ ಬ್ಯಾಟಿಂಗ್ ಮಾಡಿದರು. 2022ರ ಐಪಿಎಲ್ ಸಮಯದಲ್ಲಿ ಸುದರ್ಶನ್ ಮೊದಲ ಬಾರಿಗೆ ಬೆಳಕಿಗೆ ಬಂದರು. ಗುಜರಾತ್ ಟೈಟಾನ್ಸ್ ಪರ ಆಡುವಾಗ ಅವರು ಐಪಿಎಲ್‌ನಂತಹ ದೊಡ್ಡ ವೇದಿಕೆಯಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಮಿಂಚಿದ್ದಾರೆ.
ಶುಭಮನ್ ಗಿಲ್ ಕೂಡ ಅತ್ಯುತ್ತಮ ಫಾರ್ಮ್‌ನಲ್ಲಿ ಕಾಣಿಸಿಕೊಂಡರು. ಅಮೋಘ ಶತಕವನ್ನೂ ಗಳಿಸಿದರು. ಗಿಲ್ ನಾಯಕತ್ವದ ಇನ್ನಿಂಗ್ಸ್ ಆಡುತ್ತಿರುವುದು ಕಂಡುಬಂದಿತು. ಗಿಲ್ 55 ಎಸೆತಗಳಲ್ಲಿ 104 ರನ್ ಗಳಿಸಿದರು. ತುಷಾರ್ ದೇಶಪಾಂಡೆ ಎಸೆತದಲ್ಲಿ ಬಿಗ್ ಶಾಟ್ ಆಡುತ್ತಿರುವಾಗ ಗಿಲ್ ರವೀಂದ್ರ ಜಡೇಜಾಗೆ ಕ್ಯಾಚ್ ನೀಡಿ ಔಟ್ ಆದರು. ಇದು ಐಪಿಎಲ್‌ನಲ್ಲಿ ಗಿಲ್ ಅವರ ನಾಲ್ಕನೇ ಶತಕವಾಗಿದೆ. ಇದಕ್ಕೂ ಮೊದಲು, ಐಪಿಎಲ್‌ನ ಒಂದು ಇನ್ನಿಂಗ್ಸ್‌ನಲ್ಲಿ ಇಬ್ಬರು ಬ್ಯಾಟ್ಸ್‌ಮನ್‌ಗಳು ಶತಕ ಗಳಿಸಿದಾಗ ಇದು ಕೇವಲ ಎರಡು ಬಾರಿ ಸಂಭವಿಸಿದೆ.
2016ರಲ್ಲಿ ಗುಜರಾತ್ ಲಯನ್ಸ್ ವಿರುದ್ಧ ವಿರಾಟ್ ಕೊಹ್ಲಿ ಹಾಗೂ ಎಬಿ ಡಿವಿಲಿಯರ್ಸ್ ಶತಕ ಸಿಡಿಸಿದ್ದರು. ಅದೇ ಸಮಯದಲ್ಲಿ, 2019ರಲ್ಲಿ, ಸನ್‌ರೈಸರ್ಸ್ ಹೈದರಾಬಾದ್‌ಗಾಗಿ ಆರಂಭಿಕರಾದ ಡೇವಿಡ್ ವಾರ್ನರ್ ಮತ್ತು ಜಾನಿ ಬೈರ್‌ಸ್ಟೋವ್ ಶತಕಗಳನ್ನು ಗಳಿಸಿದರು. ಅಲ್ಲದೇ ಈ ಜೋಡಿ ಆರಂಭಿಕರಾಗಿ ಕಣಕ್ಕಿಳಿದು ಬರೋಬ್ಬರಿ 210 ರನ್‌ಗಳ ಬೃಹತ್ ಮೊತ್ತದ ಜೊತೆಯಾಟವಾಡಿದರು.
ಶುಭಮನ್ ಗಿಲ್ ಕೂಡ ಅತ್ಯುತ್ತಮ ಫಾರ್ಮ್‌ನಲ್ಲಿ ಕಾಣಿಸಿಕೊಂಡರು. ಅಮೋಘ ಶತಕವನ್ನೂ ಗಳಿಸಿದರು. ಗಿಲ್ ನಾಯಕತ್ವದ ಇನ್ನಿಂಗ್ಸ್ ಆಡುತ್ತಿರುವುದು ಕಂಡುಬಂದಿತು. ಗಿಲ್ 55 ಎಸೆತಗಳಲ್ಲಿ 104 ರನ್ ಗಳಿಸಿದರು. ತುಷಾರ್ ದೇಶಪಾಂಡೆ ಎಸೆತದಲ್ಲಿ ಬಿಗ್ ಶಾಟ್ ಆಡುತ್ತಿರುವಾಗ ಗಿಲ್ ರವೀಂದ್ರ ಜಡೇಜಾಗೆ ಕ್ಯಾಚ್ ನೀಡಿ ಔಟ್ ಆದರು. ಇದು ಐಪಿಎಲ್‌ನಲ್ಲಿ ಗಿಲ್ ಅವರ ನಾಲ್ಕನೇ ಶತಕವಾಗಿದೆ. ಇದಕ್ಕೂ ಮೊದಲು, ಐಪಿಎಲ್‌ನ ಒಂದು ಇನ್ನಿಂಗ್ಸ್‌ನಲ್ಲಿ ಇಬ್ಬರು ಬ್ಯಾಟ್ಸ್‌ಮನ್‌ಗಳು ಶತಕ ಗಳಿಸಿದಾಗ ಇದು ಕೇವಲ ಎರಡು ಬಾರಿ ಸಂಭವಿಸಿದೆ.